ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ; ನಗರದ 34 ರಸ್ತೆಗಳ ಸಂಚಾರ ನಿರ್ಬಂಧ

ಬೆಂಗಳೂರು, ಮೇ 5: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜಧಾನಿ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಮತ ಪ್ರಚಾರ ಮುಂದುವರೆಸಿದ್ದು, ಶನಿವಾರ ಮತ್ತೊಮ್ಮೆ ನಗರದೆಲ್ಲೆಡೆ ರೋಡ್ ಶೋ ನಡೆಸಲಿದ್ದಾರೆ. ಈ ಹಿನ್ನೆಲೆ 34 ರಸ್ತೆಗಳಲ್ಲಿ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧ ಹೇರಲಾಗಿದೆ.
ಈ ಕುರಿತು ಸಂಚಾರ ಪೊಲೀಸರು ಮಾಹಿತಿ ನೀಡಿದ್ದು, ಶನಿವಾರ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಲಿದ್ದಾರೆ. ಹಾಗಾಗಿ, ಇಲ್ಲಿನ ರಾಜ ಭವನ ರಸ್ತೆ. ರಮಣ ಮಹರ್ಷಿ ರಸ್ತೆ, ಮೇಖ್ರಿ ವೃತ್ತ, ಆರ್ ಬಿ ಐ ಲೇಔಟ್ ಜೆಪಿ ನಗರ, ಶಿರ್ಸಿ ಸರ್ಕಲ್, ಜೆಜೆ ನಗರ, ಬಿನ್ನಿ ಮಿಲ್ ರಸ್ತೆ, ಶಾಲಿನಿ ಮೈದಾನ, ಸೌತ್ ಎಂಡ್ ಸರ್ಕಲ್, ಆಮುಗರ್ಂ ಸರ್ಕಲ್, ಬುಲ್ ಟೆಂಪಲ್ ರೋಡ್, ರಾಮಕೃಷ್ಣಾಶ್ರಮ, ಉಮಾ ಟಾಕೀಸ್, ಟಿಆರ್ ಮಿಲ್, ಚಾಮಾರಾಜಪೇಟೆ ಮುಖ್ಯ ರಸ್ತೆ, ಬಾಳೆಕಾಯಿ ಮಂಡಿ, ಕೆಪಿ ಅಗ್ರಹಾರ.
ಮಾಗಡಿ ರೋಡ್, ಚೇಳೂರುಪಾಳ್ಯ ರೋಡ್, ಎಂಸಿ ಸರ್ಕಲ್, ವೆಸ್ಟ್ ಆಫ್ ಕಾರ್ಡ್ ರೋಡ್, ಎಂ ಸಿ ಲೇಔಟ್ , ನಾಗರ ಭಾವಿ ಮುಖ್ಯ ರಸ್ತೆ, ಬಿಜಿಎಸ್ ಮೈದಾನ, ಹಾವನೂರು ಸರ್ಕಲ್, ಎಂಟನೇ ಮುಖ್ಯರಸ್ತೆ ಬಸವೇಶ್ವರ ನಗರ, ಬಸವೇಶ್ವರ ನಗರ ಹದಿನೈದನೇ ಮುಖ್ಯ ರಸ್ತೆ, ಶಂಕರ್ ಮಠ, ಮೋದಿ ಅಸ್ಪತ್ರೆ ರೋಡ್, ನವರಂಗ್ ರಸ್ತೆ, ಎಂ ಕೆಕೆ ರಸ್ತೆ, ಮಲ್ಲೇಶ್ವರಂ ಸರ್ಕಲ್, ಸಂಪಿಗೆ ರಸ್ತೆ, ಸ್ಯಾಂಕಿ ರಸ್ತೆಗಳಲ್ಲಿ ಸಾರ್ವಜನಿಕ ಸಂಚಾರ ನಿರ್ಬಂಧಿಸಲಾಗಿದೆ.