Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯಕ್ಕೆ ಪದೇ ಪದೇ ಬರುತ್ತಿರುವ...

ರಾಜ್ಯಕ್ಕೆ ಪದೇ ಪದೇ ಬರುತ್ತಿರುವ ಪ್ರಧಾನಿ ಮೋದಿ ಅಭಿವೃದ್ಧಿ ಕುರಿತು ಮಾತನಾಡುತ್ತಿಲ್ಲ: ಎಚ್.ವಿಶ್ವನಾಥ್

4 May 2023 1:43 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ರಾಜ್ಯಕ್ಕೆ ಪದೇ ಪದೇ ಬರುತ್ತಿರುವ ಪ್ರಧಾನಿ ಮೋದಿ ಅಭಿವೃದ್ಧಿ ಕುರಿತು ಮಾತನಾಡುತ್ತಿಲ್ಲ: ಎಚ್.ವಿಶ್ವನಾಥ್

ಮಡಿಕೇರಿ ಮೇ 4 : ನರೇಂದ್ರ ಮೋದಿ ಅವರು ಈ ರಾಷ್ಟ್ರದ ಪ್ರಧಾನಿಯಾಗಿದ್ದು, ಅವರನ್ನು ಗೌರವಿಸುತ್ತೇನೆ. ಆದರೆ, ಅವರ ಮನಸು ಬದಲಾವಣೆಯಾಗಬೇಕು, ಭಾರತದಷ್ಟು ವಿಶಾಲವಾಗಬೇಕು. ಇಂದು ರಾಜ್ಯಕ್ಕೆ ಪದೇ ಪದೇ ಬರುತ್ತಿರುವ ಮೋದಿ ಅವರು, ಮುಚ್ಚುವ ಸ್ಥಿತಿಯಲ್ಲಿರುವ 6 ಸಾವಿರ ಸರ್ಕಾರಿ ಶಾಲೆಗಳು, ಏಕೋಪಾಧ್ಯಾಯ ಇರುವ ಒಂದು ಸಾವಿರ ಪ್ರೌಢ ಶಾಲೆಗಳು ಮತ್ತು ಅಭಿವೃದ್ಧಿಯ ಬಗ್ಗೆ ಮಾತನಾಡಬೇಕು. ಚುನಾವಣೆಯ ಬಗೆಗಿನ ಹೆದರಿಕೆಯಿಂದ ಮೋದಿ ಅವರು ರಾಜ್ಯಕ್ಕೆ ಬರುತ್ತಿದ್ದಾರೆಯೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಪ್ರಶ್ನಿಸಿದ್ದಾರೆ. 

:::' ಗಲ್ಲ್ಲಿ ಗಲ್ಲಿಗೆ ಬಂದಿಲ್ಲ'

ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಪದೇ ಪದೇ ಇಂದು ಭೇಟಿ ನೀಡುತ್ತಿದ್ದು, ಈ ಅವಧಿಯಲ್ಲಿ ಅವರು ಅನ್ನ, ಅಕ್ಷರ, ಆರೋಗ್ಯ, ಉದ್ಯೋಗ, ಆರ್ಥಿಕ ನೀತಿಗಳ ಬಗ್ಗೆ ಮಾತನಾಡಿಲ್ಲ. ರಾಷ್ಟ್ರದ ಪ್ರಧಾನಿಗಳಾಗಿದ್ದವರಲ್ಲಿ ಯಾರೊಬ್ಬರು ಈ ರೀತಿ ಗಲ್ಲಿ ಗಲ್ಲಿಗೆ ಬಂದಿಲ್ಲವೆಂದು ಟೀಕಿಸಿದರು.

ಚುನಾವಣಾ ಹಂತದಲ್ಲಿ ರಾಜಕೀಯ ಪಕ್ಷಗಳು ಉಚಿತ ಕೊಡುಗೆಗಳ ಕುರಿತು ಮಾತನಾಡುವುದಕ್ಕಿಂತ ಉಚಿತ ಶಿಕ್ಷಣ ಮತ್ತು ಆರೋಗ್ಯ ಕಾರ್ಯಕ್ರಮಗಳ ಕುರಿತು ಮಾತನಾಡಬೇಕು. ವಿವಿಧ ಕೊಡುಗೆಗಳನ್ನು ಉಚಿತವಾಗಿ ನೀಡಲು ಹಣ ಎಲ್ಲಿದೆ ಪ್ರಶ್ನಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಹಂತದಲ್ಲಿ ಎಲ್ಲಾ ಪಕ್ಷಗಳು ಉಚಿತ ಕೊಡುಗೆಗಳ ಬಗ್ಗೆ ಮಾತನಾಡಿವೆ. ಇವುಗಳನ್ನು ಕಾರ್ಯಗತಗೊಳಿಸಲು ಹಣವೆಲ್ಲಿದೆಯೆಂದು ಪ್ರಶ್ನಿಸಿದ ಅವರು, ಬೊಮ್ಮಾಯಿ ಅವರು ತಾವು 3.17 ಲಕ್ಷ ಕೋಟಿಯ ಬಜೆಟ್ ತಮ್ಮದೆಂದು ಹೇಳಿಕೊಳ್ಳುತ್ತಾರೆ. ಇದರಲ್ಲಿ 1.76 ಲಕ್ಷ ಕೋಟಿ ವೇತನಕ್ಕೆ ಬಳಕೆಯಾಗಿ ಹೋಗುತ್ತದೆ, ಇದರ ಮೇಲೆ 7 ಸಾವಿರ ಕೋಟಿ ಸಾಲವಿದ್ದು, ಉಚಿತ ಕೊಡುಗೆಗಳಿಗೆ ಹಣವೆಲ್ಲಿದೆಯೆಂದು ಪ್ರಶ್ನಿಸಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಇಂದು ತಾನು ನಾಮ ನಿರ್ದೇಶಿತ ವಿಧಾನ ಪರಿಷತ್‍ನ ಸದಸ್ಯನಾಗಿದ್ದು, ಯಾವುದೇ ಪಕ್ಷದಲ್ಲಿ ಇಲ್ಲದ ಸ್ವತಂತ್ರ ವ್ಯಕ್ತಿಯಾಗಿದ್ದೇನೆ ಮತ್ತು ಕಾಂಗ್ರೆಸ್‍ನ್ನು ಬೆಂಬಲಿಸುತ್ತಿದ್ದೇನೆ ಎಂದರು.

 ಪ್ರಜಾತಂತ್ರ ವ್ಯವಸ್ಥೆಯಡಿ ಯಾರು ಯಾವುದೇ ಪಕ್ಷದಲ್ಲಿರಲು ಅವಕಾಶವಿದೆ. ಅದರಂತೆ ತಾನು ವಿವಿಧ ಪಕ್ಷಗಳಲ್ಲಿ ಇದ್ದೆನಾದರು, ಆ ಎಲ್ಲಾ ಪಕ್ಷಗಳಲ್ಲಿ ತನ್ನ ಅನಿಸಿಕೆಗಳನ್ನು ದಿಟ್ಟವಾಗಿ ಮುಂದಿಟ್ಟಿದ್ದೇನೆ. ತನ್ನ ಚಿಂತನೆಗಳಿಗೆ ಸರಿ ಹೊಂದಲಿಲ್ಲ ಎನ್ನುವ ಕಾರಣಕ್ಕಾಗಿ ಆಯಾ ಪಕ್ಷಗಳಿಂದ ಹೊರ ಹೋಗಿದ್ದೇನೆಂದು ಸ್ಪಷ್ಟಪಡಿಸಿದರು.

► ಮುಸ್ಲಿಮರಿಗೇಕೆ ಟಿಕೆಟ್ ನೀಡಿಲ್ಲ 

 ರಾಷ್ಟ್ರದ ಸಂವಿಧಾನ, ಅದನ್ನು ರಚಿಸಿದ ಡಾ.ಅಂಬೇಡ್ಕರ್ ಅವರನ್ನು ಗೌರವಿಸುವುದಾಗಿ ಹೇಳಿಕೊಳ್ಳುವ ಬಿಜೆಪಿ, ಚುನಾವಣೆಯಲ್ಲಿ ಅಲ್ಪಸಂಖ್ಯಾತ ಸಮೂಹದ ಮುಸ್ಲಿಮರಿಗೆ ಯಾಕೆ ಟಿಕೆಟ್ ನೀಡಿಲ್ಲವೆಂದು ವಿಶ್ವನಾಥ್ ಪ್ರಶ್ನಿಸಿದರು.

'ಬಜರಂಗದಳ ಮತ್ತು ಆಂಜನೇಯ ಬೇರೆ ಬೇರೆ '

 ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ನಿಷೇಧಿಸುವ ಅಂಶ ಪ್ರಸ್ತಾಪಿಸಿದ ಬಗ್ಗೆ ಕೇಳಿದ ಪ್ರಶ್ನೆಗೆ, ಭಜರಂಗದಳ ಮತ್ತು ಆಂಜನೇಯ ಬೇರೆ ಬೇರೆ. ಭಜರಂಗದಳ ಎನ್ನುವುದು ಒಂದು ಸಂಘಟನೆ, ಈ ಸಂಘಟನೆ ನೈತಿಕ ಪೊಲೀಸ್ ಗಿರಿಯಲ್ಲಿ ನಿರತವಾದ ಸಂಘಟನೆಯೆಂದು ಆರೋಪಿಸಿದರು. 

'ಮೀಸಲಾತಿಯನ್ನು ಹಳ್ಳ ಹಿಡಿಸಲಾಗಿದೆ' 

ರಾಜ್ಯ ಬಿಜೆಪಿ ಸರ್ಕಾರ ಮೀಸಲಾತಿಯನ್ನು ಹಳ್ಳ ಹಿಡಿಸಿದೆಯೆಂದು ಟೀಕಿಸಿದ ವಿಶ್ವನಾಥ್, ಯಾವುದೇ ಮೀಸಲಾತಿಯನ್ನು ಒದಗಿಸುವುದಕ್ಕೂ ಮೊದಲು ಅದರ ಅಧ್ಯಯನಕ್ಕೆ ಆಯೋಗ ರಚನೆಯಾಗಬೇಕು. ಅದು ನೀಡುವ ವರದಿಯಂತೆ ಮೀಸಲಾತಿಗೆ ಕ್ರಮ ಕೈಗೊಳ್ಳಬೇಕು. ಅದಾವುದನ್ನು ಮಾಡದ ಸರ್ಕಾರ ಒಟ್ಟು ಮೀಸಲಾತಿಯನ್ನು ಹಳ್ಳ ಹಿಡಿಸಿದೆಯೆಂದು ಲೇವಡಿ ಮಾಡಿದರು.

ಪ್ರಸ್ತುತ ಚುನಾವಣೆಯಲ್ಲಿ ಸುಧಾರಣೆಗೋಸ್ಕರ ಜನತೆ ಬದಲಾವಣೆಯನ್ನು ಬಯಸಿದ್ದಾರೆ ಎಂದು ತಿಳಿಸಿದ ಅವರು, ಕೊಡಗಿನ ಎರಡು ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳಾದ ಡಾ.ಮಂತರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರನ್ನು ಜಿಲ್ಲೆಯ ಜನತೆ ಗೆಲ್ಲಿಸುವ ಮೂಲಕ ಹೊಸ ಗಾಳಿ ಬೀಸಲಿ ಎಂದರು.

 ಕೆಪಿಸಿಸಿ ಕಾರ್ಯದರ್ಶಿ ಹೆಚ್.ಎಸ್.ಚಂದ್ರಮೌಳಿ ಮಾತನಾಡಿ, ಕೊಡಗಿನಲ್ಲಿ ರಾಜಕೀಯ ಬದಲಾವಣೆಯ ತಂಗಾಳಿ ಬೀಸುತ್ತಿದೆ. ಸುದೀರ್ಘ ಆಡಳಿತ ನಡೆಸಿದವರಿಗೆ ವಿರಾಮ ನೀಡಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜನತೆ ಆಶೀರ್ವದಿಸಬೇಕೆಂದು ಮನವಿ ಮಾಡಿದರು.

 ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್, ರಾಜ್ಯ ಉಪಾಧ್ಯಕ್ಷ ಪಿ.ಸಿ.ಹಸೈನಾರ್ ಹಾಗೂ ಪ್ರಮುಖರಾದ ಕೆ.ಎಂ.ಲೋಕೇಶ್ ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X