Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೇ 6ರಂದು ಪುತ್ತೂರಿಗೆ ಆದಿತ್ಯನಾಥ್...

ಮೇ 6ರಂದು ಪುತ್ತೂರಿಗೆ ಆದಿತ್ಯನಾಥ್ ಭೇಟಿ; ಬಿಜೆಪಿ ಪರ ರೋಡ್ ಶೋ

5 May 2023 11:39 PM IST
share
ಮೇ 6ರಂದು ಪುತ್ತೂರಿಗೆ ಆದಿತ್ಯನಾಥ್ ಭೇಟಿ; ಬಿಜೆಪಿ ಪರ ರೋಡ್ ಶೋ

ಪುತ್ತೂರು: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರ ಪರವಾಗಿ ಮತ ಯಾಚನೆ ನಡೆಸಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಮೇ 6ರಂದು ಪುತ್ತೂರಿಗೆ ಆಗಮಿಸಲಿದ್ದು, ಪುತ್ತೂರು ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಅವರ ಆಗಮನದ ಹಿನ್ನೆಲೆಯಲ್ಲಿ ಪುತ್ತೂರಿನಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಅವರು  ಪುತ್ತೂರಿಗೆ ಬೆಳಗ್ಗೆ 11 ಗಂಟೆಗೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದು, ನಗರದ ಹೊರವಲಯದ ಮೊಟ್ಟೆತ್ತಡ್ಕ ಎಂಬಲ್ಲಿರುವ ಹೆಲಿಪ್ಯಾಡ್‍ನಲ್ಲಿ ಇಳಿಯಲಿದ್ದಾರೆ. ಬಳಿಕ ವಾಹನದ ಮೂಲಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಲಿದ್ದಾರೆ. ದೇವಳದ ಬಳಿಯಲ್ಲಿರುವ ಮುಖ್ಯ ಅಂಚೆ ಕಚೇರಿ ಬಳಿಯಿಂದ ಕಿಲ್ಲೆ ಮೈದಾನದ ತನಕ ರೋಡ್ ಶೋ ನಡೆಸಲಿದ್ದಾರೆ. ಅಂಚೆ ಕಚೇರಿ ಬಳಿಯಿಂದ ಹೊರಟು ಕೋರ್ಟು ರಸ್ತೆಯಾಗಿ ಸಾಗಿ ಕಿಲ್ಲೆ ಮೈದಾನದ  ತನಕ ಜಾಥಾ ನಡೆಯಲಿದೆ.

ವಾಹನ ಸಂಚಾರ ನಿಷೇಧ

ಆದಿತ್ಯನಾಥ್ ಆಗಮನದ ಹಿನ್ನಲೆಯಲ್ಲಿ ಸಾರ್ವಜನಿಕ ಸುಗಮ ಸಂಚಾರ ವ್ಯವಸ್ಥೆಯ ದೃಷ್ಠಿಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ, ನಿಲುಗಡೆ ನಿಷೇಧಿಸಲಾಗಿದೆ. ವಾಹನ ಪಾರ್ಕಿಂಗ್ ಹಾಗೂ ವಾಹನಗಳು ಬದಲಿ ರಸ್ತೆ ಮಾರ್ಗದ ಮೂಲಕ ಸಂಚರಿಸುವಂತೆ ದ.ಕ. ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. 

ಆದಿತ್ಯನಾಥ್ ಆಗಮಿಸುವ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಿನೆಟ್ ಜಂಕ್ಷನ್‍ನಿಂದ ಮುಕ್ರಂಪಾಡಿ ತನಕ ಹಾಗೂ ಮುಕ್ರಂಪಾಡಿಯಿಂದ ಮೊಟ್ಟೆತ್ತಡ್ಕದ ತನಕ ರಸ್ತೆಯಲ್ಲಿ ತುರ್ತು ಮತ್ತು ವೈದ್ಯಕೀಯ ವಾಹನ ಹೊರತು ಪಡಿಸಿ ಇತರ ವಾಹನ ಸಂಚಾರ ನಿಷೇಧಿಸಲಾಗಿದೆ. 

ಬೆಳಗ್ಗೆ 11 ಗಂಟೆಯಿಂದ ಮದ್ಯಾಹ್ನ 2 ಗಂಟೆಯ ತನಕ ಬೊಳುವಾರು ಜಂಕ್ಷನ್‍ನಿಂದ ಗಾಂಧಿಕಟ್ಟೆಯ ತನಕ ಮತ್ತು ಕಿಲ್ಲೆ ಮೈದಾನದ ಸುತ್ತ ಮುತ್ತಲಿನ ರಸ್ತೆಗಳಲ್ಲಿ ಹಾಗೂ ಕೋರ್ಟ್ ರಸ್ತೆಯಲ್ಲಿ ತುರ್ತು ಮತ್ತು ವೈದ್ಯಕೀಯ ವಾಹನ ಹೊರತುಪಡಿಸಿ ಇತರ ವಾಹನ ಸಂಚಾರ ನಿಷೇಧಿಸಲಾಗಿದೆ. 

ಬೆಳಗ್ಗೆಯಿಂದ ಕಾರ್ಯಕ್ರಮ ಮುಗಿಯುವ ತನಕ ನಗರದ ಶ್ರೀಧರ ಭಟ್ ಜಂಕ್ಷನ್‍ನಿಂದ ಗಾಂಧಿಕಟ್ಟೆಯ ತನಕ ಹಾಗು ಗಾಂಧಿ ಕಟ್ಟೆಯಿಂದ ಕೋರ್ಟು ರಸ್ತೆಯ ಮೂಲಕ ಕಿಲ್ಲೆ ಮೈದಾನದ ತನಕ ಸುತ್ತ ಮುತ್ತಲಿನ ರಸ್ತೆಯಲ್ಲಿ ವಾಹನ ಪಾರ್ಕಿಂಗ್ ಮಾಡುವುದನ್ನು ನಿಷೇಧಿಸಲಾಗಿದೆ.

ಬದಲಿ ರಸ್ತೆ ಮಾರ್ಗ

ಮಂಗಳೂರು ಮತ್ತು ಕಡಬ ಕಡೆಯಿಂದ ಸಂಚರಿಸುವ ಲಘು ವಾಹನಗಳು ಹಾಗೂ ಸುಳ್ಯ ಮತ್ತು ಸಂಪ್ಯ ಕಡೆಗೆ ಸಂಚರಿಸಲು ಲಿನೆಟ್ ಜಂಕ್ಷನ್-ಬೊಳುವಾರು-ಕೊಟೇಚಾ ಹಾಲ್-ಸಾಲ್ಮರ-ಪುರುಷರಕಟ್ಟೆ, ಪಂಜಳ, ಪರ್ಪುಂಜ ಮಾರ್ಗವನ್ನು ಬಳಸುವುದು.

ಸುಳ್ಯ ಕಡೆಯಿಂದ ಮಂಗಳೂರು ಕಡೆಗೆ ಸಾಗುವ ಲಘು ವಾಹನಗಳು ಪಪುಂಜ ಕ್ರಾಸ್-ಪಂಜಳ, ಪುರುಷರಕಟ್ಟೆ-ದರ್ಬೆ-ಅರುಣಾ ಥಿಯೇಟರ್-ಸಾಲ್ಮರ-ಪಡೀಲ್-ಬೊಳುವಾರು-ಲಿನೆಟ್ ಜಂಕ್ಷನ್ ಮಾರ್ಗವಾಗಿ ಸಂಚರಿಸುವುದು. 

ಪಾರ್ಕಿಂಗ್

ಆದಿತ್ಯನಾಥ್ ಅವರ ಕಾರ್ಯಕ್ರಮಕ್ಕೆ ಆಗಮಿಸುವವರು ಒಂದು ಗಂಟೆಗೆ ಮುಂಚಿತವಾಗಿ ವಾಹನಗಳನ್ನು ಪುತ್ತೂರು ಶ್ರೀ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ, ಬಂಟರ ಭವದ ಮುಂಬಾಗ, ನೆಲ್ಲಿಕಟ್ಟೆ ಪ್ರಾಥಮಿಕ ಶಾಲಾ ಮೈದಾನದಲ್ಲಿ ಪಾರ್ಕಿಂಗ್ ಮಾಡಲು ವ್ಯವಸ್ಥೆಗೊಳಿಸಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

ಜಾಥಾ ಸಾಗುವ ದಾರಿಯಲ್ಲಿನ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಸೂಚನೆ ನೀಡಲಾಗಿದೆ. ಸೂಕ್ತ ಬಂದೋಬಸ್ತ್ ಹಿ‌ನ್ನೆಲೆಯಲ್ಲಿ ನಗರದಲ್ಲಿ 600ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ.

share
Next Story
X