Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣದ...

ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣದ ವೇಳೆ ವಿದ್ಯುತ್ ಕಡಿತ !

6 May 2023 11:34 PM IST
share
ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣದ ವೇಳೆ ವಿದ್ಯುತ್ ಕಡಿತ !

ಬರಿಪಾದ, ಮೇ 6: ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಬರಿಪಾದದಲ್ಲಿರುವ ಮಹಾರಾಜ ಶ್ರೀರಾಮ್ ಚಂದ್ರ ಭಂಜ್‌ದೇವ್ ವಿಶ್ವವಿದ್ಯಾನಿಲಯದಲ್ಲಿ ಶನಿವಾರ ನಡೆದ ಘಟಿಕೋತ್ಸವದಲ್ಲಿ ರಾಷ್ಟ್ರಪತಿ ಮುರ್ಮು ಅವರು ಭಾಷಣ ಮಾಡುತ್ತಿರುವ ಸಂದರ್ಭ ವಿದ್ಯುತ್ ಕೈಕೊಟ್ಟ ಘಟನೆ ನಡೆದಿದೆ. ಆದರೆ, ಮೈಕ್ ಕೆಲಸ ಮಾಡುತ್ತಿದ್ದುದರಿಂದ ಅವರು ಮಾತು ಮುಂದುವರಿಸಿದ್ದರು. 

ವಿಶ್ವವಿದ್ಯಾನಿಲಯದ ಘಟಿಕೋತ್ಸವದ ಕಾರ್ಯಕ್ರಮದಲ್ಲಿ ಪೂರ್ವಾಹ್ನ  11.56ರಿಂದ ಅಪರಾಹ್ನ 12.05ರ ವರೆಗೆ ವಿದ್ಯುತ್ ಕಡಿತವಾಗಿತ್ತು. ಜನರೇಟರ್ ಕಾರ್ಯ ನಿರ್ವಹಿಸದೇ ಇರುವುದರಿಂದ ಸಭಾಂಗಣದಲ್ಲಿ ಕತ್ತಲೆ ತುಂಬಿತ್ತು. ಈ ನಡುವೆ ರಾಷ್ಟ್ರಪತಿ ಅವರು ಪೋಡಿಯಂನಲ್ಲಿ ಅಳವಡಿಸಿದ್ದ ತಾತ್ಕಾಲಿಕ ಲೈಟ್‌ನಿಂದ ಭಾಷಣ ಮುಂದುವರಿಸಿದರು. ಕಾರ್ಯಕ್ರಮದಲ್ಲಿ ಹಾಜರಿದ್ದ ಸಭಿಕರು ಕೂಡ ಕತ್ತಲೆಯಲ್ಲೇ ಅವರ ಭಾಷಣ ಕೇಳಿದರು. 
ವಿದ್ಯುತ್ ಕಡಿತಕ್ಕೆ ವಿಶ್ವವಿದ್ಯಾನಿಲಯದ ಕುಲಪತಿ ಸಂತೋಷ್ ಕುಮಾರ್ ತ್ರಿಪಾಠಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಲ್ಲಿ ಕ್ಷಮೆ ಯಾಚಿಸಿದ್ದಾರೆ.  ಈ ಘಟನೆ ಬಗ್ಗೆ ತನಿಖೆ ನಡೆಸುವುದಾಗಿ ಹಾಗೂ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. 

ಈ ನಡುವೆ ವಿದ್ಯುತ್ ಕಡಿತಕ್ಕಾಗಿ ಎಲೆಕ್ಟ್ರೀಷಿಯನ್ ಜಯಂತ್ ತ್ರಿಪಾಠಿ ಅವರನ್ನು ವಿಶ್ವವಿದ್ಯಾನಿಲಯದ ಅಧಿಕಾರಿಗಳು ಅಮಾನತುಗೊಳಿಸಿದ್ದಾರೆ. ಅಲ್ಲದೆ, ಲೋಪದೋಷಗಳ ತನಿಖೆಗೆ ಹಾಗೂ ಜವಾಬ್ದಾರಿ ನಿಗದಿಪಡಿಸಲು ಪಿಜಿ ಕೌನ್ಸಿಲ್ ಅಧ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿಗಳನ್ನು ಒಳಗೊಂಡ ಮೂರು ಸದಸ್ಯರ ತಂಡವನ್ನು ನಿಯೋಜಿಸಲಾಗಿದೆ.

VIDEO | President Droupadi Murmu continued her speech during the power outage at MSCB University in Mayurbhanj’s Baripada. pic.twitter.com/NSchUHbCzG

— Press Trust of India (@PTI_News) May 6, 2023
share
Next Story
X