ಮೇ 10ರಂದು ಹೋಟೆಲ್‌ಗಳಲ್ಲಿ ಉಚಿತ, ರಿಯಾಯಿತಿ ದರದಲ್ಲಿ ಊಟ, ತಿಂಡಿ ನೀಡುವಂತಿಲ್ಲ!

ಬೆಂಗಳೂರು, ಮೇ 9: ಬಿಬಿಎಂಪಿ ವ್ಯಾಪ್ತಿಯ ಕೆಲವೊಂದು ಹೋಟೆಲ್‍ಗಳ ಮುಂಭಾಗದಲ್ಲಿ ‘ಮೇ 10ರಂದು ಮತದಾನ ಮಾಡಿ ಬರುವ ಮತದಾರರು ಗುರುತು ತೋರಿಸಿದಲ್ಲಿ, ಉಚಿತ ಅಥವಾ ರಿಯಾಯಿತಿ ದರದಲ್ಲಿ ತಿಂಡಿ, ಪಾನೀಯ ಹಾಗೂ ಊಟದ ವ್ಯವಸ್ಥೆ ಮಾಡಲಾಗುವುದು’ ಎಂದು ಹೋಟೆಲ್‍ಗಳು ಬೋರ್ಡ್ ಆಳವಡಿಸಿಕೊಂಡಿದ್ದು, ಇದು ನೀತಿ ಸಂಹಿತೆಯ ಉಲ್ಲಂಘನೆ ಎಂದು ಬಿಬಿಎಂಪಿ ಎಚ್ಚರಿಸಿದೆ.
ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಾ.29ರಿಂದ ರಾಜ್ಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಮೇ 10ರಂದು ಮತದಾನ ನಡೆಯಲಿದೆ. ಮೇ 13ರಂದು ಮತ ಎಣಿಕೆ ಕಾರ್ಯವು ನಡೆಯಲಿದೆ. ಹಾಗಾಗಿ ಹೋಟೆಲ್‍ಗಳ ಮುಂದೆ ಬೋರ್ಡ್ ಅಳವಡಿಸಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದರೆ, ಹೋಟೆಲ್ ಮಾಲಕರನ್ನೇ ನೇರ ಹೊಣೆ ಮಾಡಲಾಗುತ್ತದೆ’ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ.
Next Story





