Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೂಡುಶೆಡ್ಡೆಯಲ್ಲಿ ಮತದಾನೋತ್ತರ ಘರ್ಷಣೆ...

ಮೂಡುಶೆಡ್ಡೆಯಲ್ಲಿ ಮತದಾನೋತ್ತರ ಘರ್ಷಣೆ ಹಿನ್ನೆಲೆ: 5 ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

11 May 2023 9:16 AM IST
share
ಮೂಡುಶೆಡ್ಡೆಯಲ್ಲಿ ಮತದಾನೋತ್ತರ ಘರ್ಷಣೆ ಹಿನ್ನೆಲೆ: 5 ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಮಂಗಳೂರು, ಮೇ 11: ಬುಧವಾರ ಮತದಾನ ಮುಗಿದ ಬಳಿಕ  ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಸಂಭವಿಸಿದ ಘರ್ಷಣೆಯ ಹಿನ್ನೆಲೆಯಲ್ಲಿ ಐದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 14ರವರೆಗೆ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕಾವೂರು, ಸುರತ್ಕಲ್ ಬಜ್ಪೆ, ಮೂಡುಬಿದಿರೆ ಮತ್ತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಕಾನೂನು ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಮೇ 14ರ ಬೆಳಗ್ಗೆ 6ರವರೆಗೆ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆಯ ಅವಧಿಯಲ್ಲಿ ಘೋಷಣೆ ಕೂಗುವುದು ಪಟಾಕಿ ಸಿಡಿಸುವುದು, ಜಾಥಾ, ಧರಣಿ, ಪ್ರತಿಭಟನೆಗಳನ್ನು ನಡೆಸುವುದು, ಸಭೆ ಸಮಾರಂಭಗಳನ್ನು ನಡೆಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಅಲ್ಲದೆ ಭಿತ್ತಿ ಪತ್ರಗಳನ್ನು ಅಂಟಿಸುವುದು, ಮಾರಕಾಸ್ತ್ರಗಳನ್ನು ಹೊಂದಿರುವುದಕ್ಕೆ ನಿಷೇಧ ವಿಧಿಸಲಾಗಿದೆ. ನಿಷೇಧಾಜ್ಞೆಯನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಉಪ ಪೊಲೀಸ್ ಆಯುಕ್ತ ಅಂಶುಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪರಿಸ್ಥಿತಿ ನಿಯಂತ್ರಣದಲ್ಲಿ

ಮೂಡುಶೆಡ್ಡೆಯಲ್ಲಿ ಬುಧವಾರ ಸಂಜೆ ನಡೆದ ಅಹಿತಕರ ಘಟನೆ ಕುರಿತಂತೆ ಪ್ರತಿಕ್ರಿಯಿಸಿರುವ ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್, ಕಲ್ಲು ತೂರಾಟದಿಂದ ಮೂವರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಓರ್ವ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು | ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಧ್ಯೆ ಹೊಡೆದಾಟ; ಮಿಥುನ್ ರೈ ಕಾರಿಗೆ ಕಲ್ಲೆಸೆದು ಹಾನಿ

ದ.ಕ. ಜಿಲ್ಲೆಯಲ್ಲಿ ಬುಧವಾರ ಶಾಂತಿಯುತ ಮತದಾನ ಪ್ರಕ್ರಿಯೆ ನಡೆದರೂ ಆ ಬಳಿಕ ಅಂದರೆ ರಾತ್ರಿ 7:30ರ ಸುಮಾರಿಗೆ ಮೂಡುಬಿದಿರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಡುಶೆಡ್ಡೆಯ ಸರಕಾರಿ ಹಿ.ಪ್ರಾ.ಶಾಲೆಯ ಮತಗಟ್ಟೆಯ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಹೊಡೆದಾಟ ನಡೆದಿತ್ತು.

share
Next Story
X