Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ಚುನಾವಣೆ ಸೋಲಿನ ಭೀತಿಯಿಂದ...

ಬಿಜೆಪಿ ಚುನಾವಣೆ ಸೋಲಿನ ಭೀತಿಯಿಂದ ಸಿದ್ದರಾಮಯ್ಯರ ಹೆಸರಲ್ಲಿ ನನ್ನ ವಿರುದ್ಧ ನಕಲಿ ಪತ್ರ: ಡಿಕೆಶಿ

9 May 2023 3:45 PM IST
share
ಬಿಜೆಪಿ ಚುನಾವಣೆ ಸೋಲಿನ ಭೀತಿಯಿಂದ ಸಿದ್ದರಾಮಯ್ಯರ ಹೆಸರಲ್ಲಿ ನನ್ನ ವಿರುದ್ಧ ನಕಲಿ ಪತ್ರ: ಡಿಕೆಶಿ

ಬೆಂಗಳೂರು, ಮೇ 9: 'ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲ. ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಸಿದ್ದರಾಮಯ್ಯರ ಹೆಸರಲ್ಲಿ ನನ್ನ ವಿರುದ್ಧ ಪತ್ರ ಬರೆದಿದ್ದಾರೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಇಲ್ಲಿನ ಮೈಸೂರು ಬ್ಯಾಂಕ್ ವೃತ್ತದಲ್ಲಿರುವ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಮಂಗಳವಾರ ಬೆಳಗ್ಗೆ ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳು ಈ ನಕಲಿ ಪತ್ರದ ಬಗ್ಗೆ ಪ್ರಶ್ನಿಸಿದಾಗ ಅವರು ಈ ರೀತಿ ಪ್ರತಿಕ್ರಿಯಿಸಿದರು.

'ಸಿದ್ದರಾಮಯ್ಯ ನನ್ನ ವಿರುದ್ಧ ಯಾಕೆ ಪತ್ರ ಬರೆಯುತ್ತಾರೆ? ಅವರು ಎಲ್ಲಾ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿ ಮೊನ್ನೆಯಷ್ಟೇ ನಾವಿಬ್ಬರೂ ಸೇರಿ ಅಭಿಪ್ರಾಯ ಹಂಚಿಕೊಂಡಿದ್ದೇವೆ. ಈಗಲೂ ನಾವು ಚರ್ಚೆ ಮಾಡುತ್ತಿದ್ದೇವೆ. ಅವರಿಗೆ ಜನರ ಬಳಿ ಪ್ರಚಾರಕ್ಕೆ ಸಮಯ ಸಿಗುತ್ತಿಲ್ಲ. ಇನ್ನು ಈ ರೀತಿ ದೂರಲು ಎಲ್ಲಿ ಸಾಧ್ಯ? ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲ. ಹೀಗಾಗಿ ಅವರ ಹೆಸರಲ್ಲಿ ನಕಲಿ ಪತ್ರ ಬರೆದು ಹಂಚುತ್ತಿದ್ದಾರೆ. ಬಿಜೆಪಿಯಲ್ಲಿರುವ ಆಂತರಿಕ ಹುಳುಕು ಮುಚ್ಚಿಕೊಳ್ಳಲು ಈ ರೀತಿ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

 ಮೋದಿ ಅವರು ಬಂದು ಬೀದಿ ಬೀದಿ ಅಳೆದಾಡಿದರು. ರೋಡ್ ಶೋ ಮಾಡಿದರು. ಅವರ ಜತೆ ಒಬ್ಬ ರಾಜ್ಯ ನಾಯಕನೂ ಇರಲಿಲ್ಲ. ಕನಿಷ್ಠ ಪಕ್ಷ ಆಯಾ ಕ್ಷೇತ್ರದ ಅಭ್ಯರ್ಥಿಯನ್ನಾದರೂ ಜತೆಯಲ್ಲಿ ಇಟ್ಟುಕೊಂಡು ರೋಡ್ ಶೋ ಮಾಡಬಾರದೇ? ಬೇರೆ ಯಾವುದೇ ನಾಯಕರು ಬೆಳೆಯಬಾರದೇ? ನೂತನ ಸಂಸತ್ ಭವನಕ್ಕೂ ಒಬ್ಬರೇ ಹೋಗುತ್ತಾರೆ. ರಾಮ ಮಂದಿರ ಪೂಜೆಗೂ ಒಬ್ಬರೇ ಕೂರುತ್ತಾರೆ. ಮತ ಕೇಳುವಾಗಲೂ ಒಬ್ಬರೇ ಇರುತ್ತಾರೆ. ನಾಯಕನಾದವ ನಾಯಕರನ್ನು ಸೃಷ್ಟಿ ಮಾಡಬೇಕು. ಈ ಸಮಯದಲ್ಲಿ ಅವರ ನಾಯಕರ ಶಕ್ತಿಯನ್ನು ಅವರೇ ಕುಗ್ಗಿಸುವ ಪ್ರಯತ್ನ ಮಾಡಿದ್ದಾರೆ. ಇದು ಅಚ್ಚರಿ ತಂದಿದೆ. ಸೋಲುವ ಭೀತಿಯಿಂದ ಇಷ್ಟು ಅಬ್ಬರದ ಪ್ರಚಾರ ಮಾಡಿದ್ದಾರೆ. ಅವರು ಎಷ್ಟೇ ಅಬ್ಬರದ ಪ್ರಚಾರ ಮಾಡಿದರೂ ರಾಜ್ಯದ ಜನ ಕೇಳುವುದಿಲ್ಲ. ಜನರಿಗೆ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಹಾಗೂ ದಕ್ಷ ಆಡಳಿತ, ರಾಜ್ಯದ ಅಭಿವೃದ್ಧಿ ಬೇಕಾಗಿದೆ' ಎಂದು ತಿಳಿಸಿದರು.

ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, 'ನಾವು NEP ರದ್ದು ಸೇರಿದಂತೆ ನಮ್ಮ ಪ್ರಣಾಳಿಕೆಯ ಎಲ್ಲಾ ಅಂಶಗಳಿಗೆ ಬದ್ಧರಾಗಿದ್ದೇವೆ. ನಮ್ಮದು ನಾಗ್ಪುರ ಶಿಕ್ಷಣ ನೀತಿ ಅಲ್ಲ, ನಮಗೆ ರಾಜ್ಯ ಶಿಕ್ಷಣ ನೀತಿ ಬೇಕು. ನಮ್ಮ ರಾಜ್ಯದ ಶಿಕ್ಷಣ ನೀತಿಯಲ್ಲಿ ಇಷ್ಟು ದಿನ ಕಲಿತು ದೊಡ್ಡ ಸಾಧನೆ ಮಾಡಿಲ್ಲವೇ?' ಎಂದು ಹೇಳಿದರು.

share
Next Story
X