Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸ್ಯಾಂಡಲ್‍ವುಡ್ ನಟ-ನಟಿಯರಿಂದ ಮತ ಚಲಾವಣೆ

ಸ್ಯಾಂಡಲ್‍ವುಡ್ ನಟ-ನಟಿಯರಿಂದ ಮತ ಚಲಾವಣೆ

10 May 2023 8:00 PM IST
share
ಸ್ಯಾಂಡಲ್‍ವುಡ್ ನಟ-ನಟಿಯರಿಂದ ಮತ ಚಲಾವಣೆ

ಬೆಂಗಳೂರು, ಮೇ 10: ರಾಜ್ಯ ವಿಧಾನಸಭಾ ಚುನಾವಣೆಗೆ ರಾಜ್ಯಾದ್ಯಂತ ಬುಧವಾರ ಬಿರುಸಿನ ಮತದಾನ ನಡೆಯಿತು. ಹೆಚ್ಚಿನ ಸಂಖ್ಯೆಯ ಸ್ಯಾಂಡಲ್‍ವುಡ್ ನಟ-ನಟಿಯರೂ ತಮ್ಮ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು. ಅಲ್ಲದೆ, ತಮ್ಮ ಹಕ್ಕು ಚಲಾಯಿಸುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.     

ಬ್ಯಾಟರಾಯನಪುರದಲ್ಲಿ ನಟ ಶಿವರಾಜ್‍ಕುಮಾರ್ ದಂಪತಿ ತಮ್ಮ ಮತ ಚಲಾಯಿಸಿದರೆ, ಪದ್ಮನಾಭನಗರದಲ್ಲಿ ರಮೇಶ್ ಅರವಿಂದ್ ತಮ್ಮ ಪತ್ನಿ ಜತೆ ಆಗಮಿಸಿ ಮತ ಚಲಾಯಿಸಿದರು. ಶಾಂತಿನಗರದಲ್ಲಿ ನಟ ಪ್ರಕಾಶ್ ರೈ ಮತ ಚಲಾಯಿಸಿದರೆ, ನಟ ಹಾಗೂ ರಾಜ್ಯಸಭಾ ಸದಸ್ಯ ಜಗೇಶ್ ಮಲ್ಲೇಶ್ವರಂನ ಮತಗಟ್ಟೆಗೆ ಆಗಮಿಸಿ ಪತ್ನಿ ಪರಿಮಳ ಅವರೊಂದಿಗೆ ಮತ ಚಲಾವಣೆ ಮಾಡಿದರು.        

ಹೊಸಕೆರೆಹಳ್ಳಿಯಲ್ಲಿ ನಟ ಯಶ್ ಮತದಾನ ಮಾಡಿದರೆ, ಕತ್ರಿಗುಪ್ಪೆಯಲ್ಲಿ ನಟ ಉಪೇಂದ್ರ ತಮ್ಮ ಪತ್ನಿ ಪ್ರಿಯಾಂಕಾ ಜತೆ ಆಗಮಿಸಿ ಮತದಾನ ಮಾಡಿದರು. ಹಿರಿಯ ನಟಿ ಲೀಲಾವತಿ ಅವರ ಪುತ್ರ ವಿನೋದ್ ರಾಜ್ ನೆಲಮಂಗಲದಲ್ಲಿ ಮತದಾನ ಮಾಡಿದರೆ, ವಿಜಯನಗರದಲ್ಲಿ ನಿರ್ದೇಶಕ ಪ್ರೇಮ್ ಹಾಗೂ ನಟಿ ರಕ್ಷಿತಾ ದಂಪತಿ ಮತದಾನ ಮಾಡಿದ್ದಾರೆ. 

ಸದಾಶಿವನಗರದಲ್ಲಿ ರಾಘವೇಂದ್ರ ರಾಜ್‍ಕುಮಾರ್ ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿದರು. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಮತ ಚಲಾಯಿಸಿದರು. ನಾಗರಭಾವಿಯಲ್ಲಿ ಪತ್ನಿ ಜ್ಯೋತಿ ಜತೆ ಆಗಮಿಸಿ ನೆನಪಿರಲಿ ಪ್ರೇಮ್ ಮತದಾನ ಮಾಡಿದರು. ಮೈಸೂರಿನ ಕೃಷ್ಣಮೂರ್ತಿ ಪುರಂನಲ್ಲಿ ಮಾಳವಿಕಾ ಅವಿನಾಶ್ ಮತಚಲಾಯಿಸಿದರು.    

ನಟರಾದ ದುನಿಯಾ ವಿಜಯ್, ಗಣೇಶ್, ಲೂಸ್‍ಮಾದ ಯೋಗಿ, ಶ್ರೀಮುರಳಿ, ಸಾಧುಕೋಕಿಲ, ನಟಿಯರಾದ ಸಂಜನಾ, ಹರ್ಷಿಕಾ ಪೂಣಚ್ಚ, ಅಮೂಲ್ಯ ಸೇರಿದಂತೆ ಸಾಕಷ್ಟು ಕಲಾವಿದರು ವೋಟ್ ಮಾಡಿದರು. 

‘ನನ್ನ ಪ್ರೀತಿಯ ಕನ್ನಡಿಗರೆ.. ನಾನು ಮತೀಯ ರಾಜಕಾರಣದ ವಿರುದ್ಧ.. ಶೇ.40 ಭ್ರಷ್ಟಾಚಾರಿಗಳ ವಿರುದ್ಧ ನನ್ನ ಮತ ಚಲಾಯಿಸಿದ್ದೇನೆ.. ನೀವು ನಿಮ್ಮ ಮನಃಸಾಕ್ಷಿಯಿಂದ.. ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿ ಉಳಿಸಲು ನಿಮ್ಮ ಮತವನ್ನು ಚಲಾಯಿಸಿ’

-ಪ್ರಕಾಶ್ ರಾಜ್ ಹಿರಿಯ ನಟ

share
Next Story
X