Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಸಂಪಾದಕೀಯ
  4. ದ್ವೇಷದ ಸಿದ್ಧಾಂತ ಇರುವವರೆಗೆ ವಿಷದ...

ದ್ವೇಷದ ಸಿದ್ಧಾಂತ ಇರುವವರೆಗೆ ವಿಷದ ಮಾತುಗಳಿಗೆ ಕೊನೆಯಿಲ್ಲ

5 May 2023 12:05 AM IST
share
ದ್ವೇಷದ ಸಿದ್ಧಾಂತ ಇರುವವರೆಗೆ ವಿಷದ ಮಾತುಗಳಿಗೆ ಕೊನೆಯಿಲ್ಲ

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ 

ಭಾರತದಾದ್ಯಂತ ದ್ವೇಷ ಭಾಷಣದ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್ ದ್ವೇಷ ಭಾಷಣದ ಪ್ರಕರಣಗಳಲ್ಲಿ ದೂರು ದಾಖಲಾಗದಿದ್ದರೂ ಸ್ವಯಂ ಪ್ರೇರಿತವಾಗಿ ಮೊಕದ್ದಮೆಯನ್ನು ದಾಖಲಿಸಿಕೊಂಡು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ. ದ್ವೇಷ ಭಾಷಣಗಳ ಬಗ್ಗೆ ಸುಪ್ರೀಂ ಕೋರ್ಟ್ ಎಷ್ಟು ಅಸಮಾಧಾನ ಹೊಂದಿದೆಯೆಂದರೆ ಮೊಕದ್ದಮೆಗಳನ್ನು ದಾಖಲಿಸುವಲ್ಲಿ ಆಗುವ ಯಾವುದೇ ವಿಳಂಬವನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಲಾಗುವುದು ಎಂದು ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್ ಮತ್ತು ಬಿ.ವಿ. ನಾಗರತ್ನಾ ಅವರನ್ನು ಒಳಗೊಂಡ ಪೀಠ ಎಚ್ಚರಿಕೆ ನೀಡಿದೆ.

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಜಾತ್ಯತೀತ ತತ್ವದ ತಳಹದಿಯ ಮೇಲೆ ನಿಂತಿದೆ.ಇದು ದ್ವೇಷ ಭಾಷಣ ಮಾಡುವವರಿಗೂ ಗೊತ್ತಿದೆ. ಆದರೂ ಸಾಮಾಜಿಕ ಶಾಂತಿಯನ್ನು ಕದಡುವ ಇಂತಹ ಮಾತುಗಳು ಕಾನೂನು ಮತ್ತು ಸುವ್ಯವಸ್ಥೆಗೆ ಸವಾಲಾಗಿ ಪರಿಣಮಿಸಿವೆ. ಇದು ಸುಪ್ರೀಂ ಕೋರ್ಟನ್ನು ತೀವ್ರ ಕಳವಳಕ್ಕೀಡು ಮಾಡಿರುವುದು ಸಹಜ. ದ್ವೇಷ ಭಾಷಣ ಮಾಡುವವರು ಯಾವುದೇ ಧರ್ಮಕ್ಕೆ ಸೇರಿರಲಿ ಅವರ ಮೇಲೆ ಉಗ್ರ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ. ದ್ವೇಷ ಭಾಷಣಗಳನ್ನು ಮಾಡುವವರ ಮೇಲೆ ಭಾರತೀಯ ದಂಡ ಸಂಹಿತೆಯ 153ಎ, 153ಬಿ, 295 ಎ ಮತ್ತು 505 ಪರಿಚ್ಛೇದಗಳ ಅಡಿಯಲ್ಲಿ ಮೊಕದ್ದಮೆಗಳನ್ನು ದಾಖಲಿಸಬಹುದಾಗಿದೆ.

ವಾಸ್ತವವಾಗಿ ದಿಲ್ಲಿ, ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ರಾಜ್ಯಗಳ ಪೊಲೀಸರಿಗೆ ನೀಡಿರುವ ಸುಪ್ರೀಂ ಕೋರ್ಟ್ ಆದೇಶದ ವ್ಯಾಪ್ತಿ ಈಗ ದೇಶದ ಎಲ್ಲ ರಾಜ್ಯಗಳಿಗೆ ವಿಸ್ತರಣೆಗೊಂಡಿದೆ. ತಮ್ಮ ಧರ್ಮದ ಪ್ರಚಾರ ಮಾಡುವುದು ತಪ್ಪಲ್ಲ. ಆದರೆ ರಾಜಾಕಾರಣಿಗಳು ಧರ್ಮದ ಮೇಲೆ ನಿಯಂತ್ರಣ ಸಾಧಿಸಿದಾಗ ಉದಾತ್ತ ಆಶಯದ ಧರ್ಮವನ್ನು ತಮ್ಮ ವೋಟ್ ಬ್ಯಾಂಕ್ ರಾಜಕಾರಣಕ್ಕೆ ಬಳಸಿಕೊಳ್ಳುತ್ತಾರೆ. ಇತ್ತೀಚೆಗಂತೂ ಪ್ರಚೋದನಾಕಾರಿ ಭಾಷಣಗಳನ್ನು ಮಾಡುವುದು ಫ್ಯಾಷನ್ ಮಾತ್ರವಲ್ಲ ಲಾಭದಾಯಕ ದಂಧೆಯಾಗಿದೆ. ಎಲ್ಲರನ್ನೂ ಸಮಾನವಾಗಿ ನೋಡಿಕೊಳ್ಳುವುದಾಗಿ ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸುವವರೇ ವಿಷ ಕಾರುತ್ತಾರೆ. ಅಧಿಕಾರದಲ್ಲಿ ಅವರೇ ಇರುವುದರಿಂದ ಅಂಥವರನ್ನು ಮುಟ್ಟಲು ಪೊಲೀಸರೂ ಹೆದರುತ್ತಾರೆ. ನಮ್ಮ ರಾಜ್ಯದಲ್ಲೇ ಮಂತ್ರಿಗಳಾಗಿದ್ದ ಕೆಲವರು ನಾಲಗೆ ಕತ್ತರಿಸುವ, ಕಣ್ಣು ಕೀಳುವ ಮಾತುಗಳನ್ನು ಆಡಿ ಚಪ್ಪಾಳೆ ಹೊಡೆಸಿಕೊಂಡು ಕೇಕೆ ಹಾಕಿಸಿಕೊಂಡ ಸಂಗತಿ ಎಲ್ಲರಿಗೂ ಗೊತ್ತಿದೆ.

ದ್ವೇಷ ಭಾಷಣಗಳ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವುದು ಇದು ಮೊದಲ ಸಲವೇನಲ್ಲ. ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ಸಮಾಜದಲ್ಲಿ ದ್ವೇಷವನ್ನು ಕೆರಳಿಸುವ ಭಾಷಣಗಳು ವ್ಯಾಪಕವಾಗಿದ್ದರೂ ವ್ಯವಸ್ಥೆಯ ಮೌನದ ಬಗ್ಗೆ ಸುಪ್ರೀಂ ಕೋರ್ಟ್ ಹಲವಾರು ಸಲ ತರಾಟೆಗೆ ತೆಗೆದುಕೊಂಡಿದೆ. ಆದರೆ ಅದಕ್ಕೆ ಈಗಿನ ಕೇಂದ್ರ ಸರಕಾರದ ಪ್ರತಿಕ್ರಿಯೆ ಗಮನಿಸಿದರೆ ಅದರ ಮನೋಭಾವ ಅರ್ಥ ವಾಗುತ್ತದೆ. ಬಹುಸಂಖ್ಯಾತ ಸಮುದಾಯಗಳ ಕುರಿತು ನಡೆಯುವ ದ್ವೇಷ ಭಾಷಣಗಳ ಬಗ್ಗೆ ಸುಪ್ರೀಂ ಕೋರ್ಟ್ ಏಕೆ ಕಾಳಜಿ ತೋರಿಸುತ್ತಿಲ್ಲ? ಎಂಬ ಮಾತಿನ ಹಿನ್ನೆಲೆಯನ್ನು ಅರ್ಥ ಮಾಡಿಕೊಂಡರೆ ರಾಜಕೀಯ ಲಾಭಕ್ಕಾಗಿ ಕೋಮು ಧ್ರುವೀಕರಣಕ್ಕೆ ಸರಕಾರದ ಕುಮ್ಮಕ್ಕು ಇರುವುದು ಅರ್ಥವಾಗುತ್ತದೆ.

 ಮುಂಚೆ ದ್ವೇಷ ಭಾಷಣಗಳನ್ನು ಮಾಡುವವರು ಸಂಘಟನೆಗಳ ಯಾರೋ ಕೆಲವು ಸಾಮಾನ್ಯ ಕಾರ್ಯಕರ್ತರು ಎಂದು ಉಪೇಕ್ಷೆ ಮಾಡಲಾಗುತ್ತಿತ್ತು. ಆದರೆ ಈಗ ಸರಕಾರದ ಜವಾಬ್ದಾರಿ ಸ್ಥಾನದಲ್ಲಿ ಇರುವವರೇ ಸಮಾಜದಲ್ಲಿ ಬೆಂಕಿ ಹಚ್ಚುವ ಭಾಷಣಗಳನ್ನು ಮಾಡುತ್ತಾರೆ. ಕೇಂದ್ರ ಸಚಿವರು, ರಾಜ್ಯಗಳ ಮಂತ್ರಿಗಳು, ಸಂಸದರು ಮತ್ತು ವಿಧಾನಸಭಾ ಸದಸ್ಯರಿಗೆ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು, ತಮ್ಮ ಹಗರಣಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಅಲ್ಪಸಂಖ್ಯಾತ ಸಮುದಾಯಗಳ ಬಗ್ಗೆ ವಿಷ ಕಾರುವ ದ್ವೇಷದ ಭಾಷಣ ಮಾಡುವುದು ಚಾಳಿಯಾಗಿದೆ.

ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ದ್ವೇಷ ಭಾಷಣವನ್ನು ಸಮರ್ಥಿಸುತ್ತಿರುವುದು ಇತ್ತೀಚಿನ ಇನ್ನೊಂದು ಕುಚೇಷ್ಟೆಯಾಗಿದೆ. ಆದರೆ ಜನಸಮುದಾಯಗಳ ನಡುವೆ ದ್ವೇಷದ ದಳ್ಳುರಿ ಎಬ್ಬಿಸುವುದು, ಶಾಂತಿ ಮತ್ತು ನೆಮ್ಮದಿಯನ್ನು ಕದಡುವುದು ಸಂವಿಧಾನ ವಿರೋಧಿ ನಡೆಯಾಗಿದೆ. ರಾಜಕಾರಣಿಗಳು ಮಾತ್ರವಲ್ಲ ಕೆಲವು ಮಠಾಧೀಶರು ಕೂಡ ಜನಾಂಗ ದ್ವೇಷದ ವಿಷ ಕಾರುವುದು ಸಾಮಾನ್ಯವಾಗಿದೆ. ಏನು ಮಾತಾಡಿದರೂ ನಡೆಯುತ್ತದೆ ಎಂದಾಗ ಬಾಯಿ ಚಪಲಕ್ಕೆ ಕಡಿವಾಣ ಇಲ್ಲದಂತಾಗುತ್ತದೆ

ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸುವ ಮಂತ್ರಿಗಳು, ಶಾಸಕರು ಆಡುತ್ತಿರುವ ಪ್ರಚೋದನಕಾರಿ ಮಾತುಗಳಿಗೆ ಕಡಿವಾಣ ಹಾಕುವವರೇ ಇಲ್ಲವಾಗಿದೆ.ಚಿಕ್ಕ ಮಗಳೂರಿನ ಶಾಸಕ ಸಿ.ಟಿ.ರವಿ, ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಹಿಂದೆ ಹಿರಿಯ ಸಚಿವರಾಗಿದ್ದ ಕೆ. ಎಸ್.ಈಶ್ವರಪ್ಪಹಾಗೂ ಅನೇಕ ಕೇಂದ್ರ ಸಚಿವರು ಆಡುತ್ತಿರುವ ಮಾತುಗಳನ್ನು ಗಮನಿಸಿದರೆ ಆತಂಕ ಉಂಟಾಗುತ್ತದೆ. ಕಾನೂನು ನಿರ್ಮಾಪಕರೇ ನಿತ್ಯವೂ ಕಾನೂನಿನ ಉಲ್ಲಂಘನೆ ಮಾಡುತ್ತಿರುತ್ತಾರೆ. ಇನ್ನು ಮುಂದಾದರೂ ಇಂಥವರ ಮೇಲೆ ಪ್ರಕರಣವನ್ನು ದಾಖಲಿಸಿ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ

ಈ ದ್ವೇಷದ ವಿಷ ಕಕ್ಕುವ ಮಾತುಗಳನ್ನು ಬರೀ ಕಾನೂನು ಕ್ರಮಗಳಿಂದ ನಿಯಂತ್ರಿಸಲು ಸಾಧ್ಯವಿಲ್ಲ. ಇದು ವ್ಯಕ್ತಿಗಳ ವೈಯಕ್ತಿಕ ಲೋಪ ಮಾತ್ರವಲ್ಲ, ಅವರು ನಂಬಿದ ದ್ವೇಷದ ಸಿದ್ಧಾಂತ ಅವರ ಬಾಯಿಯಿಂದ ಇಂಥ ಮಾತುಗಳನ್ನು ಆಡಿಸುತ್ತದೆ. ಕೋಮು ಆಧಾರದಲ್ಲಿ ರಾಷ್ಟ್ರವನ್ನು ಕಟ್ಟಲು ಹೊರಟಿರುವ ಸಂಘಟನೆ ಮತ್ತು ಸಿದ್ಧಾಂತಗಳು ಸಮಾಜದ ಬಹುತ್ವ ವನ್ನು ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಬರೀ ದ್ವೇಷದ ಮಾತುಗಳನ್ನು ಆಡುವವರ ಬಾಯಿ ಮುಚ್ಚಿಸಿದರೆ ಸಾಲದು, ದ್ವೇಷ ಸಿದ್ಧಾಂತವನ್ನು ಪ್ರತಿಪಾದಿಸುವ ಸಂಘಟನೆಗಳ ಮೇಲೆ ನಿರ್ಬಂಧ ಹೇರುವ ಜೊತೆಗೆ ಸಮಾಜವೇ ಇಂಥ ಸಂಘಟನೆ ಮತ್ತು ಸಿದ್ಧಾಂತಗಳನ್ನು ಬಹಿಷ್ಕರಿಸುವ ವಾತಾವರಣ ನಿರ್ಮಾಣ ವಾಗಬೇಕಾಗಿದೆ. ಈ ನಿಟ್ಟಿನಲ್ಲಿ ಜಾತ್ಯತೀತ ವ್ಯಕ್ತಿಗಳು, ಸಂಘಟನೆಗಳು ಮತ್ತು ನೈಜ ಧಾರ್ಮಿಕ ಆಶಯಗಳನ್ನು ಪ್ರತಿನಿಧಿಸುವ ಧರ್ಮ ಗುರುಗಳು, ಚಿಂತಕರು, ರಾಜಕಾರಣಿಗಳು ಯೋಚಿಸಬೇಕಾಗಿದೆ.

ದ್ವೇಷ ಭಾಷಣಕ್ಕೆ ಕಡಿವಾಣ ಹಾಕಲು ಯಾಕೆ ಸಾಧ್ಯವಾಗುತ್ತಿಲ್ಲವೆಂದರೆ ದ್ವೇಷ ಭಾಷಣ ಅಂದರೆ ಏನು ಎಂಬುದಕ್ಕೆ ಕಾನೂನಿನ ಪ್ರಕಾರ ನಿರ್ದಿಷ್ಟ ವ್ಯಾಖ್ಯಾನವಿಲ್ಲ. ದ್ವೇಷ ಭಾಷಣಗಳನ್ನು ಭಾರತೀಯ ದಂಡ ಸಂಹಿತೆಯ( ಐಪಿಸಿ) ಅಡಿಯಲ್ಲಿ ಕ್ರಿಮಿನಲ್ ಅಪರಾಧ ಎಂದು ಪರಿಗಣಿಸಬೇಕೆಂಬ ಸಲಹೆಯನ್ನು ಕಾನೂನು ಆಯೋಗ ನೀಡಿದೆ. ಆದರೆ ದ್ವೇಷ ಭಾಷಣಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆನ್ನುವ ಸೆಕ್ಷನ್‌ಗಳು ವಾಸ್ತವವಾಗಿ ದ್ವೇಷ ಭಾಷಣಗಳನ್ನು ನಿಯಂತ್ರಿಸುವ ಉದ್ದೇಶದಿಂದ ರೂಪುಗೊಂಡವಲ್ಲ.

ಈ ಎಲ್ಲಾ ಇತಿಮಿತಿಗಳ ನಡುವೆಯೂ ಸುಪ್ರೀಂ ಕೋರ್ಟ್ ನೀಡಿರುವ ಸಲಹೆ ಅತ್ಯಂತ ಸೂಕ್ತವಾಗಿದೆ. ಇನ್ನು ಮುಂದಾದರೂ ರಾಜ್ಯ ಮತ್ತು ಕೇಂದ್ರ ಸರಕಾರಗಳು ದ್ವೇಷ ಭಾಷಣಗಳನ್ನು ತಡೆಯಲು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಕೋಮು ಪ್ರಚೋದನಾಕಾರಿ ದ್ವೇಷ ಭಾಷಣ ಮಾಡುವ ಜನಪ್ರತಿನಿಧಿಗಳ ಶಾಸನ ಸಭಾ ಸದಸ್ಯತ್ವ ರದ್ದತಿಗೆ ಕಾನೂನು ರೂಪಿಸುವುದು ತುರ್ತು ಅಗತ್ಯವಾಗಿದೆ.

share
Next Story
X