Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಾಮಮಾರ್ಗದಲ್ಲಿ ಗೆಲ್ಲುವ ಬಿಜೆಪಿ ತಂತ್ರ...

ವಾಮಮಾರ್ಗದಲ್ಲಿ ಗೆಲ್ಲುವ ಬಿಜೆಪಿ ತಂತ್ರ ಯಶಸ್ವಿಯಾಗುವುದಿಲ್ಲ : ರಮಾನಾಥ ರೈ

4 May 2023 10:31 PM IST
share
ವಾಮಮಾರ್ಗದಲ್ಲಿ ಗೆಲ್ಲುವ ಬಿಜೆಪಿ ತಂತ್ರ ಯಶಸ್ವಿಯಾಗುವುದಿಲ್ಲ : ರಮಾನಾಥ ರೈ

ಬಂಟ್ವಾಳ: ವಾಮಮಾರ್ಗದಲ್ಲಿ ಗೆಲ್ಲುವ ಬಿಜೆಪಿ ತಂತ್ರಕ್ಕೆ ಈ ಬಾರಿ ಯಶಸ್ಸು ಸಿಗಲಾರದು ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಅವರು ಪುಂಜಾಲಕಟ್ಟೆ ಮತ್ತು ಪಿಲಾತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ  ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಕಳೆದ ಐದು ವರ್ಷಗಳಲ್ಲಿ ಬಿಜೆಪಿಯ ಅಭಿವೃದ್ಧಿ ಶೂನ್ಯವಾಗಿದೆ. ಜನರ ಮುಂದೆ ಮಾತನಾಡುವುದಕ್ಕೆ ಅವರ ಬಳಿ ವಿಷಯಗಳಿಲ್ಲ. ಹೀಗಾಗಿ ಈ ಬಾರಿ ಕೂಡ ಅವರು ಸುಳ್ಳು, ವದಂತಿಗಳ ಮೂಲಕವೇ ಚುನಾವಣೆ ಗೆಲ್ಲುವ ತಂತ್ರ ಹೂಡಿದ್ದಾರೆ. ಆದರೆ, ಜನರು ಬಿಜೆಪಿಯ ಇಂತಹ ಕುತಂತ್ರಗಳನ್ನು ಮೆಟ್ಟಿನಿಂತು ಕಾಂಗ್ರೆಸ್ ಅನ್ನು ಭಾರೀ ಬಹುಮತದಿಂದ ಗೆಲ್ಲಿಸಲಿದ್ದಾರೆ ಎಂದು ರೈ ಭರವಸೆ ವ್ಯಕ್ತಪಡಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ದೇವಸ್ಥಾನಗಳ ಜೀರ್ಣೋದ್ಧಾರ ಸಮಿತಿಗಳ ನೇತೃತ್ವ ನಾನು ವಹಿಸಿದ್ದೇನೆ. ಅನೇಕ ದೇವಸ್ಥಾನಗಳಿಗೆ ಧ್ವಜಸ್ಥಂಭ ನೀಡಿ ಸೇವೆ ಸಲ್ಲಿಸಿದ್ದೇನೆ. ಆದರೂ ನನ್ನ ವಿರುದ್ಧ ಸುಳ್ಳುಗಳನ್ನು ಹಬ್ಬಿಸುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ರೈ ತಿಳಿಸಿದರು.

ನ್ಯಾಯವಾದಿ, ಕೆಪಿಸಿಸಿ ಮುಖಂಡ, ನ್ಯಾಯವಾದಿ ಅಶ್ವನಿ ಕುಮಾರ್ ರೈ ಮಾತನಾಡಿ ರಮಾನಾಥ ರೈಗಳ ಅವಧಿಯಲ್ಲಿ ಬಡವರು, ಅಶಕ್ತರಿಗೆ ಸಾಕಷ್ಟು ಸೌಲಭ್ಯಗಳು ಸುಲಭವಾಗಿ ತಲುಪಿವೆ. ಸುಮಾರು 20,000ಕ್ಕೂ ಅಧಿಕ ಮಂದಿಗೆ ಹಕ್ಕು ಪತ್ರಗಳು ಸಿಕ್ಕಿವೆ. ಅಕ್ರಮ ಸಕ್ರಮ ಭೂಮಿ ಹಂಚಿಕೆಯು ಮಾಯಿಲಪ್ಪ ಸಾಲ್ಯಾನರ ಅಧ್ಯಕ್ಷತೆಯಲ್ಲಿ ನಿಷ್ಪಕ್ಷಪಾತವಾಗಿ, ಭ್ರಷ್ಟಾಚಾರ ರಹಿತವಾಗಿ ಹಂಚಲ್ಪಟ್ಟಿತ್ತು. ಆದರೆ, ಈಗ ಭೂಮಿ ಹಂಚಿಕೆಯ ವಿಷಯದಲ್ಲಿ ಯಾವ ರೀತಿಯ ಭ್ರಷ್ಟಾಚಾರ ನಡೆದಿದೆ ಎಂಬುದು ಬಂಟ್ವಾಳದ ಜನತೆಗೆ ತಿಳಿದಿದೆ ಎಂದು ಹೇಳಿದರು.

ಸಜ್ಜನಿಕೆಯ ರಾಜಕಾರಣಕ್ಕೆ ರಮಾನಾಥ ರೈಗಳು ಇಡೀ ರಾಜ್ಯಕ್ಕೆ ಹೆಸರಾದವರು. ಅವರ ಮನೆಗೆ ಯಾರೇ ಬಂದರೂ ವಿನಯ, ವಿದೇಯತೆಯಿಂದ ಕೆಲಸ ಮಾಡಿಕೊಡುತ್ತಾರೆ. ಅಧಿಕಾರ ಇಲ್ಲದಿದ್ದರೂ, ಅವರ ಮನೆಯಲ್ಲಿ ದಿನನಿತ್ಯ ನೂರಾರು ಮಂದಿ ಆಗಮಿಸಿ, ತಮಗೆ ಬೇಕಾದ ಕೆಲಸಗಳನ್ನು ಮಾಡಿಸಿಕೊಂಡು ಹೋಗುತ್ತಿರುತ್ತಾರೆ. ಇಂತಹ ಜನನಾಯಕನನ್ನು ಮತ್ತೊಮ್ಮೆ ಗೆಲ್ಲಿಸುವ ಮೂಲಕ, ಅವರಿಂದ ಕ್ಷೇತ್ರ ಹಾಗೂ ರಾಜ್ಯದ ಜನತೆಗೆ ಸೇವೆಯನ್ನು ಪಡೆಯುವ ಸೌಭಾಗ್ಯವನ್ನು ಮತದಾರ ಒದಗಿಸಿಕೊಡಬೇಕು ಎಂದು ಅವರು ವಿನಂತಿಸಿದರು.

ಮಂಗಳೂರು ಮಹಾನಗರ ಪಾಲಿಕೆ ಮಾಜಿ ಕಾರ್ಪೊರೇಟರ್ ಕವಿತಾ ಸನಿಲ್, ಕೆಪಿಸಿಸಿ ಮುಖಂಡ ರಾಜಶೇಖರ್ ಕೋಟ್ಯಾನ್, ಕೆಪಿಸಿಸಿ ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ, ಪಿಯೂಸ್ ಎಲ್. ರೊಡ್ರಿಗಸ್, ಪ್ರಮುಖರಾದ ಪದ್ಮಶೇಖರ್ ಜೈನ್, ಜನಾರ್ಧನ್ ಚೆಂಡ್ತಿಮಾರ್, ಬಿ.ಎಂ.ಅಬ್ಬಾಸ್ ಅಲಿ, ಮೋಹನ್ ಸಾಲ್ಯಾನ್, ಬಾಲಾಜಿ ರಾವ್ ಮತ್ತಿತರರು ಉಪಸ್ಥಿತರಿದ್ದರು. 

ಚುನಾವಣಾ ಕಚೇರಿಗೆ ಭೇಟಿ 

ಕೇರಳ ವಿಧಾನಸಭಾ ವಿಪಕ್ಷ ನಾಯಕ ರಮೇಶ್ ಚೆನ್ನಿತಲ, ಕಾಸರಗೋಡು ಸಂಸದ ರಾಜ್ ಮೋಹನ್ ಉನ್ನಿತಾನ್, ಕಾಸರಗೋಡು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹರ್ಷದ್ ವರ್ಕಾಡಿ ಬುಧವಾರ ರಮಾನಾಥ ರೈ ಅವರ ಬಿ.ಸಿ.ರೋಡ್ ನ ಚುನಾವಣಾ ಪ್ರಚಾರ ಕಚೇರಿಗೆ ಭೇಟಿ ನೀಡಿದರು. ರೈ ಅವರು ಚುನಾವಣೆಯಲ್ಲಿ ಭಾರೀ ಬಹುಮತದಿಂದ ಗೆದ್ದು ಬರಲಿ ಎಂದು ಈ ವೇಳೆ ರಮೇಶ್ ಚೆನ್ನಿತಲ ಹಾಗೂ ಇತರ ಮುಖಂಡರು ಹಾರೈಸಿದರು. ರೈಯವರ ಚುನಾವಣಾ ಪ್ರಚಾರದ ಕಾರ್ಯವೈಖರಿಯ ಬಗ್ಗೆ  ಮಾತುಕತೆ ನಡೆಸಿದರು.

share
Next Story
X