ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ

ಉಡುಪಿ, ಮೇ 4: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಸುಸ್ಥಿರ ಭವಿಷ್ಯಕ್ಕಾಗಿ ಹಸಿರು ನಗರಗಳು ಎಂಬ ವಿಷಯದ ಕುರಿತು ಪದವಿ ಮತ್ತು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಪ್ರಬಂಧ ಸಲ್ಲಿಸಲು ಜೂನ್ 1 ಕೊನೆಯ ದಿನವಾಗಿರುತ್ತದೆ.
ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಪ್ರಬಂಧ ಬರೆಯಲು ಅವಕಾಶ ಕಲ್ಪಿಸಲಾಗಿದ್ದು, ಪ್ರಬಂಧಗಳು 1000 ಪದಗಳನ್ನು ಮೀರುವಂತಿಲ್ಲ. ಪಿಡಿಎಫ್ ಫಾರ್ಮ್ಯಾಟ್‌ನಲ್ಲಿ ಪ್ರಬಂಧಗಳನ್ನು ಕಳುಹಿಸಬೇಕು. ಪ್ರಬಂಧದ ಜೊತೆಗೆ ಕಾಲೇಜಿನ ಗುರುತಿನ ಚೀಟಿಯನ್ನು ಸಲ್ಲಿಸಬೇಕು. ಸ್ಪರ್ಧೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಇ-ಸರ್ಟಿಫಿಕೇಟ್ ನೀಡಲಾಗುವುದು. ಸ್ಪರ್ಧೆಯ ವಿಜೇತರಿಗೆ ಪ್ರಥಮ ಬಹುಮಾನ 3,000 ರೂ, ದ್ವಿತೀಯ 2,000ರೂ ಹಾಗೂ ತೃತೀಯ ಬಹುಮಾನವಾಗಿ 1,000 ರೂ. ನಗದು ನೀಡಲಾಗುವುದು.
ಈ ಕುರಿತ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್- kstacademy.in- ಅಥವಾ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಜಿ.ಕೆ.ವಿ.ಕೆ. ಆವರಣ, ವಿದ್ಯಾರಣ್ಯಪುರ ಪೋಸ್ಟ್, ಬೆಂಗಳೂರು ದೂ.ಸಂಖ್ಯೆ: 080-29721550 ಅನ್ನು ಸಂಪರ್ಕಿಸಬಹುದು ಎಂದು ಅಕಾಡೆಮಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.