Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರತಿ ನಾಲ್ಕು ಭಾರತೀಯರ ಪೈಕಿ ಮೂವರಿಗೆ...

ಪ್ರತಿ ನಾಲ್ಕು ಭಾರತೀಯರ ಪೈಕಿ ಮೂವರಿಗೆ ಮೊಬೈಲ್ ಸಂಪರ್ಕ ಕಡಿದುಕೊಳ್ಳುವ ಭೀತಿ: ವರದಿ

6 May 2023 3:11 PM IST
share
ಪ್ರತಿ ನಾಲ್ಕು ಭಾರತೀಯರ ಪೈಕಿ ಮೂವರಿಗೆ ಮೊಬೈಲ್ ಸಂಪರ್ಕ ಕಡಿದುಕೊಳ್ಳುವ ಭೀತಿ: ವರದಿ

ಹೊಸ ದಿಲ್ಲಿ: ಪ್ರತಿ ನಾಲ್ಕು ಭಾರತೀಯರ ಪೈಕಿ ಮೂವರು ಭಾರತೀಯರು ತಮ್ಮ ಸ್ಮಾರ್ಟ್‌ಫೋನ್ ಚಾರ್ಜಿಂಗ್ ಇಲ್ಲವಾಗುವುದು ಅಥವಾ ಇನ್ನಿತರೆ ಕಾರಣಗಳಿಂದ ಮೊಬೈಲ್ ಸಂಪರ್ಕ ಕಡಿದುಕೊಳ್ಳುವ ಭೀತಿ (NoMoPhobia) ಎದುರಿಸುತ್ತಿದ್ದಾರೆ ಎಂದು ಶುಕ್ರವಾರ ಮೊಬೈಲ್ ಫೋನ್ ಉತ್ಪಾದಕ ಕಂಪನಿ ಓಪ್ಪೊ ಹಾಗೂ ಮಾರುಕಟ್ಟೆ ಸಂಶೋಧನಾ ಸಂಸ್ಥೆ ಕೌಂಟರ್ ಪಾಯಿಂಟ್ ಜಂಟಿಯಾಗಿ ನಡೆಸಿರುವ ಅಧ್ಯಯನದಲ್ಲಿ ಬಹಿರಂಗಗೊಂಡಿದೆ ಎಂದು gadget360.com ವರದಿ ಮಾಡಿದೆ.

ಈ ವರದಿಯ ಪ್ರಕಾರ, ತಮ್ಮ ಸ್ಮಾರ್ಟ್ ಫೋನ್‌ಗಳಲ್ಲಿ ಚಾರ್ಜಿಂಗ್ ಇಲ್ಲವಾದಾಗ ಶೇ. 65ರಷ್ಟು ಸ್ಮಾರ್ಟ್‌ಫೋನ್ ಬಳಕೆದಾರರು ಭಾವನಾತ್ಮಕ ಅಸೌಖ್ಯಗಳಾದ ಚಿಂತೆ ಅಥವಾ ಗಾಬರಿ, ಸಂಪರ್ಕ ಕಡಿದುಕೊಂಡ ಅನುಭವ, ಅಸಹಾಯಕತೆ, ಭಯ ಅಥವಾ ಕಳೆದು ಹೋಗುವ ಭೀತಿ, ಹೆದರಿಕೆ, ಅಸುರಕ್ಷಿತದಂತಹ ಭಾವನೆಗಳನ್ನು ಅನುಭವಿಸುತ್ತಾರೆ ಎಂಬ ಸಂಗತಿ ಸಮೀಕ್ಷೆಯಲ್ಲಿ ವ್ಯಕ್ತವಾಗಿದೆ ಎಂದು ಹೇಳಲಾಗಿದೆ.

ಈ ಭೀತಿಯನ್ನು ಸಂಕ್ಷಿಪ್ತವಾಗಿ NoMoPhobia (No Mobile Phobia) ಎಂದು ಕರೆಯಲಾಗುತ್ತಿದ್ದು, ಕೆಲಸ ನಿರ್ವಹಿಸದ ಮೊಬೈಲ್ ಫೋನ್‌ನಿಂದ ಉಂಟಾಗುವ ಹೆದರಿಕೆ ಅಥವಾ ಗಾಬರಿಗೆ ಹೀಗೆಂದು ಕರೆಯುತ್ತಾರೆ.

ಆಧುನಿಕ ಸ್ಮಾರ್ಟ್‌ಫೋನ್ ಬಳಕೆದಾರರ ಬ್ಯಾಟರಿ ಸಾಮರ್ಥ್ಯದ ಕುರಿತ ಗಾಬರಿಯನ್ನು ಅಧ್ಯಯನ ಮಾಡಲು ಓಪ್ಪೊ ಇಂಡಿಯಾ ಕೌಂಟರ್ ಪಾಯಿಂಟ್ ಸಹಯೋಗದೊಂದಿಗೆ ಸಮೀಕ್ಷೆ ನಡೆಸಿತ್ತು. ಈ ಸಮೀಕ್ಷೆಯಲ್ಲಿ ಮೊದಲ ಶ್ರೇಣಿ ಹಾಗೂ ಎರಡನೇ ಶ್ರೇಣಿ ನಗರಗಳ ಒಟ್ಟು 1,500 ಮಂದಿ ಬಳಕೆದಾರರು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದರು.

ಶೇ. 74ರಷ್ಟು ಮಹಿಳೆಯರಿಗೆ ಹೋಲಿಸಿದರೆ ಶೇ. 82ರಷ್ಟು ಪುರುಷರು ಹೆಚ್ಚು ಗಾಬರಿ ಅನುಭವಿಸುತ್ತಾರೆ ಎಂಬ ಸಂಗತಿ ಅಧ್ಯಯನ ವರದಿಯಲ್ಲಿ ವ್ಯಕ್ತವಾಗಿದೆ.

ಶೇ. 92.5 ಮಂದಿ ಬಳಕೆದಾರರು ಪವರ್ ಸೇವ್ ಮೋಡ್‌ನಲ್ಲಿ ತಮ್ಮ ಸ್ಮಾರ್ಟ್ ಫೋನ್ ಬಳಸಿದರೆ, ಶೇ. 87 ಮಂದಿ ತಮ್ಮ ಸ್ಮಾರ್ಟ್ ಫೋನ್ ಚಾರ್ಜ್ ಆಗುವಾಗಲೇ ಬಳಸುತ್ತಾರೆ ಎಂಬ ಸಂಗತಿಯೂ ಅಧ್ಯಯನ ವರದಿಯಲ್ಲಿ ಬಹಿರಂಗಗೊಂಡಿದೆ.

share
Next Story
X