ಮಣಿಪುರದಲ್ಲಿ ಹಿಂಸಾಚಾರ ನಿಯಂತ್ರಣಕ್ಕೆ ಸೇನೆ, ಅಸ್ಸಾಂ ರೈಫಲ್ಸ್ ಗೆ ಬುಲಾವ್

ಇಂಫಾಲ: ಪರಿಶಿಷ್ಟ ಪಂಗಡದ ಸ್ಥಾನಮಾನದ ಕುರಿತು ನ್ಯಾಯಾಲಯದ ಆದೇಶದ ವಿರುದ್ಧ ಬುಡಕಟ್ಟು ಗುಂಪುಗಳು ನಡೆಸುತ್ತಿರುವ ಪ್ರತಿಭಟನೆಯ ನಡುವೆ ಮಣಿಪುರದಲ್ಲಿ ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಸೇನೆಯು ಇಂದು ಧ್ವಜ ಮೆರವಣಿಗೆ ನಡೆಸಿತು.
ಇಂಫಾಲ್, ಚುರಾಚಂದ್‌ಪುರ ಹಾಗೂ ಕಾಂಗ್‌ಪೋಕ್ಪಿಯಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ ನಿನ್ನೆ ರಾತ್ರಿ ಮಣಿಪುರದ ಎಂಟು ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಯಿತು. ಮಣಿಪುರ ಸರಕಾರ ರಾಜ್ಯದಲ್ಲಿ ಮೊಬೈಲ್ ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಿದೆ.
ಹೆಚ್ಚುತ್ತಿರುವ ಹಿಂಸಾಚಾರವನ್ನು ನಿಯಂತ್ರಿಸಲು ಸೇನೆ ಮತ್ತು ಅಸ್ಸಾಂ ರೈಫಲ್ಸ್‌ಗೆ ಬುಲಾವ್ ನೀಡಲಾಗಿದೆ.
ಪರಿಸ್ಥಿತಿಯನ್ನು ಹತೋಟಿಯಲ್ಲಿಡಲು ಸೇನೆ ಹಾಗೂ ಅಸ್ಸಾಂ ರೈಫಲ್ಸ್‌ನಿಂದ ಇಂದು ಧ್ವಜ ಮೆರವಣಿಗೆ ನಡೆಸಲಾಯಿತು. ಹಿಂಸಾಚಾರದ ನಂತರ ರಾಜ್ಯದ ವಿವಿಧ ಹಿಂಸಾಪೀಡಿತ ಪ್ರದೇಶಗಳಲ್ಲಿನ ಸುಮಾರು 4,000 ಜನರಿಗೆ ಸೇನಾ ಶಿಬಿರಗಳು ಹಾಗೂ ಸರಕಾರಿ ಕಚೇರಿ ಆವರಣದಲ್ಲಿ ಆಶ್ರಯ ನೀಡಲಾಯಿತು.
"ನನ್ನ ರಾಜ್ಯ ಮಣಿಪುರ ಹೊತ್ತಿ ಉರಿಯುತ್ತಿದೆ, ದಯವಿಟ್ಟು ಸಹಾಯ ಮಾಡಿ" ಎಂದು ಬಾಕ್ಸಿಂಗ್ ಸ್ಟಾರ್ ಮೇರಿ ಕೋಮ್ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮಾಧ್ಯಮ ಸಂಸ್ಥೆಗಳನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ.
My state Manipur is burning, kindly help @narendramodi @PMOIndia @AmitShah @rajnathsingh @republic @ndtv @IndiaToday pic.twitter.com/VMdmYMoKqP
— M C Mary Kom OLY (@MangteC) May 3, 2023







