ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕ ಬದಲು; ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ಮೇ 22ರಿಂದ ಜೂನ್ 2ರವರೆಗೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು. ಆದರೆ, ಅಂದು ಸಿಇಟಿ ಪರೀಕ್ಷೆ ಇರುವುದರಿಂದ ಮೇ 23 ರಿಂದ ಪೂರಕ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣ https://kseab.karnataka.gov.in ರಲ್ಲಿ ವೀಕ್ಷಿಸಬಹುದಾಗಿದೆ.
ಪರೀಕ್ಷೆಯ ವೇಳಾಪಟ್ಟಿ ಇಲ್ಲಿದೆ....
Next Story