Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಲಸಿಗ ಕಾರ್ಮಿಕರಿಗೆ ಹಲ್ಲೆ ಕುರಿತು ನಕಲಿ...

ವಲಸಿಗ ಕಾರ್ಮಿಕರಿಗೆ ಹಲ್ಲೆ ಕುರಿತು ನಕಲಿ ವೀಡಿಯೋ ಪ್ರಕರಣ: ಯೂಟ್ಯೂಬರ್‌ ಕಶ್ಯಪ್‌ ಅರ್ಜಿ ತಿರಸ್ಕರಿಸಿದ ಸುಪ್ರೀಂ

ಸ್ಥಿರ ಸರಕಾರವಿರುವ ತಮಿಳುನಾಡಿನಂತಹ ರಾಜ್ಯದಲ್ಲಿ ನೀವು ಅಶಾಂತಿ ಹರಡಲು ಸಾಧ್ಯವಿಲ್ಲ ಎಂದ ನ್ಯಾಯಾಲಯ

8 May 2023 1:21 PM IST
share
ವಲಸಿಗ ಕಾರ್ಮಿಕರಿಗೆ ಹಲ್ಲೆ ಕುರಿತು ನಕಲಿ ವೀಡಿಯೋ ಪ್ರಕರಣ: ಯೂಟ್ಯೂಬರ್‌ ಕಶ್ಯಪ್‌ ಅರ್ಜಿ ತಿರಸ್ಕರಿಸಿದ ಸುಪ್ರೀಂ
ಸ್ಥಿರ ಸರಕಾರವಿರುವ ತಮಿಳುನಾಡಿನಂತಹ ರಾಜ್ಯದಲ್ಲಿ ನೀವು ಅಶಾಂತಿ ಹರಡಲು ಸಾಧ್ಯವಿಲ್ಲ ಎಂದ ನ್ಯಾಯಾಲಯ

ಹೊಸದಿಲ್ಲಿ: ತಮಿಳುನಾಡಿನಲ್ಲಿ ವಲಸಿಗ ಕಾರ್ಮಿಕರ ಮೇಲೆ ಹಲ್ಲೆ ನಡೆಯುತ್ತಿದೆ ಎಂಬ ಕುರಿತು ನಕಲಿ ಸುದ್ದಿಗಳನ್ನು ಮತ್ತು ವೀಡಿಯೋಗಳನ್ನು ತನ್ನ ಯೂಟ್ಯೂಬ್‌ ಚಾನಲ್‌ ಮೂಲಕ ಹರಡಿದ ಆರೋಪ ಎದುರಿಸುತ್ತಿರುವ ಯೂಟ್ಯೂಬರ್‌ ಮನೀಶ್‌ ಕಶ್ಯಪ್‌ ತನ್ನ ವಿರುದ್ಧ ಬಿಹಾರ ಮತ್ತು ತಮಿಳುನಾಡಿನಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳನ್ನು ಒಟ್ಟುಗೂಡಿಸಬೇಕೆಂದು ಕೋರಿ ಸಲ್ಲಿಸಿರುವ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ಇದೇ ಆರೋಪಕ್ಕೆ ಸಂಬಂಧಿಸಿದಂತೆ  ರಾಷ್ಟ್ರೀಯ ಸುರಕ್ಷತೆ ಕಾಯಿದೆಯಡಿ ತನ್ನ ಬಂಧನವನ್ನೂ ರದ್ದುಗೊಳಿಸಬೇಕೆಂದು ಆತ ಸಲ್ಲಿಸಿದ್ದ ಅರ್ಜಿಯನ್ನೂ ಪರಿಗಣಿಸಲು ಮುಖ್ಯನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌, ನ್ಯಾಯಮೂರ್ತಿ ಪಿ ಎಸ್‌ ನರಸಿಂಹ ಮತ್ತು ನ್ಯಾಯಮೂರ್ತಿ ಜೆ ಬಿ ಪರ್ದಿವಾಲ ಅವರ ಪೀಠ ನಿರಾಕರಿಸಿದೆ.

ಆದರೆ ಇದೇ ಅರ್ಜಿಗಳನ್ನುಹೈಕೋರ್ಟಿಗೆ ಸಲ್ಲಿಸುವ ಸ್ವಾತಂತ್ರ್ಯವನ್ನು ಸುಪ್ರೀಂ ಕೋರ್ಟ್‌ ಕಶ್ಯಪ್‌ ಗೆ ನೀಡಿದೆ.

“ಒಂದು ಶಾಂತ ರಾಜ್ಯವಿದೆ, ತಮಿಳುನಾಡು, ಅಲ್ಲಿನ ಶಾಂತಿ ಕದಡಲು ನೀವು ಏನು ಬೇಕಾದರೂ ಸುದ್ದಿ ಹರಡಿಸುತ್ತೀರಿ, ಇದನ್ನು ಆಲಿಸಲು ನಾವು ಸಿದ್ಧರಿಲ್ಲ,” ಎಂದು ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿಗಳು ಮೌಖಿಕವಾಗಿ ಪ್ರತಿಕ್ರಿಯಿಸಿದರು.

ವಿಚಾರಣೆ ಆರಂಭಿಸುತ್ತಲೇ ಪ್ರತಿಕ್ರಿಯಿಸಿದ ಸಿಜೆಐ “ಏನು ಮಾಡಲು ಸಾಧ್ಯ? ನೀವು ಈ ನಕಲಿ ವೀಡಿಯೋ ತಯಾರಿಸಿದ್ದೀರಿ,” ಎಂದರು.

ಕಶ್ಯಪ್‌ ಪರ ಹಾಜರಿದ್ದ ಹಿರಿಯ ವಕೀಲ ಮನೀಂದರ್‌ ಸಿಂಗ್‌ ಪ್ರತಿಕ್ರಿಯಿಸಿ ಕೆಲ ಮುಖ್ಯವಾಹಿನಿ ದಿನಪತ್ರಿಕೆಗಳು ಪ್ರಕಟಿಸಿದ ಸುದ್ದಿಯ ಆಧಾರದಲ್ಲಿ ವೀಡಿಯೋ ತಯಾರಿಸಲಾಗಿತ್ತು, ಕಶ್ಯಪ್‌ ಅವರನ್ನು ಬಂಧಿಸಿದ್ದರೆ ಅಂತಹುದೇ ಸುದ್ದಿ ಪ್ರಕಟಿಸಿದ ಇತರ ಪತ್ರಿಕೆಗಳ ಪತ್ರಕರ್ತರನ್ನೂ ಅದೇ ಕಾಯಿದೆಯಡಿ ಬಂಧಿಸಬೇಕು ಎಂದು ಹೇಳಿದರು.

ತಮಿಳುನಾಡಿನಲ್ಲಿ ದಾಖಲಾದ ಎಲ್ಲಾ ಎಫ್‌ಐಆರ್‌ಗಳನ್ನು ಒಟ್ಟುಗೂಡಿಸಿ  ಮೊದಲ ಎಫ್‌ಐಆರ್‌ ದಾಖಲಾದ ಬಿಹಾರಕ್ಕೆ ವರ್ಗಾಯಿಸಬೇಕೆಂದು ಕೋರಿದರು. ಇದಕ್ಕೆ ಸುಪ್ರೀಂ ಕೋರ್ಟ್‌ ಸಮ್ಮಿತಿಸಿಲ್ಲ.

ತಮಿಳುನಾಡು ಸರ್ಕಾರದ ಪರ ಹಾಜರಿದ್ದ ಹಿರಿಯ ವಕೀಲ ಕಪಿಲ್‌ ಸಿಬಲ್‌ ಪ್ರತಿಕ್ರಿಯಿಸಿ, ಅರ್ಜಿದಾರರು ಮದ್ರಾಸ್‌ ಹೈಕೋರ್ಟಿಗೆ ತಮ್ಮ ಅಪೀಲಿನೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೇಳಿದರು. ಅಷ್ಟೇ ಅಲ್ಲದೆ ಅರ್ಜಿದಾರ ಪತ್ರಕರ್ತನಲ್ಲ, ಬದಲು ಬಿಹಾರದ ಚುನಾವಣೆಯೊಂದರಲ್ಲಿ ಸ್ಪರ್ಧಿಸಿದ್ದ ರಾಜಕಾರಣಿ ಎಂದರು.

share
Next Story
X