ಎಸೆಸೆಲ್ಸಿ ಪರೀಕ್ಷೆ: ಸಯ್ಯಿದ್ ಮದನಿ ಹಝ್ರತ್ ಶಾಲೆಗೆ 100% ಫಲಿತಾಂಶ

ಉಳ್ಳಾಲ: ಇಲ್ಲಿನ ಸಯ್ಯಿದ್ ಮದನಿ ದರ್ಗಾ ಸಮಿತಿ ಮತ್ತು ಸಯ್ಯಿದ್ ಮದನಿ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಹಝ್ರತ್ ಸಯ್ಯಿದ್ ಮದನಿ ಆಂಗ್ಲ ಮಾಧ್ಯಮ ಶಾಲೆಯು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ಪಡೆದು ಉತ್ತಮ ಸಾಧನೆ ಮಾಡಿದೆ.
ಅಳೇಕಲ ಹಝ್ರತ್ ಸಯ್ಯಿದ್ ಮದನಿ ಆಂಗ್ಲ ಮಾಧ್ಯಮ ಶಾಲೆಯು 100% ಫಲಿತಾಂಶ ಪಡೆದಿದೆ, 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲೂ, 37 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 6 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಪಾಸಾಗಿದ್ದಾರೆ.
ಕಲ್ಲಾಪು ಹಝ್ರತ್ ಸಯ್ಯಿದ್ ಮದನಿ ಆಂಗ್ಲ ಮಾಧ್ಯಮ ಶಾಲೆಯು 100% ಫಲಿತಾಂಶ ಪಡೆದಿದೆ, 3 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲೂ, 39 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 2 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಆಗಿದ್ದಾರೆ.
ಉಳ್ಳಾಲ ಹಝ್ರತ್ ಸಯ್ಯಿದ್ ಮದನಿ ಆಂಗ್ಲ ಮಾಧ್ಯಮ ಶಾಲೆಯು 97.8% ಫಲಿತಾಂಶ ಪಡೆದಿದೆ, 16 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲೂ, 86 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 10 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.
ಹಳೆಕೋಟೆ ಉರ್ದು ಶಾಲೆ ಶೇ 80%, ಕೋಟೆಪುರ ಟಿಪ್ಪು ಸುಲ್ತಾನ್ ಶಾಲೆ 82%,ಹಾಗೂ ಆಝಾದ್ ನಗರ ಹೆಣ್ಣುಮಕ್ಕಳ ಶಾಲೆಗೆ 68% ಫಲಿತಾಂಶ ಬಂದಿರುತ್ತದೆ. ಇವರನ್ನು ಉಳ್ಳಾಲ ಸಯ್ಯಿದ್ ಮದನಿ ದರ್ಗಾ ಸಮಿತಿ ಮತ್ತು ಸಯ್ಯಿದ್ ಮದನಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಾದ ಬಿ.ಜಿ ಹನೀಫ್ ಹಾಜಿ ಮತ್ತು ಸಮಿತಿ ಸದಸ್ಯರು, ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು ಸಿಬ್ಬಂದಿ ಅಭಿನಂದಿಸಿದ್ದಾರೆ.