Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚುನಾವಣಾ ಪ್ರಚಾರ: ಮಂಡ್ಯ...

ಚುನಾವಣಾ ಪ್ರಚಾರ: ಮಂಡ್ಯ ಜಿಲ್ಲೆಯಲ್ಲಿಂದು ದೇವೇಗೌಡ, ನಡ್ಡಾ, ಡಿಕೆಶಿಯಿಂದ ರೋಡ್ ಶೋ

6 May 2023 3:58 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಚುನಾವಣಾ ಪ್ರಚಾರ: ಮಂಡ್ಯ ಜಿಲ್ಲೆಯಲ್ಲಿಂದು ದೇವೇಗೌಡ, ನಡ್ಡಾ, ಡಿಕೆಶಿಯಿಂದ ರೋಡ್ ಶೋ

ಮಂಡ್ಯ, ಮೇ 6: ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಕಾಂಗ್ರೆಸ್ ಬೆಂಬಲಿತ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ರೋಡ್ ಶೋ ನಡೆಸಿ ಮತಯಾಚಿಸಿದರು.

ಎಚ್.ಡಿ.ದೇವೇಗೌಡರು ಮದ್ದೂರು, ಕೆ.ಎಂ.ದೊಡ್ಡಿ, ಕೆ.ಹೊನ್ನಲಗೆರೆಯಲ್ಲಿ ಪಕ್ಷದ ಅಭ್ಯರ್ಥಿ ಶಾಸಕ ಡಿ.ಸಿ.ತಮ್ಮಣ್ಣ ಪರವಾಗಿ, ಜೆ.ಪಿ.ನಡ್ಡಾ ಮದ್ದೂರಿನಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಪಿ.ಸ್ವಾಮಿ ಪರವಾಗಿ, ಡಿ.ಕೆ.ಶಿವಕುಮಾರ್ ಪಕ್ಷದ ಅಭ್ಯರ್ಥಿ ಎನ್.ಚಲುವರಾಯಸ್ವಾಮಿ ಪರವಾಗಿ ಕೊಪ್ಪದಲ್ಲಿ, ಎಂ.ಬಿ.ಪಾಟೀಲ್ ಮಳವಳ್ಳಿಯಲ್ಲಿ, ದರ್ಶನ್ ಪುಟ್ಟಣ್ಣಯ್ಯ ದುದ್ದ ಹೋಬಳಿಯಲ್ಲಿ ರೋಡ್ ಶೋ ನಡೆಸಿದರು.

ರೋಡ್ ಶೋ ವೇಳೆ ಹೊಳಲು ಗ್ರಾಮದಲ್ಲಿ ಮಾತನಾಡಿದ ಮೇಲುಕೋಟೆ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ, ತನ್ನನ್ನು ಗೆಲ್ಲಿಸುವ ಮೂಲಕ ನಿಮ್ಮಗಳ ಸೇವೆಗೆ ಅವಕಾಶ ಮಾಡಿಕೊಡುವಂತೆ ಮತದಾರರಲ್ಲಿ ಮನವಿ ಮಾಡಿದರು.

ಯುವ ಮುಖಂಡ ಚಿಕನ್ ರವಿ  ಬಿಜೆಪಿ ತೊರೆದು ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಬೆಂಬಲ ಸೂಚಿಸಿ ರೈತಸಂಘಕ್ಕೆ ಸೇರ್ಪಡೆಗೊಂಡರು.

ಮಾಜಿ ಶಾಸಕ ಎಚ್.ಬಿ.ರಾಮು, ಕಾಂಗ್ರೆಸ್ ಮುಖಂಡರಾದ ರವಿ ಬೋಜೇಗೌಡ, ಡಾ.ಎಚ್.ಎನ್.ರವೀಂದ್ರ, ಸಿ.ಕೆ.ನಾಗರಾಜು, ಸಿ.ಡಿ.ಗಂಗಾಧರ್, ಗ್ರಾಪಂ ಅಧ್ಯಕ್ಷ ಎಚ್.ಎಲ್.ಅಭಿನಂದನ್, ನಂದೀಶ್, ಜಟ್ಟಿ ಕುಮಾರ್, ರೈತ ಸಂಘದ ಯುವ ಮುಖಂಡ ಚಂದನ್, ಚೇತನ್, ಶ್ಯಾಮ್, ಪಟೇಲ್ ರಾಮು, ಸೂರಿ, ಅಭಿ, ಮಾಜಿ ಗ್ರಾಪಂ ಅಧ್ಯಕ್ಷೆ ಲಿಂಗರಾಜಮ್ಮ, ಡೇರಿ ಮಾಜಿ ಅಧ್ಯಕ್ಷೆ ಪದ್ಮಾ, ಶಾಂತಮ್ಮ, ಲತಾ ಶಂಕರ್, ವಿನುತಾ ಇತರರು ಭಾಗವಹಿಸಿದ್ದರು.

ಕೆ.ಎಂ.ದೊಡ್ಡಿಯಲ್ಲಿ ಏರ್ಪಡಿಸಿದ್ದ ಜೆಡಿಎಸ್ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಎಚ್.ಡಿ.ದೇವೇಗೌಡ, ತಮ್ಮಣ್ಣ ಬರಿ ರಾಜಕಾರಣಿ ಮಾತ್ರವಲ್ಲ, ತಾಂತ್ರಿಕ ತಜ್ಞರು.  ರಾಜ್ಯದ ಆಗುಹೋಗುಗಳ ಬಗ್ಗೆ ತಿಳಿದಿರುವರು. ಹಾಗಾಗಿ ಜನರು ಅವರನ್ನು ಮತ್ತೆ ಆಯ್ಕೆಮಾಡುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದರು.

ತಮ್ಮಣ್ಣರಿಂದ ರಾಜಕೀಯವಾಗಿ ಬೆಳೆದು ಬಂದು ಅವರಿಗೇ ವಂಚನೆ ಮಾಡುತ್ತಿರುವ ವ್ಯಕ್ತಿಯ ಹೆಸರು ಹೇಳುವುದು ನಮ್ಮಂತಹವರಿಗೆ ಉಚಿತವಲ್ಲ ಎಂದು ಬಿಜೆಪಿ ಅಭ್ಯರ್ಥಿ ಎಸ್.ಪಿ.ಸ್ವಾಮಿ ಅವರನ್ನು ಟೀಕಿಸಿದರು. ತಮ್ಮಣ್ಣ ಅವರನ್ನು ಗೆಲ್ಲಿಸುವ ಮೂಲಕ ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿ ಆಗುವಂತೆ ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.

ಶಾಸಕ ಡಿ.ಸಿ.ತಮ್ಮಣ್ಣ, ಮಾಜಿ ಶಾಸಕರಾದ ಕಲ್ಪನಾ ಸಿದ್ದರಾಜು, ಕೆ.ಟಿ.ಶ್ರೀಕಂಠೇಗೌಡ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಝಫರುಲ್ಲಾ ಖಾನ್, ಜಿಪಂ ಮಾಜಿ ಅಧ್ಯಕ್ಷ ಎಸ್.ಗುರುಚರಣ್,  ಸಂತೋಷ್ ತಮ್ಮಣ್ಣ, ಸೌಮ್ಯ ರಮೇಶ್, ಕವಿತಾ ಸಂತೋಷ್, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಚಿಕ್ಕತಿಮ್ಮೇಗೌಡ, ಹನುಮಂತೇಗೌಡ, ಕೆ.ಪಿ.ದೊಡ್ಡಿ ಶಿವರಾಮು, ಮಾದನಾಯಕನಹಳ್ಳಿ ರಾಜಣ್ಣ, ಇತರ ಮುಖಂಡರು ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X