'ಎದ್ದೇಳು ಕರ್ನಾಟಕ' ಅಭಿಯಾನ ಕಾರ್ಯಕರ್ತರ ಮೇಲೆ ಬಿಜೆಪಿ ಬೆಂಬಲಿಗರಿಂದ ಹಲ್ಲೆ: ಆರೋಪ

ಬೆಂಗಳೂರು, ಮೇ 8: ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕೋಮುವಾದ, ಭ್ರಷ್ಟಾಚಾರ, ಕಮಿಷನ್ ದಂಧೆ ವಿರುದ್ಧ ಮತ ಹಾಕುವಂತೆ ಮತದಾರರಲ್ಲಿ ಜಾಗೃತಿ ಮೂಡಿಸುತ್ತಿದ್ದ ‘ಎದ್ದೇಳು ಕರ್ನಾಟಕ’ ಅಭಿಯಾನ ಕಾರ್ಯಕರ್ತರ ಮೇಲೆ ಬಿಜೆಪಿ ಬೆಂಬಲಿಗರು ಹಾಡು ಹಾಗಲೇ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.
ಸೋಮವಾರ ಇಲ್ಲಿನ ಜಯನಗರದ 9ನೆ ಬ್ಲಾಕ್‍ನಲ್ಲಿ ಎದ್ದೇಳು ಕರ್ನಾಟಕ’ದ ಕಾರ್ಯಕರ್ತರು ಜಾಗೃತಿ ಕಾರ್ಯ ನಡೆಸುತ್ತಿದ್ದರು. ಈ ವೇಳೆ, ಅವರನ್ನು ಅಡ್ಡಗಟ್ಟಿದ ಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ.ಕೆ.ರಾಮಮೂರ್ತಿ ಅವರ ಬೆಂಬಲಿಗರು ಎನ್ನಲಾದ ಕೆಲವರು ಅಭಿಯಾನದ ಸದಸ್ಯ ರವಿ ಮತ್ತು ಲೋಕ್ಯ ಎಡಿಲು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಇದೇ ವೇಳೆ ಅಭಿಯಾನದಲ್ಲಿ ಮಹಿಳಾ ಕಾರ್ಯಕರ್ತೆಯರಾದ ಗೌರಿ, ಚೆನ್ನಮ್ಮ ಅವರಿಗೂ ಬೆದರಿಕೆ ಹಾಕಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Next Story





