ತರೀಕೆರೆ ಮಾಜಿ ಶಾಸಕರ ಮನೆಯ ಬಾಗಿಲು ಮುರಿದು 1 ಕೆಜಿ ಚಿನ್ನ ಸಹಿತ ನಗದು ದರೋಡೆ
15 ಮಂದಿಯ ತಂಡದಿಂದ ಕೃತ್ಯ

15 ಮಂದಿಯ ತಂಡದಿಂದ ಕೃತ್ಯ
ಚಿಕ್ಕಮಗಳೂರು, ಮೇ 7: ತರೀಕೆರೆ ಮಾಜಿ ಶಾಸಕ ಎಸ್.ಎಂ.ನಾಗರಾಜ್ ಅವರ ಮನೆಗೆ ಮಾರಕಾಸ್ತ್ರಗಳೊಂದಿಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗ-ನಗದು ದರೋಡೆಗೈದ ಘಟನೆ ಅಜ್ಜಂಪುರ ತಾಲೂಕಿನ ಗಡಿಹಳ್ಳಿಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ಅಜ್ಜಂಪುರ ತಾಲೂಕಿನ ಗಡಿಹಳ್ಳಿಯಲ್ಲಿರುವ ಮಾಜಿ ಶಾಸಕ ಎಸ್.ಎಂ.ನಾಗರಾಜ್ ಅವರ ತೋಟದ ಮನೆಯಲ್ಲಿ ಶನಿವಾರ ತಡರಾತ್ರಿ ಈ ದರೋಡೆ ನಡೆದಿದೆ. ಬಂದೂಕು, ಮಚ್ಚು ಸಹಿತ ಮಾರಕಾಸ್ತ್ರಗಳೊಂದಿಗೆ ಮನೆಯ ಬಾಗಿಲು ಮುರಿದು ಒಳ ನುಗ್ಗಿದ 15ಕ್ಕೂ ಅಧಿಕ ಮಂದಿಯಿದ್ದ ದುಷ್ಕರ್ಮಿಗಳ ತಂಡ ಎಸ್.ಎಂ.ನಾಗರಾಜ್ ಅವರ ಮೇಲೆ ಹಲ್ಲೆ ನಡೆಸಿದೆ. ಬಳಿಕ ಒಂದು ಕೆಜಿಗೂ ಅಧಿಕ ಚಿನ್ನಾಭರಣ, ನಗದು ದರೋಡೆಗೈದು ಪರಾರಿಯಾಗಿದೆ ಎಂದು ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮ ಪ್ರಶಾಂತ್ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Next Story





