Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಪ್ಪಿನಂಗಡಿ: ಕಾಂಗ್ರೆಸ್‍ನಿಂದ ರೋಡ್ ಶೋ;...

ಉಪ್ಪಿನಂಗಡಿ: ಕಾಂಗ್ರೆಸ್‍ನಿಂದ ರೋಡ್ ಶೋ; ಮತಯಾಚನೆ

8 May 2023 5:50 PM IST
share
ಉಪ್ಪಿನಂಗಡಿ: ಕಾಂಗ್ರೆಸ್‍ನಿಂದ ರೋಡ್ ಶೋ; ಮತಯಾಚನೆ

ಉಪ್ಪಿನಂಗಡಿ: ಪ್ರತಿಯೊಂದು ಬೂತ್‍ನಲ್ಲಿ ಅತ್ಯಂತ ಹೆಚ್ಚು ಮತ ಚಲಾವಣೆ ಆಗುವಲ್ಲಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಮತದಾನ ಆಗುವ ನಿಟ್ಟಿನಲ್ಲಿ ಪ್ರತಿಯೋರ್ವ ಕಾರ್ಯಕರ್ತರು ಶ್ರಮವಹಿಸಬೇಕು. ಆ ಮೂಲಕ ಈ ಬಾರಿ ಭರ್ಜರಿ ಗೆಲುವು ನಮ್ಮದಾಗಬೇಕು ಎಂದು ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಹೇಳಿದರು.

ಮೇ 8 ರಂದು ಉಪ್ಪಿನಂಗಡಿ ಬಸ್ ನಿಲ್ದಾಣದಿಂದ ಗಾಂಧಿಪಾರ್ಕ್ ತನಕ ಬೃಹತ್ ರೋಡ್ ಶೋ ನಡೆಸಿ, ಮತಯಾಚನೆ ಮಾಡಿದ ಬಳಿಕ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಈ ಭ್ರಷ್ಟಾಚಾರವನ್ನು ತೊಡೆದು ಹಾಕಬೇಕು ಹಾಗೂ ಸಮಾಜ ಸೇವೆಯ ಮೂಲಕ ಜನರಿಗೆ ಇನ್ನಷ್ಟು ನೆರವಾಗಬೇಕೆಂಬ ಉದ್ದೇಶ ವನ್ನಿಟ್ಟುಕೊಂಡು ನಾನು ರಾಜಕೀಯಕ್ಕೆ ಬಂದಿದ್ದೇನೆ. ಅಭಿವೃದ್ಧಿಯಲ್ಲಿ ಯಾವುದೇ ರಾಜಕೀಯ, ಧರ್ಮಾಧಾರಿತ ತಾರತಮ್ಯ ಮಾಡದೆ ಧರ್ಮದ ಹಾದಿಯಲ್ಲಿ ಮುನ್ನಡೆಯುವ ಮೂಲಕ ಎಲ್ಲರಿಗೂ ನ್ಯಾಯ ಕೊಡುವ ಕೆಲಸ ಮಾಡುತ್ತೇನೆ. ಮತದಾರರ ಒಲವು, ಕಾರ್ಯಕರ್ತರ ಹುರುಪು ಪುತ್ತೂರುನಲ್ಲಿ ಕಾಂಗ್ರೆಸ್ ಗೆಲುವನ್ನು ಸಾಕ್ಷೀಕರಿಸುತ್ತಿದೆ. ಪಕ್ಷದ ಕಾರ್ಯಕರ್ತರು ಮತದಾನದ ದಿನ ಇನ್ನಷ್ಟು ಶ್ರಮವಹಿಸಿಕೊಂಡು 25 ಸಾವಿರಕ್ಕೂ ಅಧಿಕ ಮತಗಳ ಅಂತರದ ಗೆಲುವು ನಮ್ಮದಾಗುವಂತೆ ಮಾಡಬೇಕು ಎಂದರು.

ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ. ಮಾತನಾಡಿ, ನಿನ್ನೆ ವಿಟ್ಲದಲ್ಲಿ ನಡೆದ ರೋಡ್ ಶೋ, ಇಂದಿನ ಉಪ್ಪಿನಂಗಡಿ ರೋಡ್ ಶೋದಲ್ಲಿ ಸೇರಿರುವ ಜನಸಾಗರ ಕಾಂಗ್ರೆಸ್ ಪಕ್ಷದ ಗೆಲುವಿನ ದಿಕ್ಸೂಚಿಯನ್ನು ತೋರಿಸಿದೆ. ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಮುಂಬರುವ 13ನೇ ತಾರೀಕಿನಂದು ಕಾಂಗ್ರೆಸ್‍ನಿಂದ ವಿಜಯೋತ್ಸವದ ಮೆರವಣಿಗೆ ನಡೆಯುವಂತಾಗಲಿ ಎಂದರು.

ರೋಡ್ ಶೋದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹೇಮನಾಥ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳಾದ ಪ್ರವೀಣ್‍ಚಂದ್ರ ಆಳ್ವ, ಉಮಾನಾಥ ರೈ ಪೆರ್ನೆ, ನೂರುದ್ದೀನ್ ಸಾಲ್ಮರ, ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಪ್ರಸಾದ್ ಪಾಣಾಜೆ, ಶಬ್ಬೀರ್ ಕೆಂಪಿ, ಯು.ಟಿ. ತೌಸೀಫ್, ಫಾರೂಕ್ ಪೆರ್ನೆ, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ರಹಿಮಾನ್, ಯು.ಕೆ. ಇಬ್ರಾಹಿಂ, ಪಕ್ಷದ ಮುಖಂಡರಾದ ಅಬ್ದುಲ್ ರಹಿಮಾನ್ ಯುನಿಕ್, ಚಂದ್ರಹಾಸ ಶೆಟ್ಟಿ ಎ., ಪ್ರಸನ್ನ ಕುಮಾರ್ ಶೆಟ್ಟಿ, ಕೃಷ್ಣರಾವ್ ಅರ್ತಿಲ, ಅನಿ ಮಿನೇಜಸ್, ಅಸ್ಕರ್ ಅಲಿ, ಸಿದ್ದಿಕ್ ಕೆಂಪಿ, ಆಚಿ ಇಬ್ರಾಹಿಂ, ನಝೀರ್ ಮಠ, ಪ್ರಸಾದ್ ಕೌಶಲ್ ಶೆಟ್ಟಿ, ಅಸ್ಕರ್ ಅಲಿ, ಆದಂ ಕೊಪ್ಪಳ, ಬಾಬು ಅಗರಿ, ಇಬ್ರಾಹೀಂ ಕೆ., ಲೋಕೇಶ್ ಪೆಲತ್ತಡಿ, ಸತೀಶ್ ಶೆಟ್ಟಿ ಹೆನ್ನಾಳ, ಪ್ರಸನ್ನ ಕುಮಾರ್ ಶೆಟ್ಟಿ, ಮ್ಯಾಕ್ಸಿಂ ಲೋಬೋ, ದೇವಿದಾಸ ರೈ ಬೆಳ್ಳಿಪ್ಪಾಡಿ, ಓಸ್ವಾಲ್ಡ್ ಪಿಂಟೋ ಮತ್ತಿತರರು ಉಪಸ್ಥಿತರಿದ್ದರು.

share
Next Story
X