Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚಿರತೆ ಜತೆ ಹೋರಾಡಿ ಮೂರು ವರ್ಷದ ಬಾಲಕಿಯ...

ಚಿರತೆ ಜತೆ ಹೋರಾಡಿ ಮೂರು ವರ್ಷದ ಬಾಲಕಿಯ ಜೀವ ಉಳಿಸಿದ ಪೋಷಕರು!

11 May 2023 7:47 AM IST
share
ಚಿರತೆ ಜತೆ ಹೋರಾಡಿ ಮೂರು ವರ್ಷದ ಬಾಲಕಿಯ ಜೀವ ಉಳಿಸಿದ ಪೋಷಕರು!

ಬಿಜನೋರ್: ಹೊಲದಲ್ಲಿ ಆಟವಾಡುತ್ತಿದ್ದ ಪುಟ್ಟ ಬಾಲಕಿಯ ಮೇಲೆ ಎರಗಿದ ಚಿರತೆ ವಿರುದ್ಧ ಜೀವದ ಹಂಗು ತೊರೆದು ಹೋರಾಡಿದ ಪೋಷಕರು ಬಾಲಕಿಯ ಜೀವ ಉಳಿಸುವಲ್ಲಿ ಯಶಸ್ವಿಯಾದ ಘಟನೆ ವರದಿಯಾಗಿದೆ.

ಬಿಜನೋರ್‌ನ ಅಸ್ಫಾಬಾದ್ ಚಮನ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮದನ್ ಸಿಂಗ್ (30) ಹಾಗೂ ಪತ್ನಿ ಸುನಿತಾ ದೇವಿ (27) ಅಪೂರ್ವ ಸಾಹಸ ಮೆರೆದು ತಮ್ಮ ಮೂರು ವರ್ಷದ ಪುತ್ರಿ ಗಾಯತ್ರಿಯ ಜೀವ ಉಳಿಸಿದರು.

ಹೊಲದಲ್ಲಿ ಕೆಲಸ ಮಾಡುತ್ತಿದ್ದ ದಂಪತಿ, ತಮ್ಮ ಪುತ್ರಿಯ ಮೇಲೆ ಚಿರತೆ ಎರಗಿದ್ದನ್ನು ಕಂಡು, ತಂದೆ ತಕ್ಷಣವೇ ಚಿರತೆಯ ಮೇಲೆ ದಾಳಿ ನಡೆಸಿದರೆ, ತಾಯಿ ಗಟ್ಟಿ ಧ್ವನಿಯಲ್ಲಿ ಕೂಗಿದರು. ಇದರಿಂದ ವಿಚಲಿತವಾದ ಚಿರತೆ ಮಗುವನ್ನು ಬಿಟ್ಟು ಪರಾರಿಯಾಯಿತು. ಗಾಯಾಳು ಮಗುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು.

"ಇತ್ತೀಚಿನ ದಿನಗಳಲ್ಲಿ ಚಿರತೆ ದಾಳಿ ನಡೆದ ಸೂಕ್ಷ್ಮ ಪ್ರದೇಶಗಳಲ್ಲಿ ಬೋನುಗಳನ್ನು ಅಳವಡಿಸಿದ್ದೇವೆ. ಇದನ್ನು ಹಿಡಿಯಲು 11 ತಂಡಗಳನ್ನು ರಚಿಸಲಾಗಿದೆ. ಹೊಲಗಳಿಗೆ ಏಕಾಂಗಿಯಾಗಿ ಹೋಗದಂತೆ ಅದರಲ್ಲೂ ಮುಖ್ಯವಾಗಿ ಪುಟ್ಟ ಮಕ್ಕಳೊಂದಿಗೆ ಹೊಲಕ್ಕೆ ಹೋಗದಂತೆ ಗ್ರಾಮಸ್ಥರಿಗೆ ಎಚ್ಚರಿಕೆ ನೀಡಿದ್ದೇವೆ" ಎಂದು ಬಿಜನೋರ್ ಡಿಎಫ್‌ಓ ಎ.ಕೆ.ಸಿಂಗ್ ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಅಫ್ಜಲ್‌ಗಢ ಪ್ರದೇಶದಲ್ಲಿ ಚಿರತೆ ದಾಳಿ ಹೆಚ್ಚಿದ್ದು, ಕಳೆದ ತಿಂಗಳು ಇಬ್ಬರು ಮಕ್ಕಳ ಸಹಿತ ನಾಲ್ಕು ಮಂದಿ ದಾಳಿಗೆ ಬಲಿಯಾಗಿದ್ದರು. ಕೊಯ್ಲಿನ ಸಮಯವಾದ್ದರಿಂದ ಜನ ಹೆಚ್ಚಿನ ಸಮಯ ಹೊಲಗಳಲ್ಲಿ ಇರುವುದು ಪ್ರಾಣಿ- ಮನುಷ್ಯನ ನಡುವೆ ಸಂಘರ್ಷಕ್ಕೆ ಕಾರಣವಾಗಿದೆ ಎಂದು ರೈತ ಚಮನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

share
Next Story
X