Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೇನಾ ವಿಮಾನ ದುರಂತ: 5 ವರ್ಷದಲ್ಲಿ 55...

ಸೇನಾ ವಿಮಾನ ದುರಂತ: 5 ವರ್ಷದಲ್ಲಿ 55 ಯೋಧರ ಮೃತ್ಯು

9 May 2023 7:51 AM IST
share
ಸೇನಾ ವಿಮಾನ ದುರಂತ: 5 ವರ್ಷದಲ್ಲಿ 55 ಯೋಧರ ಮೃತ್ಯು

ಹೊಸದಿಲ್ಲಿ: ಕಳೆದ ಆರು ತಿಂಗಳಲ್ಲಿ ದೇಶೀಯವಾಗಿ ನಿರ್ಮಿಸಿದ ನಾಲ್ಕು ’ಧ್ರುವ’ ಅತ್ಯಾಧುನಿಕ ಲಘು ಹೆಲಿಕಾಪ್ಟರ್ (ಎಎಲ್‌ಎಚ್)  ಅಪಘಾತಕ್ಕೀಡಾಗಿರುವ ನಡುವೆಯೇ ಸೋಮವಾರ ಇನ್ನೊಂದು ಎಂಐಜಿ-21 ಯುದ್ಧವಿಮಾನ ಪತನವಾಗಿದೆ. ದೇಶದಲ್ಲಿ ಸೇನಾ ವಿಮಾನಗಳು ಅಪಘಾತಕ್ಕೀಡಾಗುತ್ತಿರುವ ದರ ಗಣನೀಯವಾಗಿ ಹೆಚ್ಚಿರವುದು ಆತಂಕಕ್ಕೆ ಕಾರಣವಾಗಿದೆ.

ಕಳೆದ ಐದು ವರ್ಷಗಳ ಅವಧಿಯಲ್ಲಿ ಸಂಭವಿಸಿದ 50 ಸೇನಾ ವಿಮಾನ ಮತ್ತು ಹೆಲಿಕಾಪ್ಟರ್ ಅಪಘಾತಗಳಲ್ಲಿ 55 ಮಂದಿ ಯೋಧರು ಜೀವ ಕಳೆದುಕೊಂಡಿದ್ದಾರೆ. ಈ ಅವಧಿಯಲ್ಲಿ ಹಳೆಯ ಎಂಐಜಿ-21 ಜೆಟ್‌ಗಳು ಹಾಗೂ ಚೀತ್/ ಚೇತಕ್ ಹೆಲಿಕಾಪ್ಟರ್‌ಗಳು ಗಣನೀಯ ಪ್ರಮಾಣದಲ್ಲಿ ಅಪಘಾತಕ್ಕೀಡಾಗಿವೆ.

"ಎಂಐಜಿ-21 ಹಾಗೂ ಚೀತ್/ಚೇತಕ್ ಹೆಲಿಕಾಪ್ಟರ್‌ಗಳು ಸಿಂಗಲ್ ಎಂಜಿನ್ ಯಂತ್ರಗಳಾಗಿದ್ದು, 1960ರ ದಶಕದಲ್ಲಿ ಅಭಿವೃದ್ಧಿಪಡಿಸಿದ್ದಾಗಿದ್ದು, ಕಾರ್ಯಾಚರಣೆ ಬಳಕೆಯಿಂದ ಸಾಕಷ್ಟು ಹಿಂದೆಯೇ ಹೊರಗುಳಿದಿವೆ. ಆದರೆ ಹೊಸ ಸೇರ್ಪಡೆ ಇಲ್ಲದ ಕಾರಣ ಸಶಸ್ತ್ರ ಪಡೆಗಳ ಏನು ಮಾಡಲು ಸಾಧ್ಯ? ಎಂದು ಹಿರಿಯ ಅಧಿಕಾರಿಯೊಬ್ಬರು ಪ್ರಶ್ನಿಸಿದ್ದಾರೆ.

ಈ ವಿಮಾನಗಳಲ್ಲಿ ಆಧುನಿಕ ವೈಮಾನಿಕಶಾಸ್ತ್ರ ಸೌಕರ್ಯಗಳು ಅಥವಾ ಅಂತರ್ಗತವಾದ ಸುರಕ್ಷಾ ಕ್ರಮಗಳಿಲ್ಲ. ಜತೆಗೆ ಪೈಲಟ್‌ಗಳ ಹಾಗೂ ತಂತ್ರಜ್ಞರ ಅಸಮರ್ಪಕ ತರಬೇತಿ ಹಾಗೂ ಮೇಲ್ವಿಚಾರಣೆ, ಕಳಪೆ ನಿರ್ವಹಣೆ, ಕೂಲಂಕಷ ಪರೀಕ್ಷೆಗಳನ್ನು ನಡೆದಿರುವುದು, ಬಿಡಿಭಾಗಗಳಿಗೆ ಸಂಬಂಧಿಸಿದಂತೆ ಗುಣಮಟ್ಟ ನಿಯಂತ್ರಣದ ಕೊರತೆ ಅಪಘಾತಗಳಿಗೆ ಪ್ರಮುಖ ಕಾರಣವಾಗಿದೆ.

ಶೇಕಡ 90ರಷ್ಟು ಅಪಘಾತಗಳಿಗೆ ಮಾನವ ಪ್ರಮಾದಗಳು ಹಾಗೂ ತಾಂತ್ರಿಕ ದೋಷಗಳು ಕಾರಣ ಎಂದು ಹಲವು ವರದಿಗಳಿಂದ ತಿಳಿದು ಬಂದಿದೆ. ಸಮರ್ಪಕವಾಗಿ ತಪಾಸಣೆ ಮತ್ತು ಸಮತೋಲನ, ಸರಿಪಡಿಸುವಿಕೆ ಕ್ರಮ ಹಾಗೂ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ.

share
Next Story
X