ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್

ಮೈಸೂರು,ಮೇ.9: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮತದಾನಕ್ಕೂ ಮುನ್ನ ದಿನವಾದ ಮಂಗಳವಾರ ಮಧ್ಯಾಹ್ನ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರು ಖಾಸಗಿ ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿದ್ದ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಬಳಿಕ ಇಬ್ಬರು ಚಾಮುಂಡಿಬೆಟ್ಟಕ್ಕೆ ತೆರಳಿದರು.
ದೇಗುಲದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇಬ್ಬರು ನಾಯಕರಿಗೂ ಹೂವಿನ ಹಾರ ಹಾಕಿದ ಅರ್ಚಕರು ಶುಭ ಹಾರೈಸಿದರು.
ದೇಗುಲದ ಆವಣದಲ್ಲಿ ನೆರೆದಿದ್ದ ಕಾರ್ಯಕರ್ತರ ಸಮುಖದಲ್ಲಿ ಇಡುಕಾಯಿ ಒಡೆದರು. ಬಳಿಕ ಉಭಯ ನಾಯಕರು ಕೈ ಎತ್ತುವ ಮೂಲಕ ಶಕ್ತಿ ಪ್ರದರ್ಶಿಸಿಸಿದರು. ಜತೆಗೆ ನಮ್ಮ ನಡುವೆ ಯಾವುದೇ ಒಡಕಿಲ್ಲ ಎಂಬ ಸಂದೇಶ ನೀಡಿದರು.
ಮಾಜಿ ಸಚಿವ ಕೆ.ಜೆ.ಜಾರ್ಜ್, ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ ಸೇರಿದಂತೆ ಹಲವು ಮುಖಂಡರುಗಳು ಭಾಗವಹಿಸಿದ್ದರು.
ಕೆಪಿಸಿಸಿ ಅಧ್ಯಕ್ಷರಾದ @DKShivakumar ಅವರ ಜೊತೆ ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿ, ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದೆ.
— Siddaramaiah (@siddaramaiah) May 9, 2023
ಇದೇ ವೇಳೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಪಕ್ಷ ಘೋಷಿಸಿರುವ ಗ್ಯಾರೆಂಟಿಗಳನ್ನು ಜಾರಿಗೆ ತರುವುದಾಗಿ ಪ್ರಮಾಣ ಮಾಡಿದ್ದೇವೆ.
ಇತರರ ಅಪಪ್ರಚಾರಗಳಿಗೆ ಕಿವಿಗೊಡಬೇಡಿ, ನಾಡಿನ ಪ್ರತಿಯೊಬ್ಬರು… pic.twitter.com/f6QNNshbA8







