ಪಂಜಾಬ್‌ನ ಗೋಲ್ಡನ್ ಟೆಂಪಲ್ ಬಳಿ ಒಂದು ವಾರದಲ್ಲಿ ಮೂರನೇ ಸ್ಫೋಟ, 5 ಮಂದಿಯ ಬಂಧನ

ಹೊಸದಿಲ್ಲಿ/ಅಮೃತಸರ: ಅಮೃತಸರದ ಗೋಲ್ಡನ್ ಟೆಂಪಲ್ ಬಳಿ ನಿನ್ನೆ ತಡರಾತ್ರಿ ಸ್ಫೋಟ ಸಂಭವಿಸಿದ ನಂತರ ಪಂಜಾಬ್ ಪೊಲೀಸರು ಐವರನ್ನು ಬಂಧಿಸಿದ್ದಾರೆ.
ಅಮೃತಸರದ ಹೆರಿಟೇಜ್ ಸ್ಟ್ರೀಟ್ ಬಳಿ ಇಂದು ಮುಂಜಾನೆ 1 ಗಂಟೆ ಸುಮಾರಿಗೆ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದೆ. ಐದು ದಿನಗಳಲ್ಲಿ ಸಂಭವಿಸಿದ ಮೂರನೇ ಸ್ಫೋಟ ಇದಾಗಿದೆ.
"ಅಮೃತಸರ ಕಡಿಮೆ ತೀವ್ರತೆಯ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಐವರನ್ನು ಬಂಧಿಸಲಾಗಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ನಿರ್ದೇಶನದ ಮೇರೆಗೆ ಪಂಜಾಬ್ ನಲ್ಲಿ ಶಾಂತಿ ಹಾಗೂ ಸೌಹಾರ್ದತೆ ಕಾಪಾಡಲು ಪಂಜಾಬ್ ಪೊಲೀಸ್ ಬದ್ಧವಾಗಿದೆ" ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕರು ತಿಳಿಸಿದ್ದಾರೆ
Next Story





