ಕಾರ್ಕಳ: ಅಯೋಧ್ಯೆಯಲ್ಲಿ ರಾಮಮಂದಿರ, ದೇಶದಲ್ಲಿ ರಾಮರಾಜ್ಯ ನಿರ್ಮಾಣ- ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್

ಕಾರ್ಕಳ : 2024 ಜನವರಿಯಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ. ರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ಕರ್ನಾಟಕದ ಕರಸೇವಕರ ಪಾತ್ರ ಮಹತ್ತರ ವಾದದ್ದು, ಪ್ರಭು ರಾಮನ ಮಂದಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ಕರ್ನಾಟಕದ ಜನತೆಯ ಬಹಳ ಶ್ರಧ್ದಾಪೂರ್ವಕವಾಗಿ ಆಮಂತ್ರಿಸಲು ಬಂದಿದ್ದೇನೆ. ಕರ್ನಾಟಕದ ರಾಮಭಕ್ತರಿಗಾಗಿ ಅಯೋಧ್ಯೆಯಲ್ಲಿ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರು ಗೆಸ್ಟ್ ಹೌಸ್ ನಿರ್ಮಾಣಕ್ಕಾಗಿ ಸ್ಥಳ ಖರೀದಿ ಮಾಡಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ತಿಳಿಸಿದರು.
ಅವರು ಶನಿವಾರ ಸಂಜೆ ನಡೆದ ರೋಡ್ ಶೋನಲ್ಲಿ ಮಾತನಾಡುತ್ತಿದ್ದರು.
ರಾಮನ ಬಂಟ ಹನುಮಂತ ಲಂಕೆಗೆ ಹಾರಿ ರಾವಣನ ಇಡೀ ಸಾಮ್ರಾಜ್ಯವನ್ನು ನಾಶಗೊಳಿಸಿದ ಹಾಗೆ ಇಡೀ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‌ನ್ನು ಬಿಜೆಪಿಯ ಕಾರ್ಯಕರ್ತರು ದೂಳಿಪಟ ಮಾಡಿ ಮತ್ತೊಮ್ಮೆ ಡಬಲ ಇಂಜಿನ್ ಸರಕಾರ ತರಬೇಕಾಗಿದೆ. ಕರ್ನಾಟಕದಲ್ಲಿ ಯಡಿಯೂರಪ್ಪ ನಾಯಕತ್ವದಲ್ಲಿ ಬೊಮ್ಮಾಯಿ ನೇತೃತ್ವದಲ್ಲಿ ಡಬಲ್ ಇಂಜಿನ್ ಸರಕಾರ ಖಂಡಿತವಾಗಿಯೂ ಬರಲಿದೆ ಈ ಸರಕಾರವನ್ನು ತಡೆಯಲು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಅದ್ದರಿಂದ ಸುನೀಲ್ ಕುಮಾರ್ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವ ಸುನೀಲ್ ಕುಮಾರ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕಾರ್ಕಳ ಬಿಜೆಪಿ ಪ್ರಚಾರ ಸಮಿತಿ ಅಧ್ಯಕ್ಷ ಮಹೇಶ್ ಶೆಟ್ಟಿ ಕುಡುಪುಲಾಜೆ, ಬಿಜೆಪಿಯ ಹಿರಿಯ ಮುಖಂಡ ರುಗಳಾದ ಬೋಳ ಪ್ರಭಾಕರ್ ಕಾಮತ್, ಎಂ ಕೆ ವಿಜಯ ಕುಮಾರ್ ಉಪಸ್ಥಿತರಿದ್ದರು







