ಶಿಗ್ಗಾಂವಿಯಲ್ಲಿ ಮತ ಚಲಾಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹಾವೇರಿ: ಜಿಲ್ಲೆಯ ಶಿಗ್ಗಾಂವಿಯ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಮತಗಟ್ಟೆ ಸಂಖ್ಯೆ 102ರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಕ್ಕು ಚಲಾಯಿಸಿದರು.
ಮತದಾನಕ್ಕೂ ಮುನ್ನ ಹುಬ್ಬಳ್ಳಿಯ ಅಶೋಕ ನಗರದಲ್ಲಿರುವ ಶ್ರೀ ಮಾರುತಿ ದೇವಸ್ಥಾನಕ್ಕೆ ಕುಟುಂಬ ಸದಸ್ಯರೊಂದಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದ್ದು, ಇಂದು ಬೆಳಗ್ಗೆ 7ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶವಿರಲಿದೆ.
#WATCH | Karnataka CM and BJP candidate from Shiggaon assembly constituency, Basavaraj Bommai queues up at a polling booth here to cast his vote.#KarnatakaElections pic.twitter.com/kvTX5fQFBq
— ANI (@ANI) May 10, 2023

Next Story