Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್‍ ಗೆಲ್ಲಿಸಿದರೆ ಜನಪರ...

ಕಾಂಗ್ರೆಸ್‍ ಗೆಲ್ಲಿಸಿದರೆ ಜನಪರ ಯೋಜನೆಗಳು ಜಾರಿಯಾಗಲಿವೆ: ವಿಜಯಪುರದಲ್ಲಿ ಎಂ. ಬಿ. ಪಾಟೀಲ್ ಪರ ನಟಿ ರಮ್ಯಾ ರೋಡ್ ಶೋ

6 May 2023 8:56 PM IST
share
ಕಾಂಗ್ರೆಸ್‍ ಗೆಲ್ಲಿಸಿದರೆ ಜನಪರ ಯೋಜನೆಗಳು ಜಾರಿಯಾಗಲಿವೆ: ವಿಜಯಪುರದಲ್ಲಿ ಎಂ. ಬಿ. ಪಾಟೀಲ್ ಪರ ನಟಿ ರಮ್ಯಾ ರೋಡ್ ಶೋ

ವಿಜಯಪುರ, 6: ಬಸವಣ್ಣನವರ ಕಾಯಕ ತತ್ವದಡಿ ಜನಸೇವೆ ಮಾಡುತ್ತಿರುವ ಎಂ. ಬಿ. ಪಾಟೀಲರು ಕರ್ನಾಟಕದ ಆಸ್ತಿಯಾಗಿದ್ದಾರೆ ಎಂದು ಖ್ಯಾತ ಚಲನಚಿತ್ರ ನಟಿ ರಮ್ಯಾ ಹೇಳಿದ್ದಾರೆ.

ತಿಕೋಟಾ ತಾಲೂಕಿನ ಜಾಲಗೇರಿ, ಜಾಲಗೇರಿ ಎಲ್.ಟಿ.1, ತಿಕೋಟಾ, ನಿಡೋಣಿ, ಬಬಲೇಶ್ವರಗಳಲ್ಲಿ ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಪರ ಪ್ರಚಾರ ಕೈಗೊಂಡು ರೋಡ್ ಶೋ ಕಾರ್ನರ್ ಮಿಟಿಂಗ್‍ನಲ್ಲಿ ಅವರು ಮಾತನಾಡಿದರು. 

ಶ್ರೀ ಸಿದ್ಧೇಶ್ವರ ಸ್ವಾಮೀಜಿ ಬೊಗಸೆ ನೀರನ್ನು ಕೇಳಿದರು. ಆದರೆ, ಎಂ. ಬಿ. ಪಾಟೀಲರು ಹೊಳೆಯನ್ನು ಈ ಕಡೆ ಹರಿಸಿ ಜಲಕ್ರಾಂತಿ ಮಾಡಿದ್ದಾರೆ. ಈ ಮೂಲಕ ಜನರ ಜೀವನ ಮಟ್ಟವನ್ನು ಶಾಶ್ವತವಾಗಿ ಸುದಾರಿಸಿದ್ದಾರೆ. ಇಂಥ ನಾಯಕರನ್ನು ಆಶೀರ್ವದಿಸಿ ಗೆಲ್ಲಿಸಿದರೆ ವಿಜಯಪುರ ಜಿಲ್ಲೆ ಅಷ್ಟೇ ಅಲ್ಲ. ಇಡೀ ನಾಡಿಗೆ ಒಳ್ಳೆಯದಾಗಲಿದೆ ಎಂದು ಹೇಳಿದರು.

ನಾನು ತಂದೆಯನ್ನು ಕಳೆದುಕೊಂಡಾಗ ಮಂಡ್ಯಕ್ಕೆ ಬಂದಿದ್ದ ಎಂ. ಬಿ. ಪಾಟೀಲರು ನೈತಿಕವಾಗಿ ಧೈರ್ಯ ತುಂಬಿದ್ದರು. ಅಲ್ಲದೇ ಚುನಾವಣೆಯಲ್ಲಿ ನಾನು ಸಂಸತ್ ಸದಸ್ಯೆಯಾಗಲು ಸಹರಿಸಿದ್ದಾರೆ. ಅಷ್ಟೇ ಅಲ್ಲ, ಇಡೀ ನಾಡಿನಾದ್ಯಂತ ಕೆಲಸ ಮಾಡಿ ವಿಜಯಪುರ ಜಿಲ್ಲೆಗೆ ಕೀರ್ತಿ ಮತ್ತು ಹೆಸರನ್ನು ತಂದಿದ್ದಾರೆ. ಜಿಲ್ಲೆ ಮತ್ತು ರಾಜ್ಯಕ್ಕೆ ಅವರ ಸೇವೆ ಅಗತ್ಯವಾಗಿದೆ. ಅವರನ್ನು ಎಲ್ಲರೂ ಬೆಂಬಲಿಸಿ ಗೆಲ್ಲಿಸಬೇಕು. ಈ ಬಾರಿ ಕಾಂಗ್ರೆಸ್‍ನ್ನು ಗೆಲ್ಲಿಸಿದರೆ ಜನರ ಪರ ಯೋಜನೆಗಳು ಜಾರಿಯಾಗಲಿವೆ ಎಂದು ಹೇಳಿದರು. 

ತಿಕೋಟಾದಲ್ಲಿ ಮಾತನಾಡಿದ ಆಶಾ ಎಂ. ಪಾಟೀಲ, ಎಂ. ಬಿ. ಪಾಟೀಲರ ಮೇಲೆ ತಾವೆಲ್ಲರೂ ಇಟ್ಟಿರುವ ಅಭಿಮಾನವನ್ನು ಉಳಿಸಿ ಬೆಳೆಸಬೇಕು. ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿ ಪ್ರಚಂಡ ಬಹುಮತದಿಂದ ಆರಿಸಿ ತರಬೇಕು. ಈ ಮೂಲಕ ಸರ್ವಜನರ ಸರ್ವಾಂಗೀಣ ಅಭಿವೃದ್ಧಿಗೆ ಬೆಂಬಲ ನೀಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ರೇಣುಕಾ ಸುನೀಲಗೌಡ ಪಾಟೀಲ, ಕಲ್ಪನಾ ಪಾಟೀಲ, ರಾಜುಗೌಡ ಪೋಲೀಸ್ ಪಾಟೀಲ, ಭಾಗೀರಥಿ ತೇಲಿ, ಗೀತಾಂಜಲಿ ಪಾಟೀಲ, ಪ್ರತಿಭಾ ಪಾಟೀಲ, ವಿದ್ಯಾರಾಣಿ ತುಂಗಳ, ಶ್ರೀಶೈಲಗೌಡ ಪಾಟೀಲ ನಿಡೋಣಿ, ವಿ.ಎಸ್.ಪಾಟೀಲ, ಈರನಗೌಡ ಬಿರಾದಾರ ಮುಂತಾದವರು ಉಪಸ್ಥಿತರಿದ್ದರು.

share
Next Story
X