Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯ ಸಚಿವರು, ಅಭ್ಯರ್ಥಿಗಳು...

ಉಡುಪಿ ಜಿಲ್ಲೆಯ ಸಚಿವರು, ಅಭ್ಯರ್ಥಿಗಳು ಸಹಿತ ಗಣ್ಯರಿಂದ ಮತದಾನ

10 May 2023 7:05 PM IST
share
ಉಡುಪಿ ಜಿಲ್ಲೆಯ ಸಚಿವರು, ಅಭ್ಯರ್ಥಿಗಳು ಸಹಿತ ಗಣ್ಯರಿಂದ ಮತದಾನ

ಉಡುಪಿ, ಮೇ 10: ಉಡುಪಿ ಜಿಲ್ಲೆಯ ವಿವಿಧ ಮತಗಟ್ಟೆಗಳಲ್ಲಿ ಸಚಿವರಾದ ಸುನೀಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್ ಸೇರಿದಂತೆ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳು ಹಾಗೂ ಹಲವು ಗಣ್ಯರು ಮತದಾನ ಮಾಡಿದರು.

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ನಿಟ್ಟೆ ಗ್ರಾಮದ ಕಲಂಬಾಡಿ ಪದವು ಶಾಲೆ ಮತಗಟ್ಟೆಗೆ ತನ್ನ ಪತ್ನಿ, ಮಗಳೊಂದಿಗೆ ತೆರಳಿ ಮತ ಚಲಾಯಿಸಿದರು. ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕುಂದಾಪುರ ವಿಧಾನ ಸಭಾ ಕ್ಷೇತ್ರದ ಕೋಟತಟ್ಟು ಗ್ರಾಪಂನ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ, ಪತ್ನಿ ದಕ್ಷ ಸೊರಕೆ ಮತ್ತು ಮಗ ದ್ವಿಶನ್ ಸೊರಕೆ ಜೊತೆ ಮನೆಯಿಂದ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿರುವ ಮತಗಟ್ಟೆವರೆಗೆ ನಡೆದು ಕೊಂಡು ಬಂದು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು.  ಅದೇ ರೀತಿ ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಕೂಡ ಇದೇ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಕಾಪುವಿನ ಕಳತ್ತೂರಿನ ಪೈಯಾರು ಕರಿಯಣ್ಣ ಶೆಟ್ಟಿ ಪ್ರೌಢಶಾಲೆ ಮತಗಟ್ಟೆಯಲ್ಲಿ, ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್‌ರಾಜ್ ಕಾಂಚನ್ ತನ್ನ ಪತ್ನಿ ಜೊತೆಗೆ ಆಗಮಿಸಿ ಬಡಾನಿಡಿಯೂರು ಸನ್ಯಾಸಿಮಠದ ಬಳಿಯ ಮತಗಟ್ಟೆಯಲ್ಲಿ, ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಕಂಚಿಕಾನ್ ಮತಗಟ್ಟೆ ಯಲ್ಲಿ, ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಪೂಜಾರಿ ಪತ್ನಿ ಹಾಗೂ ಕುಟುಂಬಿಕರೊಂದಿಗೆ ಆಗಮಿಸಿ ಕನ್ಯಾನ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಕುಂದಾಪುರ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಅಮಾಸೆಬೈಲು ಮಚ್ಚಟ್ಟು ಮತಗಟ್ಟೆಯಲ್ಲಿ, ಕಾರ್ಕಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಕರ್ನಾಟಕ ಪಬ್ಲಿಕ್ ಸ್ಕೂಲಿನಲ್ಲಿ ತಂದೆ, ತಾಯಿ, ಧರ್ಮ ಪತ್ನಿ ಹಾಗೂ ಮಗಳೊಂದಿಗೆ ಬಂದು ಮತ ಹಾಕಿದರು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕುಟುಂಬದೊಂದಿಗೆ ಆಗಮಿಸಿ ಮಲ್ಪೆ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆಯ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದರು.

ಉಡುಪಿ ಶಾಸಕ ಕೆ. ರಘುಪತಿ ಭಟ್ ತಮ್ಮ ತಾಯಿ ಸರಸ್ವತಿ ಬಾರಿತ್ತಾಯ, ಧರ್ಮಪತ್ನಿ ಶಿಲ್ಪಾ ಆರ್.ಭಟ್ ಸಹಿತ ಕುಟುಂಬದ ಜೊತೆ ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತ್ತು ಕಾರ್ಕಳ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪ್ರಮೋದ್ ಮುತಾಲಿಕ್ ಕುಕ್ಕುಂದೂರು ಗ್ರಾಪಂ ಕಚೇರಿಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಕುಂದಾಪುರ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಹೆಗ್ಡೆ ಮೊಳಹಳ್ಳಿ, ಮೊಳಹಳ್ಳಿ ಶಾಲೆಯ ಮತಗಟ್ಟೆಯಲ್ಲಿ, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಲಾಡಿ ಶಾಲೆಯ ಮತಗಟ್ಟೆಯಲ್ಲಿ ಮತ್ತು ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಬೆಳ್ಳಾಲ ಮತಗಟ್ಟೆ  ಯಲ್ಲಿ ಮತದಾನ ಮಾಡಿದರು.

ಚಿತ್ರನಟ ರಕ್ಷಿತ್ ಶೆಟ್ಟಿ ತನ್ನ ತಂದೆ ಶ್ರೀಧರ್ ಶೆಟ್ಟಿ, ತಾಯಿ ರಂಜನಾ ಶೆಟ್ಟಿ ಜೊತೆ ಉಡುಪಿ ವಿಧಾನಸಭಾ ಕ್ಷೇತ್ರದ ಕುಕ್ಕಿಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸಿದರು. ಬೈಂದೂರು ಕ್ಷೇತ್ರದ ಮಾಜಿ ಶಾಸಕ ಲಕ್ಷ್ಮೀನಾರಾಯಣ ಸೇರಿಗಾರ್ ಅನಾರೋಗ್ಯದ ಮಧ್ಯೆಯೂ ಇತರರ ಸಹಾಯದೊಂದಿಗೆ ಬೈಂದೂರಿನ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸಿದರು.

‘ನಾನು ಕಾಪು ಕ್ಷೇತ್ರಕ್ಕೆ ಮಾಡಿದ ಪ್ರಾಮಾಣಿಕ ಸೇವೆ ಅಭಿವೃದ್ಧಿಗಳು ನನ್ನ ಕೈ ಹಿಡಿಯಲಿದೆ. ಕಾಪು ಕ್ಷೇತ್ರದಲ್ಲಿ ಪ್ರಜ್ಞಾವಂತ ಮತದಾರರಿದ್ದು ಈ ಬಾರಿ ಜನತೆ ನನ್ನನ್ನು ಆಯ್ಕೆ ಮಾಡಲಿದ್ದಾರೆ ಎಂಬ ನಂಬಿಕೆ ಇದೆ’

-ವಿನಯ ಕುಮಾರ್ ಸೊರಕೆ, ಕಾಪು ಕಾಂಗ್ರೆಸ್ ಅಭ್ಯರ್ಥಿ

ʼನಾನು ಕಾರ್ಕಳದಲ್ಲಿ ಐದನೇ ಬಾರಿಗೆ ಬಿಜೆಪಿ ಪಕ್ಷದಲ್ಲಿ ಸ್ಪರ್ಧಿಸುತ್ತಿದ್ದೇನೆ. ಈ ಬಾರಿ ಕೇತ್ರದ ಜನತೆ ದೊಡ್ಡ ಪ್ರಮಾಣದಲ್ಲಿ ನನ್ನನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸ ಇದೆ. ಜನತೆ ಅಭಿವೃದ್ಧಿಯನ್ನು ಗೆಲ್ಲಿಸುತ್ತಾರೆ ಮತ್ತು ಹಿಂದುತ್ವಕ್ಕೆ ಬೆಂಬಲ ಕೊಡುತ್ತಾರೆ. ಈ ಮೂಲಕ ಒಳ್ಳೆಯ ಅಂತರದಲ್ಲಿ ಬಿಜೆಪಿ ಮೂಲಕ ನಾನು ಗೆದ್ದು ಬರುತ್ತೇನೆʼ. -ಸುನೀಲ್ ಕುಮಾರ್, ಕಾರ್ಕಳ ಬಿಜೆಪಿ ಅಭ್ಯರ್ಥಿ

ಚುನಾವಣೆಯ ವಿಶೇಷತೆಗಳು

*ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ(ಉಡುಪಿ ಕ್ಷೇತ್ರ) ಮತ್ತು ಕುಂದಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಿರಣ್ ಕೊಡ್ಗಿ (ಬೈಂದೂರು ಕ್ಷೇತ್ರ) ಬೇರೆ ಕ್ಷೇತ್ರದ ಅಭ್ಯರ್ಥಿಗಳಿಗೆ ಮತದಾನ ಮಾಡಿದ ಅಭ್ಯರ್ಥಿಗಳು.

*ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅನಾರೋಗ್ಯ ಪೀಡಿತ ಶಿರ್ವ ಗ್ರಾಮದ ವೆರೋನಿಕ ಪಿಂಟೊ(77) ಆಸ್ಪತ್ರೆಯಿಂದಲೇ ನೇರ ಪಂಜಿಮಾರು ಕೋಡು ಶಾಲೆಯ ಮತಗಟ್ಟೆಗೆ ಬಂದು ಮತದಾನ ಮಾಡಿ ಮತ್ತೆ ಆಸ್ಪತ್ರೆಗೆ ತೆರಳಿದರು.

*ಅನಾರೋಗ್ಯ ಪೀಡಿತ ತನ್ನ ಪತ್ನಿ ಬೇಬಿ ಅಮ್ಮನ್ನರನ್ನು ರಿಕ್ಷಾದಿಂದ ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ಮತಗಟ್ಟೆಗೆ ಹೊತ್ತುಕೊಂಡು ಬಂದ ಪತಿ ಜೇಮ್ಸ್ ಅಮ್ಮನ್ನ.

ಮಠಾಧೀಶರು, ಬಿಷಪ್‌ರಿಂದ ಮತದಾನ

ಭಾವಿ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ, ಕಾಣಿಯೂರು ಮಠಾಧೀಶ ಶ್ರೀವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಮತ್ತು ಸೋದೆ ಮಠಾಧೀಶ ಶ್ರೀವಿಶ್ವವಲ್ಲಭ ತೀರ್ಥ ಸ್ವಾಮೀಜಿ ಉಡುಪಿ ಪಣಿಯಾಡಿ ಶ್ರೀಅನಂತೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಉಡುಪಿ ಪಲಿಮಾರು ಉಭಯ ಮಠಾಧೀಶ ಶ್ರೀವಿದ್ಯಾಧೀಶತೀರ್ಥ ಸ್ವಾಮೀಜಿ ಹಾಗೂ ಕಿರಿಯ ಯತಿ ಶ್ರೀವಿದ್ಯಾರಾಜೇಶ್ವರತೀರ್ಥ ಸ್ವಾಮೀಜಿ,  ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಉಡುಪಿ ನಾರ್ತ್ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಡಾ.ಜೆರಾಲ್ಡ್ ಐಸಾಕ್ ಲೊಬೋ ಸರತಿ ಸಾಲಿನಲ್ಲಿ ನಿಂತು ಉಡುಪಿ ಟಿಎ ಪೈ ಮೋಡರ್ನ್ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡಿದರು.  

ಮತದಾನ ಮಾಡಿದ ಉಡುಪಿ ಡಿಸಿ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಇಂದು ಮತಗಟ್ಟೆಗೆ ತೆರಳಿ ಮತದಾನ ಮಾಡಿದರು.

ಜಿಲ್ಲಾಧಿಕಾರಿ ತನ್ನ ಪತ್ನಿ ಜೊತೆ ಅಜ್ಜರಕಾಡು ವಿವೇಕಾನಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ತಮ್ಮ ಹಕ್ಕನ್ನು ಚಲಾಯಿಸಿದರು.

share
Next Story
X