Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. 2023ರ ವಿಧಾನಸಭಾ ಚುನಾವಣೆಗೆ ಉಡುಪಿ...

2023ರ ವಿಧಾನಸಭಾ ಚುನಾವಣೆಗೆ ಉಡುಪಿ ಜಿಲ್ಲೆ ಸಜ್ಜು: ಡಿಸಿ ಕೂರ್ಮಾರಾವ್

1111 ಮತಗಟ್ಟೆಗಳು, ಒಟ್ಟು 10.41ಲಕ್ಷ ಮತದಾರರು

8 May 2023 8:58 PM IST
share
2023ರ ವಿಧಾನಸಭಾ ಚುನಾವಣೆಗೆ ಉಡುಪಿ ಜಿಲ್ಲೆ ಸಜ್ಜು: ಡಿಸಿ ಕೂರ್ಮಾರಾವ್
1111 ಮತಗಟ್ಟೆಗಳು, ಒಟ್ಟು 10.41ಲಕ್ಷ ಮತದಾರರು

ಉಡುಪಿ, ಮೇ 8: 2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಉಡುಪಿ ಜಿಲ್ಲೆ ಸರ್ವಸನ್ನದ್ಧವಾಗಿದೆ. ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ ಒಟ್ಟು 1111 ಮತಗಟ್ಟೆಗಳಲ್ಲಿ 243 ಮಂದಿ ಸೇವಾ ಮತದಾರರು ಸೇರಿದಂತೆ ಒಟ್ಟು 10, 41,915 ಮಂದಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ ಎಂದು ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಮತದಾನವು ಮೇ 10ರ ಬುಧವಾರ ಬೆಳಗ್ಗೆ 7:00ರಿಂದ ಸಂಜೆ 6:00ಗಂಟೆಯವರೆಗೆ ನಡೆಯಲಿದೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದವರು ನುಡಿದರು.

ಜಿಲ್ಲೆಯಲ್ಲಿ 5,02,836 ಪುರುಷ, 5,38,823 ಮಹಿಳಾ ಮತದಾರರಲ್ಲದೇ 13 ಇತರ ಮತದಾರರೊಂದಿಗೆ ಒಟ್ಟು 243 ಸೇವಾ ಮತದಾರರು ಅಂದು ತಮ್ಮ ಮತ ಚಲಾಯಿಸುವ ಹಕ್ಕನ್ನು ಹೊಂದಿದ್ದಾರೆ ಎಂದವರು ತಿಳಿಸಿದರು.

ಬೈಂದೂರು ಕ್ಷೇತ್ರದಲ್ಲಿ 1,15,346 ಪುರುಷ, 1,20,319 ಮಹಿಳೆ, 3 ಇತರ ಹಾಗೂ 48 ಸೇವಾ ಮತದಾರರು ಸೇರಿದಂತೆ ಒಟ್ಟು 2,35,716 ಮತದಾರರಿದ್ದಾರೆ. ಕುಂದಾಪುರ ಕ್ಷೇತ್ರದಲ್ಲಿ 1,00,751 ಪುರುಷ, 1,08,784 ಮಹಿಳಾ, 2 ಇತರ ಹಾಗೂ 55 ಸೇವಾ ಮತದಾರರು ಸೇರಿ ಒಟ್ಟು 2,09,592 ಮತದಾರರಿದ್ದಾರೆ.

ಉಡುಪಿ ಕ್ಷೇತ್ರದಲ್ಲಿ 1,04,787 ಪುರುಷ, 1,12,148 ಮಹಿಳೆ, 3 ಇತರ ಹಾಗೂ 51 ಸೇವಾ ಮತದಾರರು ಸೇರಿ ಒಟ್ಟು 2,16,989 ಮತದಾರರು, ಕಾಪು ಕ್ಷೇತ್ರದಲ್ಲಿ 90,517 ಪುರುಷ, 98,430 ಮಹಿಳೆ, 5 ಇತರೆ, 55 ಸೇವಾ ಮತದಾರರು ಸೇರಿ ಒಟ್ಟು 1,89,007 ಮತದಾರರು ಹಾಗೂ ಕಾರ್ಕಳ ಕ್ಷೇತ್ರದಲ್ಲಿ 91,435 ಪುರುಷ, 99,142 ಮಹಿಳೆ, 0 ಇತರೆ, 34 ಸೇವಾ ಮತದಾರರು ಸೇರಿ ಒಟ್ಟು 1,90,611 ಮತದಾರರಿದ್ದಾರೆ.

ಇವರಿಗೆ ಮತ ಚಲಾಯಿಸಲು ಜಿಲ್ಲೆಯಲ್ಲಿ ಒಟ್ಟು 1,111 ಮತಗಟ್ಟೆಗಳನ್ನು ತೆರೆಯಲಾಗುವುದು. ಬೈಂದೂರಿನಲ್ಲಿ 246, ಕುಂದಾಪುರದಲ್ಲಿ 222, ಉಡುಪಿಯಲ್ಲಿ 226, ಕಾಪುವಿನಲ್ಲಿ 208 ಹಾಗೂ ಕಾರ್ಕಳದಲ್ಲಿ 209 ಮತಗಟ್ಟೆಗಳನ್ನು ತೆರೆಯಲಾಗುವುದು ಎಂದು ಕೂರ್ಮಾರಾವ್ ತಿಳಿಸಿದರು.

ಮತದಾರರು ಬುಧವಾರ ತಮ್ಮ ಮತ ಚಲಾಯಿಸಲು ಆಗಮಿಸುವಾಗ ಮನೆ ಮನೆಗೆ ಈಗಾಗಲೇ ತಲುಪಿಸಿರುವ ಓಟರ್ ಸ್ಲಿಪ್ ಜೊತೆಗೆ ಗುರುತಿಗಾಗಿ ಮತದಾರ ಪತ್ರ (ಎಪಿಕ್ ಕಾರ್ಡ್)ನ್ನು ತರಬೇಕು. ಒಂದು ವೇಳೆ ಎಪಿಕ್ ಕಾರ್ಡ್ ಇಲ್ಲದವರು ಆಧಾರ್ ಕಾರ್ಡ್, ನರೇಗಾ ಉದ್ಯೋಗ ಗುರುತಿಸಿ ಚೀಟಿ, ಅಂಚೆ ಕಚೇರಿ ಅಥವಾ ಬ್ಯಾಂಕ್‌ಗಳಲ್ಲಿ ನೀಡಿರುವ ಭಾವಚಿತ್ರವಿರುವ ಪಾಸ್ ಪುಸ್ತಕ, ಆರೋಗ್ಯ ವಿಮಾ ಸ್ಮಾರ್ಟ್ ಕಾಡ್, ಡ್ರೈವಿಂಗ್ ಲೈಸನ್ಸ್, ಪ್ಯಾನ್ ಕಾರ್ಡ್, ಪಾಸ್‌ಪೋರ್ಟ್, ಭಾವಚಿತ್ರವಿರುವ ಪಿಂಚಣಿ ಕಾರ್ಡ್, ವಿಶಿಷ್ಟ ಅಂಗವೈಕಲ್ಯ ಕಾರ್ಡ್‌ಗಳಲ್ಲಿ ಯಾವುದಾದರೂ ಒಂದನ್ನು ತರಬೇಕು ಎಂದು ಅವರು ತಿಳಿಸಿದರು.

25 ಸಖಿ ಮತಗಟ್ಟೆ: ಈ ಸಾಲಿನ ಚುನಾವಣೆಗಾಗಿ ಮಹಿಳಾ ಮತಗಟ್ಟೆ ಅಧಿಕಾರಿಗಳಿಂದ ನಡೆಸುವ ಸಖೀ ಮತಗಟ್ಟೆ, ವಿಶೇಷ ಚೇತನ ಅಧಿಕಾರಿಗಳಿಂದ ನಡೆಸುವ ಪಿಡಬ್ಲ್ಯುಡಿ ಮತಗಟ್ಟೆ ಹಾಗೂ ಎಥಿನಿಕ್ ಮತಗಟ್ಟೆ ಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಕ್ಷೇತ್ರಕ್ಕೆ ಐದರಂತೆ ಒಟ್ಟು 25 ಸಖಿ ಮತಗಟ್ಟೆಗಳೊಂದಿಗೆ ಕ್ಷೇತ್ರಕ್ಕೆ ತಲಾ ಒಂದರಂತೆ ಒಟ್ಟು ಐದು ಪಿಡಬ್ಲ್ಯುಜಿ ಮತಗಟ್ಟೆ, 5 ಯುವ ಮತದಾರರ ಮತಗಟ್ಟೆ, ಐದು ಥೀಮ್ ಆಧಾರಿತ ಮತಗಟ್ಟೆ ಹಾಗೂ ಕುಂದಾಪುರ ತಾಲೂಕಿನ ಸೌಡದಲ್ಲಿ ಕೊರಗ ಸಂಸ್ಕೃತಿ ಸಾರುವ ಎಥಿನಿಕ್ ಮತಗಟ್ಟೆ ಸ್ಥಾಪಿಸಲಾಗಿದೆ ಎಂದರು.

80+ ವಯೋಮಾನದ ಹಿರಿಯ ಮತದಾರರು ಹಾಗೂ ವಿಶೇಷ ಚೇತನ ಮತದಾರರಿಗಾಗಿ ಗಾಲಿಕುರ್ಚಿ, ಭೂತಕನ್ನಡಿ, ಬ್ರೈಲ್ ಲಿಪಿ ಮಾದರಿಯ ಮತಪತ್ರ, ಪ್ರವೇಶದಲ್ಲಿ ಆದ್ಯತೆ, ರ್ಯಾಂಪ್, ಕೋರಿಕೆ ಮೇರೆಗೆ ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ವಾಹನದ ವ್ಯವಸ್ಥೆ: ಚುನಾವಣೆಯ ಕರ್ತವ್ಯದಲ್ಲಿ ಭಾಗವಹಿಸುವ ಮತಗಟ್ಟೆ ಅಧಿಕಾರಿಗಳನ್ನು ಮತದಾನ ಕೇಂದ್ರಕ್ಕೆ ಕರೆದೊಯ್ಯಲು ಹಾಗೂ ಮತದಾನ ಮುಗಿದ ಬಳಿಕ ವಾಪಾಸು ಕರೆದುಕೊಂಡು ಬರಲು ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ 176 ಬಸ್ಸುಗಳು, 36 ಮಿನಿ ಬಸ್ಸುಗಳು, 54 ಟೆಂಪೋ ಟ್ರಾವಲರ್, ಮ್ಯಾಕ್ಸಿಕ್ಯಾಬ್, ವ್ಯಾನ್ ಹಾಗೂ 68 ಜೀಪ್‌ಗಳನ್ನು ಬಳಸಾಗುತ್ತದೆ ಎಂದರು. 

ಮಸ್ಟರಿಂಗ್ ಕೇಂದ್ರ: ಜಿಲ್ಲೆಯ ಪ್ರತಿಯೊಂದು ಕ್ಷೇತ್ರಕ್ಕೂ ಒಂದೊಂದು ಮಸ್ಟರಿಂಗ್ ಹಾಗೂ ಡಿಮಸ್ಟರಿಂಗ್ ಕೇಂದ್ರಗಳನ್ನು ವ್ಯವಸ್ಥೆಗೊಳಿಸಲಾಗಿದೆ. ಬೈಂದೂರಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರದಲ್ಲಿ ಭಂಡಾರ್‌ಕಾರ್ಸ್‌ ಸಾಯನ್ಸ್ ಎಂಡ ಆರ್ಟ್ಸ್ ಕಾಲೇಜು, ಉಡುಪಿಯಲ್ಲಿ ಬ್ರಹ್ಮಗಿರಿಯ ಸೈಂಟ್ ಸಿಸಿಲೀಸ್ ಶಿಕ್ಷಣ ಟ್ರಸ್ಟ್ , ಕಾಪುವಿನಲ್ಲಿ ದಂಡತೀರ್ಥ ಪಿಯು ಕಾಲೇಜು ಉಳಿಯಾರಗೊಳಿ ಹಾಗೂ ಕಾರ್ಕಳದಲ್ಲಿ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಸ್ಟರಿಂಗ್ ಹಾಗೂ ಡಿ ಮಸ್ಟರಿಂಗ್ ಕೇಂದ್ರವಾಗಿರುತ್ತದೆ.

ಬಂದ ದೂರುಗಳ ವಿಲೇವಾರಿ: ಇದುವರೆಗೆ ಸಿ-ವಿಜಿಲ್ ಆ್ಯಪ್ ಮೂಲಕ 158 ದೂರುಗಳು ಸ್ವೀಕೃತವಾಗಿದ್ದು, ಎಲ್ಲಾ ದೂರುಗಳನ್ನು ವಿಲೇಗೊಳಿಸಲಾಗಿದೆ. ಮತದಾರರ ಸಹಾಯವಾಣಿಗೆ 249 ಕರೆಗಳು ಸ್ವೀಕೃತ ವಾಗಿದ್ದು, ಎಲ್ಲಾ ದೂರುಗಳನ್ನು ವಿಲೇಗೊಳಿಸಲಾಗಿದೆ. ಎನ್‌ಜಿಆರ್‌ಎಸ್ ಪೋರ್ಟಲ್ ಮೂಲಕ ಬಂದ ಎಲ್ಲಾ 120 ದೂರುಗಳನ್ನು ಇತ್ಯರ್ಥಗೊಳಿಸ ಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 2.14  ಕೋಟಿ ರೂ.ನಗದು ಹಾಗೂ 42,313.13 ಲೀ. ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕೂರ್ಮಾ ರಾವ್ ವಿವರಿಸಿದರು.

ಚುನಾವಣೆಗೆ ಬಹಿರಂಗ ಪ್ರಚಾರ ಇಂದು ಸಂಜೆ 6:00ಕ್ಕೆ ಮುಕ್ತಾಯಗೊಂಡಿದೆ. ಇಂದು ಸಂಜೆ 6:00ರಿಂದ ಮೇ 10ರ ಮಧ್ಯರಾತ್ರಿಯವರೆಗೆ ದಂಡ ಪ್ರಕ್ರಿಯೆ ಸಂಹಿತೆಯ ಕಲಂ 144ನ್ನು ಜಾರಿ ಗೊಳಿಸಲಾಗಿದೆ ಹಾಗೂ ಈ ಅವಧಿಯಲ್ಲಿ ಮದ್ಯಮಾರಾಟ ನಿಷೇಧಿಸಿದ್ದು, ಒಣದಿನವೆಂದು ಘೋಷಿಸಲಾಗಿದೆ. ಇಂದು ಸಂಜೆಯ ಬಳಿಕ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಲಾಗಿದೆ  ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಿಇಓ ಪ್ರಸನ್ನ ಎಚ್., ಎಸ್ಪಿ ಅಕ್ಷಯ್ ಹಾಕೆ ಮಚ್ಚೀಂದ್ರ ಹಾಗೂ ತರಬೇತು ಐಎಎಸ್ ಅಧಿಕಾರಿ ಯತೀಶ್ ಉಪಸ್ಥಿತರಿದ್ದರು.

ಪ್ರಸ್ತುತ ಚುನಾವಣೆಯಲ್ಲಿ 1336 ಬ್ಯಾಲೆಟ್ ಯುನಿಟ್, 1336 ಕಂಟ್ರೋಲ್ ಯುನಿಟ್ ಹಾಗೂ 1446 ವಿವಿ ಪ್ಯಾಟ್‌ಗಳನ್ನು ಉಡುಪಿ ಜಿಲ್ಲೆಯಲ್ಲಿ ಬಳಸಲಾಗುತ್ತದೆ.

share
Next Story
X