ಎಸ್‌ಡಿಪಿಐ ಅಭ್ಯರ್ಥಿಗಳ ಪರ ರಾಷ್ಟ್ರೀಯ ಅಧ್ಯಕ್ಷರ ಪ್ರಚಾರ

ಮಂಗಳೂರು: ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಝಿ ಗುರುವಾರ ದ.ಕ. ಜಿಲ್ಲೆಗೆ ಆಗಮಿಸಿದ್ದು, ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಿದರು.
ಗುರುವಾರ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಧ್ಯಕ್ಷರನ್ನು ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಸ್ವಾಗತಿಸಿ ಬಜ್ಪೆ ಪಟ್ಟಣದವರೆಗೆ ವಾಹನ ಜಾಥಾ ಮೂಲಕ ಕರೆ ತರಲಾಯಿತು.
ಈ ಸಂದರ್ಭ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೊ, ರಾಜ್ಯ ಕಾರ್ಯದರ್ಶಿ ಆನಂದ ಮಿತ್ತಬೈಲ್, ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ರಾಜ್ಯ ಸಮಿತಿ ಸದಸ್ಯ ಅಥಾವುಲ್ಲ ಜೋಕಟ್ಟೆ, ರಾಜ್ಯ ಚುನಾವಣಾ ಸಹ ಉಸ್ತುವಾರಿ ನವಾಝ್ ಉಳ್ಳಾಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಮಾಲ್ ಜೋಕಟ್ಟೆ, ಅಶ್ರಫ್ ಅಡ್ಡೂರು, ಜಿಲ್ಲಾ ಕಾರ್ಯದರ್ಶಿ ಸುಹೈಲ್ ಖಾನ್, ಮೂಡುಬಿದಿರೆ ಕ್ಷೇತ್ರಾಧ್ಯಕ್ಷ ಆಸಿಫ್ ಕೋಟೆಬಾಗಿಲು, ಕಾರ್ಯದರ್ಶಿ ನಿಸಾರ್ ಮರವೂರು ಮತ್ತಿತರರು ಉಪಸ್ಥಿತರಿದ್ದರು.
Next Story