ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಆನೆ ಬಲರಾಮ ಸಾವು

ಮೈಸೂರು: ನಾಡಹಬ್ಬ ದಸರಾ ಜಂಬೂ ಸವಾರಿಯಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ ಆನೆ ಅನಾರೋಗ್ಯದ ಕಾರಣದಿಂದ ರವಿವಾರ ಮೃತಪಟ್ಟಿದೆ.
ತೀವ್ರ ಅಸ್ವಸ್ಥಗೊಂಡಿದ್ದ ಬಲರಾಮ ಆನೆಗೆ ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಆಹಾರ ನಿರಾಕರಿಸುತ್ತಿರುವುದರಿಂದ ನಿತ್ರಾಣಗೊಂಡಿತ್ತು. ತಜ್ಞ ವೈದ್ಯರಿಂದ ಎಲ್ಲ ರೀತಿಯಿಂದಲೂ ಚಿಕಿತ್ಸೆ ನೀಡಲಾಗಿತ್ತು. ಆದರೆ ವೈದ್ಯರು ನೀಡುತ್ತಿದ್ದ ಚಿಕಿತ್ಸೆಗೆ ಸ್ಪಂದಿಸದೇ ರವಿವಾರ ಕೊನೆಯುಸಿರೆಳೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೇಬರದ ಅಂತ್ಯಕ್ರಿಯೆಯನ್ನು ಸೋಮವಾರ ಬೆಳಿಗ್ಗೆ 11ರ ಸುಮಾರಿಗೆ ನಡೆಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
'ಬಲರಾಮ’ ಇನ್ನಿಲ್ಲ ಎಂಬ ಸುದ್ದಿ ತಿಳಿದು ನೋವಾಯಿತು: ಸಿದ್ದರಾಮಯ್ಯ
'ಮೈಸೂರು ದಸರೆಯ ಕೇಂದ್ರ ಬಿಂದುವಾದ ಜಂಬೂಸವಾರಿಯನ್ನು ಒಂದು ದಶಕಕ್ಕೂ ಹೆಚ್ಚು ಕಾಲ ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟು ಜನರ ಪ್ರೀತಿಪಾತ್ರವಾಗಿದ್ದ ಆನೆ ‘ಬಲರಾಮ’ ಇನ್ನಿಲ್ಲ ಎಂಬ ಸುದ್ದಿ ತಿಳಿದು ನೋವಾಯಿತು. 14 ಬಾರಿ ಚಿನ್ನದ ಅಂಬಾರಿ ಹೊರುವ ಮೂಲಕ ತಾಯಿ ಚಾಮುಂಡೇಶ್ವರಿಯ ಸೇವೆಗೈದಿದ್ದ ಬಲರಾಮ ಇಂದು ನಮ್ಮ ನಡುವೆ ಇಲ್ಲದಿದ್ದರೂ, ಅವನ ನೆನಪು ನಮ್ಮ ಮನದಲ್ಲಿ ಶಾಶ್ವತವಾಗಿರಲಿದೆ' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.
ಮೈಸೂರು ದಸರೆಯ ಕೇಂದ್ರ ಬಿಂದುವಾದ ಜಂಬೂಸವಾರಿಯನ್ನು ಒಂದು ದಶಕಕ್ಕೂ ಹೆಚ್ಚು ಕಾಲ ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟು ಜನರ ಪ್ರೀತಿಪಾತ್ರವಾಗಿದ್ದ ಆನೆ ‘ಬಲರಾಮ’ ಇನ್ನಿಲ್ಲ ಎಂಬ ಸುದ್ದಿ ತಿಳಿದು ನೋವಾಯಿತು.
— Siddaramaiah (@siddaramaiah) May 7, 2023
14 ಬಾರಿ ಚಿನ್ನದ ಅಂಬಾರಿ ಹೊರುವ ಮೂಲಕ ತಾಯಿ ಚಾಮುಂಡೇಶ್ವರಿಯ ಸೇವೆಗೈದಿದ್ದ ಬಲರಾಮ ಇಂದು ನಮ್ಮ ನಡುವೆ ಇಲ್ಲದಿದ್ದರೂ, ಅವನ ನೆನಪು… pic.twitter.com/6RW7ocSl7J







