Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಜೆಪಿ ಮಾಡಿಟ್ಟ ಪಾಪವನ್ನು ತೊಳೆಯಲು...

ಬಿಜೆಪಿ ಮಾಡಿಟ್ಟ ಪಾಪವನ್ನು ತೊಳೆಯಲು ಕಾವೇರಿ-ಕೃಷ್ಣಾ ನದಿಗಳ ನೀರು ಸಾಲದು: ಮೋದಿಗೆ ಸಿದ್ದರಾಮಯ್ಯ ತಿರುಗೇಟು

''ಝಂಡಾ ಮಾತ್ರ ಪಕ್ಷದ್ದು ಅಜೆಂಡಾ ಆರೆಸ್ಸೆಸ್‍ನದ್ದು''

5 May 2023 3:40 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬಿಜೆಪಿ ಮಾಡಿಟ್ಟ ಪಾಪವನ್ನು ತೊಳೆಯಲು ಕಾವೇರಿ-ಕೃಷ್ಣಾ ನದಿಗಳ ನೀರು ಸಾಲದು: ಮೋದಿಗೆ ಸಿದ್ದರಾಮಯ್ಯ ತಿರುಗೇಟು
''ಝಂಡಾ ಮಾತ್ರ ಪಕ್ಷದ್ದು ಅಜೆಂಡಾ ಆರೆಸ್ಸೆಸ್‍ನದ್ದು''

ಬೆಂಗಳೂರು, ಮೇ 5: ‘ಭಯೋತ್ಪಾದನೆ ತಡೆಯಲು ಕಾಂಗ್ರೆಸ್ ಸರಕಾರ ಸೋತಿತ್ತು’ ಎಂದು ಹೇಳಿರುವ ಪ್ರಧಾನಿ ಮೋದಿಯವರೇ, ಭಯೋತ್ಪಾದನೆಯನ್ನು ದಿಟ್ಟತನದಿಂದ ಎದುರಿಸಿ ಹುತಾತ್ಮರಾದ ಇಬ್ಬರು ಪ್ರಧಾನಿಗಳು ಯಾವ ಪಕ್ಷದವರು ಎನ್ನುವುದನ್ನು ನಿಮ್ಮ ಆತ್ಮಸಾಕ್ಷಿಯನ್ನೊಮ್ಮೆ ಕೇಳಿ ನೋಡಿ, ಉತ್ತರ ಸಿಗಬಹುದು’ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಶುಕ್ರವಾರ ಈ ಸಂಬಂಧ ಪ್ರಕಟನೆ ನೀಡಿರುವ ಅವರು, ‘ಕೆಲವು ದಿನಗಳಿಂದ ಇಡೀ ಮಣಿಪುರ ಹೊತ್ತಿ ಉರಿಯುತ್ತಿದೆ. ದೇಶದ ಪ್ರಧಾನಮಂತ್ರಿ ಮತ್ತು ಗೃಹಸಚಿವರು ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಮಾಡುತ್ತಾ ಆರಾಮಾಗಿದ್ದಾರೆ, ‘ರೋಮ್ ಹೊತ್ತಿ ಉರಿಯುವಾಗ ದೊರೆ ನೀರೊ ಪಿಟೀಲು ಬಾರಿಸುತ್ತಿದ್ದನಂತೆ’, ಹಾಗಾಯಿತು ನಿಮ್ಮ ಕತೆ. ಚೀನಾದ ಗಡಿ ಅತಿಕ್ರಮಣವನ್ನು ಹಿಮ್ಮೆಟ್ಟಿಸಲಾಗಲಿಲ್ಲ, ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ನಿಯಂತ್ರಿಸಿ ಶಾಂತಿ ಸ್ಥಾಪಿಸಲಾಗಲಿಲ್ಲ. ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುವ ಯಾವ ನೈತಿಕತೆ ನಿಮಗಿದೆ ಮೋದಿಯವರೇ?’ ಎಂದು ಕಿಡಿಕಾರಿದ್ದಾರೆ. 

‘ಕಾಂಗ್ರೆಸ್ ಪಕ್ಷ ಮಾಧ್ಯಮಗಳ ಸುಳ್ಳು ಸಮೀಕ್ಷೆಗಳನ್ನು ಪ್ರಸಾರ ಮಾಡಿ ಬೆಂಬಲ ಗಳಿಸಲು ಹೊರಟಿದೆ ಎಂದು ಮೋದಿಯವರು ಹೊಟ್ಟೆ ಉರಿದುಕೊಳ್ಳ್ಳುತ್ತಿರುವುದು ನೋಡಿದಾಗ ಕನಿಕರ ಹುಟ್ಟುತ್ತಿದೆ. ಏನಿದರ ಅರ್ಥ ಮೋದಿಯವರೇ? ನಿಮ್ಮನ್ನು ಹಾಡಿ ಹೊಗಳುತ್ತಿರುವ ಮಾಧ್ಯಮಗಳ ವಿಶ್ವಾಸಾರ್ಹತೆಯನ್ನು ನೀವೇ ಸಂಶಯಿಸುತ್ತಿದ್ದೀರಾ? ಮನುಷ್ಯ ಇಷ್ಟೊಂದು ಕೃತಘ್ನರಾಗಬಾರದು’ ಎಂದು ವಾಗ್ದಾಳಿ ನಡೆಸಿದ್ದಾರೆ.

‘ಮೋದಿಯವರು ರಾಜ್ಯ ಬಿಜೆಪಿಯ ಪ್ರಣಾಳಿಕೆಯನ್ನು ಸಂಕಲ್ಪಪತ್ರ ಎಂದು ಬಣ್ಣಿಸಿದ್ದಾರೆ. 2018ರ ತನ್ನ ಪ್ರಣಾಳಿಕೆಯ ಶೇ.90ರಷ್ಟು ಭರವಸೆಗಳನ್ನು ಬಿಜೆಪಿ ಸರಕಾರ ಈಡೇರಿಸಿಲ್ಲ. 2013ರ ಕಾಂಗ್ರೆಸ್ ಪ್ರಣಾಳಿಕೆಯ 165 ಭರವಸೆಗಳಲ್ಲಿ 158 ಭರವಸೆಗಳನ್ನು ನಮ್ಮ ಸರಕಾರ ಈಡೇರಿಸಿದೆ. ನಿಮ್ಮ ಸಂಕಲ್ಪ ಪ್ರಾಮಾಣಿಕವಾದುದಾಗಿದ್ದರೆ 2013ರ ನಮ್ಮ ಪ್ರಣಾಳಿಕೆ ಮತ್ತು 2018ರ ನಿಮ್ಮ ಪ್ರಣಾಳಿಕೆಯನ್ನು ಮುಂದಿಟ್ಟು ಈಡೇರಿಸಿದ ಭರವಸೆಗಳ ಬಗ್ಗೆ ನನ್ನೊಡನೆ ಬಹಿರಂಗ ಚರ್ಚೆಗೆ ಬನ್ನಿ, ಸಿದ್ಧ ಇದ್ದೀರಾ? ನಿಮ್ಮದೇ ಸ್ಥಳ, ನಿಮ್ಮದೇ ಸಮಯ, ಉತ್ತರಕ್ಕಾಗಿ ಕಾಯುತ್ತಿರುವೆ’ ಎಂದು ಅವರು ಸವಾಲು ಹಾಕಿದ್ದಾರೆ.

‘ಬಿಜೆಪಿಯ ಡಬಲ್ ಎಂಜಿನ್ ಸರಕಾರ ಮೂರುವರೆ ವರ್ಷಗಳ ಅಧಿಕಾರವಧಿಯಲ್ಲಿ ಹಿಂದಿನ ಸರಕಾರದ ತಪ್ಪುಗಳನ್ನು ಸರಿಪಡಿಸವುದರಲ್ಲಿಯೇ ಕಳೆದುಹೋಯಿತು ಎಂದು ಮೋದಿ ನೊಂದುಕೊಂಡಿದ್ದಾರೆ. ಮೂರುವರೆ ವರ್ಷಗಳಲ್ಲಿ ಡಬಲ್ ಎಂಜಿನ್ ಸರಕಾರದ ಸಾಧನೆ ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ ಮತ್ತು ಕೋಮು ದ್ವೇಷವನ್ನಷ್ಟೇ ಡಬಲ್ ಮಾಡಿದೆ. ಬಿಜೆಪಿ ಮಾಡಿಟ್ಟ ಪಾಪವನ್ನು ತೊಳೆಯಲು ಕಾವೇರಿ ಮತ್ತು ಕೃಷ್ಣಾ ನದಿಗಳ ನೀರು ಸಾಲದು’ ಎಂದು ವಾಗ್ದಾಳಿ ನಡೆಸಿದ್ದಾರೆ

‘ರಾಜ್ಯದಲ್ಲಿರುವುದು ಡಬಲ್ ಎಂಜಿನ್ ಸರಕಾರ ಅಲ್ಲ, ಟ್ರಿಬಲ್ ಎಂಜಿನ್ ಸರಕಾರ. ಒಂದು ರಾಜ್ಯದಲ್ಲಿ, ಇನ್ನೊಂದು ದಿಲ್ಲಿಯಲ್ಲಿ ಮತ್ತೊಂದು ನಾಗಪುರದಲ್ಲಿ. ಪ್ರಧಾನಿಯಿಂದ ಹಿಡಿದು ಮುಖ್ಯಮಂತ್ರಿ ಮತ್ತು ಸಚಿವರ ವರೆಗೆ ಎಲ್ಲರೂ ನಾಗಪುರದ ಗೊಂಬೆಯಾಟದವರ ಕೈಯಲ್ಲಿರುವ ಗೊಂಬೆಗಳು ಅಷ್ಟೇ. ಝಂಡಾ ಮಾತ್ರ ಪಕ್ಷದ್ದು ಅಜೆಂಡಾ ಆರೆಸ್ಸೆಸ್‍ನದ್ದು. ಡಬಲ್ ಎಂಜಿನ ಸರಕಾರ ಇದ್ದರೂ ಅರ್ಧ ಕರ್ನಾಟಕ ನೆರೆನೀರಿನಲ್ಲಿ ಮುಳುಗಿರುವಾಗ ನೆರವು ಹರಿದು ಬರಲಿಲ್ಲ. ಕೇಂದ್ರಕ್ಕೆ ಕೊಟ್ಟ ಒಂದು ರೂ.ಯಲ್ಲಿ ವಾಪಸ್ ರಾಜ್ಯಕ್ಕೆ ಬಂದದ್ದು ಕೇವಲ 16 ಪೈಸೆ. ಮಹಾರಾಷ್ಟ್ರ ಸರಕಾರ ಬೆಳಗಾವಿ ಗಡಿಪ್ರದೇಶಕ್ಕೆ ಅತಿಕ್ರಮಣ ಮಾಡಿದರೂ ಮಧ್ಯೆ ಪ್ರವೇಶ ಮಾಡಲಿಲ್ಲ. ಇಂಥ ಡಬಲ್ ಇಂಜಿನ್ ಸರಕಾರ ಯಾಕೆ ಬೇಕಿದೆ?’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಪ್ರಧಾನಿ ಮೋದಿಯವರು ಕನ್ನಡದ ಕೆಲವು ಶಬ್ದಗಳನ್ನು ತಪ್ಪುತಪ್ಪಾಗಿಯಾದರೂ ಆಡುತ್ತಿರುವುದು ಸ್ವಾಗತಾರ್ಹ. ಆದರೆ ಈ ನಾಟಕದ ಮಾತುಗಳಿಂದ ಕೇಂದ್ರ ಬಿಜೆಪಿ ಸರಕಾರ ಕನ್ನಡಿಗರಿಗೆ ಮಾಡಿರುವ ಅನ್ಯಾಯವನ್ನು ಮುಚ್ಚಿಡಲಾಗದು. ನಿಜವಾದ ಕನ್ನಡಿಗನಾಗುವುದೆಂದರೆ ನಾಡಭಾಷೆ, ನಾಡಗೀತೆ ಮತ್ತು ನಾಡಧ್ವಜವನ್ನು ಒಪ್ಪಿಕೊಳ್ಳುವುದು. ಕರ್ನಾಟಕದ ನಾಡಧ್ವಜಕ್ಕೆ ಅಂಗೀಕಾರ ನೀಡಿ ನೀವು ನಿಜವಾದ ಕನ್ನಡಿಗರಾಗುವಿರಾ ಮೋದಿಯವರೇ?’

-ಸಿದ್ದರಾಮಯ್ಯ ಪ್ರತಿಪಕ್ಷ ನಾಯಕ

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X