ಉಡುಪಿ: ಅಂಬಲಪಾಡಿ ಯಕ್ಷಗಾನ ಶಿಬಿರ ಸಮಾರೋಪ

ಉಡುಪಿ, ಮೇ 4: ಇಲ್ಲಿನ ಅಂಬಲಪಾಡಿಯ ಶ್ರೀ ಲಕ್ಷ್ಮೀಜನಾರ್ದನ ಯಕ್ಷಗಾನ ಕಲಾ ಮಂಡಳಿ, ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಹಯೋಗ ದೊಂದಿಗೆ ಅಂಬಲಪಾಡಿಯ ಕಂಬ್ಳಕಟ್ಟದಲ್ಲಿರುವ ಸಂಸ್ಥೆಯ ಜನಾರ್ದನ ಮಂಟಪ ದಲ್ಲಿ ಹತ್ತು ದಿನಗಳ ಕಾಲ ನಡೆಸಿದ ’ಯಕ್ಷಗಾನ ಶಿಬಿರ’ ಗುರುವಾರ ಮುಕ್ತಾಯಗೊಂಡಿತು.
ಶಿಬಿರದಲ್ಲಿ ಒಟ್ಟು ಆಸಕ್ತ 56 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಎಲ್ಲರಿಗೂ ಪ್ರಮಾಣ ಪತ್ರವನ್ನು ವಿತರಿಸಲಾುತು. ಸಂಸ್ಥೆಯ ಅಧ್ಯಕ್ಷ ಕೆ.ಅಜಿತ್ ಕುಮಾರ್ ಸ್ವಾಗತಿಸಿದರು. ನಿಕಟ ಪೂರ್ವ ಅಧ್ಯಕ್ಷ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ ಎಸ್.ವಿ.ಭಟ್, ಜತೆ ಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ಪ್ರಮಾಣ ಪತ್ರ ವಿತರಿಸಿದರು. ಸಂಸ್ಥೆಯಉಪಾಧ್ಯಕ್ಷ ಕೆ.ಜೆ. ಗಣೇಶ್, ಕೆ. ಜೆ. ಕೃಷ್ಣ ಹಾಗೂ ಗೋವಿಂದ ಭಂಡಾರಿ ಉಪಸ್ಥಿತರಿದ್ದರು. ಶಿಬಿರದ ನಿರ್ದೇಶಕರಾದ ಕೋಟ ನರಸಿಂಹ ತುಂಗರನ್ನು ಶಾಲು ಹೊದಿಸಿ ಗೌರಸಲಾಯಿತು. ಬಳಿಕ ವಿದ್ಯಾರ್ಥಿಗಳಿಂದ ಪೂರ್ವರಂಗದ ಪ್ರಾತ್ಯಕ್ಷಿಕೆ ಜರಗಿತು. ಮೇ 6ರಿಂದ ವಿದ್ಯಾರ್ಥಿಗಳಿಗೆ ಬಣ್ಣಗಾರಿಕೆ ಕಮ್ಮಟ ಜರಗಲಿದೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ.








