244 ನ್ಯಾಯಾಧೀಶರ ವರ್ಗಾವಣೆ: ಮೇ 22ರಿಂದ ವರ್ಗಾವಣೆ ಆದೇಶ ಅನ್ವಯ

ಬೆಂಗಳೂರು, ಮೇ 3: ಆರು ಮಂದಿ ಜಿಲ್ಲಾ ನ್ಯಾಯಾಧೀಶರು ಸೇರಿ 244 ಮಂದಿಯನ್ನು ವಿವಿಧ ಹುದ್ದೆಗಳಿಗೆ ವರ್ಗಾವಣೆ ಮಾಡಿ ಹೈಕೋರ್ಟ್ ಆದೇಶಿಸಿದೆ. ಮೇ 22ರಿಂದ ವರ್ಗಾವಣೆ ಆದೇಶ ಅನ್ವಯವಾಗಲಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಹೈಕೋರ್ಟ್ ರಿಜಿಸ್ಟ್ರಾರ್ ಗಳು, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿವಿಲ್ ನ್ಯಾಯಾಧೀಶರನ್ನು ಹೈಕೋರ್ಟ್ ಆದೇಶದ ಅನುಸಾರ ವರ್ಗಾವಣೆ ಮಾಡಲಾಗಿದೆ.
47 ಮಂದಿಯನ್ನು ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ಹುದ್ದೆಯಿಂದ ಜಿಲ್ಲಾ ನ್ಯಾಯಾಧೀಶರ ಹುದ್ದೆಗೆ, 119 ಹಿರಿಯ ಸಿವಿಲ್ ನ್ಯಾಯಾಧೀಶರನ್ನು ವಿವಿಧ ಹುದ್ದೆಗಳಿಗೆ, 11 ಮಂದಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಹುದ್ದೆಗೆ ಹಾಗೂ 61 ಸಿವಿಲ್ ನ್ಯಾಯಾಧೀಶರನ್ನು ವಿವಿಧ ಹುದ್ದೆಗಳಿಗೆ ವರ್ಗಾವಣೆ ಮಾಡಲಾಗಿದೆ.
Next Story