ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಕೇಂದ್ರ

ಉಡುಪಿ, ಮೇ 9: ಬುಧವಾರ ಮತ್ತು ಗುರುವಾರ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಿಡಿಲಿನಿಂದ ಕೂಡಿದ ಭಾರೀ ಮಳೆ ಬೀಳುವ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆಯ ಬೆಂಗಳೂರಿನ ಹವಾಮಾನ ಕೇಂದ್ರ ನೀಡಿದೆ.
ಕರಾವಳಿಯ ಮೂರು ಜಿಲ್ಲೆಗಳಲ್ಲಿ 64.5ಮಿ.ಮೀ.ನಿಂದ 115.5ಮಿ.ಮೀ. ಮಳೆ ಸುರಿಯುವ ನಿರೀಕ್ಷೆ ಇದೆ. ಮಳೆಯೊಂದಿಗೆ ಗುಡುಗು-ಸಿಡಿಲು ಸಹ ಇರಲಿದೆ ಎಂದು ಮುನ್ಸೂಚನೆಯಲ್ಲಿ ತಿಳಿಸಲಾಗಿದೆ. ಅದೇ ರೀತಿ ಮೇ 11ರಂದು ಸಹ ಕರಾವಳಿ ಭಾಗದಲ್ಲಿ ಸಿಡಿಲಿನೊಂದಿಗೆ ಮಳೆ ಸುರಿಯಲಿದೆ ಎಂದು ಹವಾಮಾನ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.
Next Story





