ಬೃಜ್ ಭೂಷಣ್ ಬಂಧನಕ್ಕೆ ಒತ್ತಾಯ: 'ನೈಜ ಹೋರಾಟಗಾರರ ವೇದಿಕೆ'ಯಿಂದ ಪ್ರತಿಭಟನೆ

ಬೆಂಗಳೂರು, ಮೇ.3: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ದಿಲ್ಲಿಯ ಜಂತರ್ ಮಂತರ್ ನಲ್ಲಿ ಭಾರತ ಕುಸ್ತಿ ಫೆಡರೇಶನ್ ಅಧ್ಯಕ್ಷ ಬೃಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳೆಯರು ಧರಣಿ ನಡೆಸುತ್ತಿದ್ದು, ಈವರೆಗೂ ಆರೋಪಿ ಬಂಧನವಾಗದ ಕಾರಣ ಪೊಲೀಸರ ನಡೆಯನ್ನು ಪ್ರಶ್ನಿಸಿರುವ ನೈಜ ಹೋರಾಟಗಾರರ ವೇದಿಕೆಯು ಕೂಡಲೇ ಬೃಜ್ ಭೂಷಣ್ ಶರಣ್ ಸಿಂಗ್‍ರ ಬಂಧಿಸುವಂತೆ ಒತ್ತಾಯಿಸಿದೆ.
ಸರಕಾರ ಮಹಿಳೆಯರ ಮೇಲೆ ದೌರ್ಜನ್ಯ ಎಸಗುವವರ ಪರವಾಗಿ ನಿಂತಿದೆ ಎಂದು ಆರೋಪಿಸಿ ಬುಧವಾರ ಬೆಂಗಳೂರು ನಗರದ ಕಂಠೀರವ ಕ್ರೀಡಾಂಗಣದ ಮುಖ್ಯದ್ವಾರದಲ್ಲಿ ಹಿರಿಯ ಹೋರಾಟಗಾರ ಟಿ.ನರಸಿಂಹಮೂರ್ತಿ, ಸಾಮಾಜಿಕ ಕಾರ್ಯಕರ್ತರಾದ ಎಚ್.ಎಂ.ವೆಂಕಟೇಶ್, ಮಲ್ಲು ಕುಂಬಾರ್, ಸುರೇಶ್ ಸೇರಿದಂತೆ ಹಲವರು ಪ್ರತಿಭಟಿಸಿದರು.
.jpeg)



Next Story