Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಚುನಾವಣಾ ಜಾಹಿರಾತು; ಪೂರ್ವಾನುಮತಿ...

ಚುನಾವಣಾ ಜಾಹಿರಾತು; ಪೂರ್ವಾನುಮತಿ ಕಡ್ಡಾಯ: ಚುನಾವಣಾ ಆಯೋಗ

7 May 2023 7:28 PM IST
share
ಚುನಾವಣಾ ಜಾಹಿರಾತು; ಪೂರ್ವಾನುಮತಿ ಕಡ್ಡಾಯ: ಚುನಾವಣಾ ಆಯೋಗ

ಉಡುಪಿ, ಮೇ 7: ಮತದಾನದ ದಿನ ಹಾಗೂ ಮತದಾನ ಪೂರ್ವ ದಿನ ದಂದು ಯಾವುದೇ ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳು ಅಥವಾ ವ್ಯಕ್ತಿ ಅಥವಾ ಯಾವುದೇ ಸಂಘಟನೆಗಳು, ತಮ್ಮ ರಾಜಕೀಯ ಜಾಹಿರಾತುಗಳ ವಿಷಯವನ್ನು ರಾಜ್ಯ ಮಟ್ಟದ/ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ (ಎಂಸಿಎಂಸಿ)ಯ ಪೂರ್ವಾನುಮತಿ ಪಡೆಯುವು ದನ್ನು ಕೇಂದ್ರ ಚುನಾವಣಾ ಆಯೋಗವು ಸಂವಿಧಾನದ ಅನುಚ್ಛೇದ 324 ರಂತೆ ಹಾಗೂ ಅದರಿಂದ ಪ್ರದತ್ತವಾಗುವ ಅಧಿಕಾರದಡಿ ಕಡ್ಡಾಯಗೊಳಿಸಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ-2023 ಅಂಗವಾಗಿ ಮೇ 10ರಂದು ಮತದಾನ ನಡೆಯಲಿದ್ದು, ಮುದ್ರಣ ಮಾಧ್ಯಮಗಳಲ್ಲಿ ದಾರಿ ತಪ್ಪಿಸುವ ಮತ್ತು ಕಾನೂನು ಉಲ್ಲಂಘಿಸುವ ಜಾಹಿರಾತುಗಳನ್ನು ಪ್ರಕಟಿಸುತ್ತಿರುವುದನ್ನು ಕೇಂದ್ರ ಚುನಾವಣಾ ಆಯೋಗ ಗಮನಿಸಿದೆ. ಚುನಾವಣೆಯ ಅಂತಿಮ ಹಂತದಲ್ಲಿ ಇಂತಹ ಜಾಹಿರಾತುಗಳು ಇಡೀ ಚುನಾವಣಾ ಪ್ರಕ್ರಿಯೆಯನ್ನು  ಕಲುಷಿತ ಗೊಳಿಸುವ ಸಾಧ್ಯತೆಯಿದ್ದು, ಇದರಿಂದ ಬಾಧಿತರಾದ ಅಭ್ಯರ್ಥಿ ಗಳು ಮತ್ತು ಪಕ್ಷಗಳು ಅವುಗಳಿಗೆ ಸ್ಪಷ್ಟೀಕರಣ ಅಥವಾ ಖಂಡಿಸುವ ಅವಕಾಶವನ್ನು ಕಳೆದು ಕೊಂಡಂತಾಗುತ್ತದೆ.
ಈ ಹಿನ್ನೆಲೆಯಲ್ಲಿ ಪ್ರಚೋದಿಸುವ, ದಾರಿ ತಪ್ಪಿಸುವ ಮತ್ತು ದ್ವೇಷಪೂರಿತ ವಾದ ಜಾಹಿರಾತುಗಳನ್ನು ಮುದ್ರಣ ಮಾಧ್ಯಮಗಳಲ್ಲಿ ಪ್ರಕಟವಾಗುವುದನ್ನು ತಡೆಯಲು ಹಾಗೂ ಯಾವುದೇ ಅಹಿತಕರ ಘಟನೆಗಳು ಜರಗದಂತೆ ಕ್ರಮ ವಹಿಸಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಮತದಾನದ ದಿನ ಮೇ 10 ಹಾಗೂ ಮತದಾನದ ಪೂರ್ವ ದಿನ ಮೇ 9ರಂದು ಮುದ್ರಣ ಮಾಧ್ಯಮದಲ್ಲಿ ಪ್ರಕಟವಾಗುವ ರಾಜಕೀಯ ಜಾಹಿರಾತುಗಳಿಗೆ ಈ ನಿಯಮ ಅನ್ವಯಿಸುತ್ತದೆ.

ಚುನಾವಣಾ ಜಾಹಿರಾತು ಪ್ರಕಟಿಸಲು ಬಯಸುವ ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳು ಅಥವಾ ವ್ಯಕ್ತಿಯು ಅಥವಾ ಯಾವುದೇ ಸಂಘಟನೆಗಳು ಮೇ 9 ಹಾಗೂ 10ರಂದು ಮುದ್ರಣ ಮಾಧ್ಯಮಗಳಲ್ಲಿ ಜಾಹಿ ರಾತು ಪ್ರಕಟಿಸಲು ಆಯಾ ಜಾಹಿರಾತುಗಳನ್ನು ಪ್ರಕಟವಾಗುವ ಎರಡು ದಿನಗಳ ಮುಂಚೆ ಅಂದರೆ ಮೇ 7ರೊಳಗೆ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ (ಎಂಸಿಎಂಸಿ)ಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಮೇ 9 ಹಾಗೂ 10 ರಂದು ಮುದ್ರಣ ಮಾಧ್ಯಮದಲ್ಲಿ ಜಾಹಿರಾತು ಪ್ರಕಟಿಸಲು ರಾಜಕೀಯ ಪಕ್ಷಗಳು ರಾಜ್ಯ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಯಲ್ಲಿ ಹಾಗೂ ಚುನಾವಣಾ ಅಭ್ಯರ್ಥಿಗಳು ಆಯಾ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಯಲ್ಲಿ ಜಾಹಿರಾತುಗಳ ಪೂರ್ವಾ ನುಮತಿಯನ್ನು ಪಡೆಯಬಹುದಾಗಿದೆ.

ಚುನಾವಣಾ ಜಾಹಿರಾತುಗಳ ಪೂರ್ವಾನುಮತಿ ಕಾರ್ಯವನ್ನು ರಾಜ್ಯ ಹಾಗೂ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಯು ತ್ವರಿತವಾಗಿ ನಿರ್ವಹಿಸಬೇಕೆಂದು ಈ ಮೂಲಕ ಸೂಚಿಸ ಲಾಗಿದೆ. ಕೇಂದ್ರ ಚುನಾವಣಾ ಆಯೋಗದ ಮೇಲಿನ ನಿರ್ದೇಶನವನ್ನು ಎಲ್ಲಾ ರಾಜಕೀಯ ಪಕ್ಷಗಳ ಅಧ್ಯಕ್ಷರು, ಚುನಾವಣಾ ಅಭ್ಯರ್ಥಿಗಳು ಹಾಗೂ ರಾಜ್ಯದ ಎಲ್ಲ ಮುದ್ರಣ ಮಾಧ್ಯಮ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ.

share
Next Story
X