ಮಹಿಳೆ ಆತ್ಮಹತ್ಯೆ

ಬೈಂದೂರು, ಮೇ 3: ಅನಾರೋಗ್ಯದಿಂದ ಬಳಲುತ್ತಿದ್ದ ಯಡ್ತರೆ ಗ್ರಾಮದ ಮುಲ್ಲಿಮನೆ ನಿವಾಸಿ ಭಾಗೀರಥಿ (50) ಎಂಬವರು ಮಾನಸಿಕ ಖಿನ್ನೆತೆಗೆ ಒಳಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಮೇ 2ರಂದು ಮಧ್ಯಾಹ್ನ ಮನೆಯ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story