ರಾಜ್ಯಾದ್ಯಂತ ಇಂದು ಭಾರೀ ಮಳೆ ಸಾಧ್ಯತೆ: 3 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’

ಬೆಂಗಳೂರು: ರಾಜ್ಯಾದ್ಯಂತ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗೆ ಹವಾಮಾನ ಇಲಾಖೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಒಂದೆರಡು ಕಡೆ ಪ್ರತಿ ಗಂಟೆಗೆ 30–40 ಕಿ.ಮೀ. ವೇಗದಲ್ಲಿ ಬಿರುಗಾಳಿ ಇರುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.
Next Story





