ಬೆಳ್ತಂಗಡಿ: ಬಿಜೆಪಿ ಚುನಾವಣಾ ಪ್ರಚಾರ ವಾಹನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಫೋಟೊ; ವಾಹನ ವಶಕ್ಕೆ

ಬೆಳ್ತಂಗಡಿ: ಬಿಜೆಪಿಯ ಚುನಾವಣಾ ಪ್ರಚಾರದ ವಾಹನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಫೋಟೊವನ್ನು ಉಪಯೋಗಿಸಿದ ಬಗ್ಗೆ ನೀಡಿದ ದೂರಿನಂತೆ ಬೆಳ್ತಂಗಡಿಯಲ್ಲಿ ಬಿಜೆಪಿಯ ಚುನಾವಣಾ ಪ್ರಚಾರ ವಾಹನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಬೆಳ್ತಂಗಡಿ ಬಸ್ ನಿಲ್ದಾಣದ ಸಮೀಪ ಚುನಾವಣಾ ಪ್ರಚಾರ ಮಾಡುತ್ತಿದ್ದ ವೇಳೆ ಎಲ್.ಇ.ಡಿ.ಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಫೋಟೊವನ್ನು ಉಪಯೋಗಿಸುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ವಾಹನದಲ್ಲಿ ಶ್ರೀಕ್ಷೇತ್ರದ ಫೋಟೊ ಬಳಸುತ್ತಿದ್ದ ಬಗ್ಗೆ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದರು ಹಿನ್ನಲೆಯಲ್ಲಿ ಚುನಾವಣಾಧಿಕಾರಿಗಳು ಇಂದು ವಾಹನವನ್ನು ವಶಪಡಿಸಿಕೊಂಡಿದ್ದಾರೆ.
Next Story