ಇಮ್ರಾನ್ ಖಾನ್ ಬಂಧನ ಖಂಡಿಸಿ ಪಾಕ್ ಸೇನಾ ಕಮಾಂಡರ್ ಗಳ ನಿವಾಸಕ್ಕೆ ನುಗ್ಗಿದ ಬೆಂಬಲಿಗರು

ಪೇಶಾವರ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಬಂಧನವನ್ನು ವಿರೋಧಿಸಿ ಅವರ ಅಪಾರ ಪ್ರಮಾಣದ ಬೆಂಬಲಿಗರು ಲಾಹೋರ್‌ನಲ್ಲಿರುವ ಸೇನಾ ಕಮಾಂಡರ್‌ಗಳ ನಿವಾಸದ ಆವರಣಕ್ಕೆ ನುಗ್ಗಿದ್ದಾರೆ. ರಾವಲ್ಪಿಂಡಿಯಲ್ಲಿರುವ ಸೇನಾ ಪ್ರಧಾನ ಕಛೇರಿಗೆ ಅಭಿಮಾನಿಗಳು ನುಗ್ಗುತ್ತಿರುವುದನ್ನು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ.
ಪೇಶಾವರದಲ್ಲಿ ಪಾಕಿಸ್ತಾನದ ರೇಡಿಯೋ ಕಟ್ಟಡಕ್ಕೂ ಬೆಂಕಿ ಹಚ್ಚಲಾಗಿದೆ. ಪ್ರಕರಣವೊಂದರ ವಿಚಾರಣೆಗಾಗಿ ಇಸ್ಲಾಮಾಬಾದ್ ಹೈಕೋರ್ಟ್‌ಗೆ ಹೋಗುತ್ತಿದ್ದ ವೇಳೆ ಇಮ್ರಾನ್ ಖಾನ್ ರನ್ನು ಬಂಧಿಸಲಾಗಿದೆ.
ಇಮ್ರಾನ್ ಖಾನ್ ಅವರ ಬಂಧನದ ನಂತರ ಪಾಕಿಸ್ತಾನದಾದ್ಯಂತ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಬೆಂಬಲಿಗರಿಂದ ಪ್ರತಿಭಟನೆಗಳು ಭುಗಿಲೆದ್ದಿವೆ.
ಇಸ್ಲಾಮಾಬಾದ್‌ನಾದ್ಯಂತ ನಿಷೇಧಾಜ್ಞೆಗಳನ್ನು ವಿಧಿಸಲಾಗಿದ್ದು, ಸೆಕ್ಷನ್ 144 ಜಾರಿಯಲ್ಲಿದೆ. ಉಲ್ಲಂಘನೆಯಾದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಇಸ್ಲಾಮಾಬಾದ್ ಪೊಲೀಸರು ತಿಳಿಸಿದ್ದಾರೆ.
Next Story