ಪಂಜಾಬ್‌ನ ಗೋಲ್ಡನ್ ಟೆಂಪಲ್ ಬಳಿ 3 ದಿನಗಳಲ್ಲಿ ಎರಡನೇ ಬಾರಿ ಸ್ಫೋಟ

ಅಮೃತಸರ: ಇಲ್ಲಿನ ಗೋಲ್ಡನ್ ಟೆಂಪಲ್ ಬಳಿಯ ಹೆರಿಟೇಜ್ ಸ್ಟ್ರೀಟ್‌ನಲ್ಲಿ ಮೇ 6 ರಂದು ಸ್ಫೋಟ ಸಂಭವಿಸಿದ ಸ್ಥಳಕ್ಕೆ ಸಮೀಪದಲ್ಲೇ ಸೋಮವಾರ ಬೆಳಗ್ಗೆ ಮತ್ತೊಂದು ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದಿನ ಸ್ಫೋಟದಲ್ಲಿ ಯಾರೂ ಗಾಯಗೊಂಡಿಲ್ಲ ಅಥವಾ ಯಾವುದೇ ಹಾನಿ ಸಂಭವಿಸಿಲ್ಲ. ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಶನಿವಾರ ಗೋಲ್ಡನ್ ಟೆಂಪಲ್‌ಗೆ ಹೋಗುವ ಹೆರಿಟೇಜ್ ಸ್ಟ್ರೀಟ್‌ನಲ್ಲಿ ಸ್ಫೋಟ ಸಂಭವಿಸಿತ್ತು. ಇದೀಗ ಅದೇ ಸ್ಥಳದಲ್ಲಿ ಮತ್ತೊಂದು ಸ್ಫೋಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಸ್ಫೋಟವು ಬೆಳಿಗ್ಗೆ 6:30 ರ ಸುಮಾರಿಗೆ ವರದಿಯಾಗಿದೆ. ಪೊಲೀಸರು ಹಾಗೂ ವಿಧಿ ವಿಜ್ಞಾನ ತಂಡಗಳು ತಕ್ಷಣವೇ ಸ್ಥಳಕ್ಕೆ ಆಗಮಿಸಿ ತನಿಖೆಗಾಗಿ ಮಾದರಿಗಳನ್ನು ಸಂಗ್ರಹಿಸಲು ಆರಂಭಿಸಿದವು.
ಎರಡು ಸ್ಫೋಟಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ
Next Story





