Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಮೀಕ್ಷಾ ವರದಿ ಸುಳ್ಳಾಗಲಿದೆ,...

ಸಮೀಕ್ಷಾ ವರದಿ ಸುಳ್ಳಾಗಲಿದೆ, ಯಡಿಯೂರಪ್ಪರ ವರದಿ ಸುಳ್ಳಾಗಲ್ಲ ಎಂದ ಶೋಭಾ ಕರಂದ್ಲಾಜೆ

11 May 2023 12:51 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸಮೀಕ್ಷಾ ವರದಿ ಸುಳ್ಳಾಗಲಿದೆ, ಯಡಿಯೂರಪ್ಪರ ವರದಿ ಸುಳ್ಳಾಗಲ್ಲ ಎಂದ ಶೋಭಾ ಕರಂದ್ಲಾಜೆ

ಬೆಂಗಳೂರು, ಮೇ 11: ಚುನಾವಣೋತ್ತರ ಸಮೀಕ್ಷಾ ವರದಿ ಸುಳ್ಳಾಗಲಿದ್ದು, ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಸರಕಾರ ರಚಿಸಲಿದೆ’ ಎಂದು ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಗುರುವಾರ ನಗರದ ಕ್ಯಾಪಿಟಲ್ ಹೋಟೆಲ್‍ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಮ್ಮ ವರದಿ, ಯಡಿಯೂರಪ್ಪರ ವರದಿ ಸುಳ್ಳಾಗಿಲ್ಲ. ಯಡಿಯೂರಪ್ಪನವರು 120 ಸ್ಥಾನಗಳನ್ನು ದಾಟಲಿದೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅದು ನಿಜವಾಗಲಿದೆ. ರಾಜ್ಯದ ಜನರು ಅಭಿವೃದ್ಧಿಗಾಗಿ ಬಹುಮತದ ಬಿಜೆಪಿ ಸರಕಾರ ಕೊಡಲಿದ್ದಾರೆ. ಅತಂತ್ರ ಸ್ಥಿತಿ ಖಂಡಿತವಾಗಿ ಬರುವುದಿಲ್ಲ. ಮೇ 13ರ ಫಲಿತಾಂಶದ ವರೆಗೆ ಕಾಯೋಣ’ ಎಂದು ನುಡಿದರು.

‘ನಮ್ಮ ಕಾರ್ಯಕರ್ತರ ಪ್ರಾಥಮಿಕ ವರದಿಯಂತೆ 120-125 ಕಡೆ ನಾವು ಲೀಡ್‍ನಲ್ಲಿದ್ದೇವೆ. ನಾವು ಬಹುಮತದ ಸರಕಾರ ರಚಿಸುತ್ತೇವೆ. ಜೆಡಿಎಸ್ ಭೂಮಿಕೆ ಕುರಿತು ನನಗೆ ಅರಿವಿಲ್ಲ’ ಎಂದ ಅವರು, ‘ಮೈಸೂರು ಭಾಗದಲ್ಲಿ ನಮ್ಮ ಪಕ್ಷದಿಂದ ಸುಶಿಕ್ಷಿತ, ಯುವ ಅಭ್ಯರ್ಥಿಗಳಿದ್ದರು. ಅಲ್ಲಿ ಅತ್ಯುತ್ತಮ ಫಲಿತಾಂಶ ನಿರೀಕ್ಷೆಯಲ್ಲಿದ್ದೇವೆ. ಇಂದು ಕಾರ್ಯಕರ್ತರು ಗೆಲುವಿನ ಕುರಿತು ಲೆಕ್ಕಾಚಾರ ಮಾಡಲಿದ್ದಾರೆ ಎಂದು ಹೇಳಿದರು.

‘ಜನರ ಉತ್ಸಾಹದ ಮತದಾನ, ಬೂತ್‍ಗಳಲ್ಲಿ ನಮಗೆ ಕಂಡುಬಂದ ವರದಿಗಳು ಇದಕ್ಕೆ ಕಾರಣ. ನಮ್ಮ ಕಾರ್ಯಕರ್ತರ ಸಮೀಕ್ಷೆ ಆಧಾರದಲ್ಲಿ ನೂರಕ್ಕೆ 100 ಬಿಜೆಪಿ ಬಹುಮತದ ಸರಕಾರವನ್ನು ರಚಿಸುವ ವಿಶ್ವಾಸ ಇದೆ’ ಎಂದು ನುಡಿದರು.

‘ಕೆಲವು ಜಿಲ್ಲೆಗಳಲ್ಲಿ ಶೇ.80ರಿಂದ ಶೇ.83ರಷ್ಟು ಮತ ಚಲಾವಣೆ ಆಗಿದೆ. ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಮತ ಚಲಾಯಿಸಿದ ಮತದಾರರಿಗೆ ಅಭಿನಂದನೆಗಳು. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಮತದಾನ ನಮ್ಮ ಹಕ್ಕು ಮತ್ತು ಕರ್ತವ್ಯ. ಒಂದು ಒಳ್ಳೆಯ ಸರಕಾರವನ್ನು ರಾಜ್ಯ-ದೇಶದಲ್ಲಿ ತರಲು ಹಾಗೂ ನಮ್ಮ ಸ್ಥಳೀಯ ಸಂಸ್ಥೆಯಲ್ಲಿ ಒಳ್ಳೆಯ ವ್ಯವಸ್ಥೆಯನ್ನು ತರಲು ಮತದಾನ ಅಗತ್ಯವಾಗಿ ಬೇಕಾಗಿದೆ ಎಂದರು.

ವೃದ್ಧರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಿದ್ದರು ಅನೇಕ ಹಿರಿಯರು ಬೂತ್‍ಗೆ ಬಂದು ಸದರಿಯಲ್ಲಿ ನಿಂತು ಮತದಾನ ಮಾಡಿದ್ದಾರೆ. ಅವರಿಗೆ ಮತ್ತು ಪ್ರಚಾರದಲ್ಲಿ ಸಹಕರಿಸಿದ ಮಾಧ್ಯಮಗಳಿಗೂ ಧನ್ಯವಾದಗಳು’ ಎಂದ ಅವರು, ಬೆಂಗಳೂರು ನಗರದಲ್ಲಿ ಚುನಾವಣಾ ಆಯೋಗ, ಪಕ್ಷಗಳ ಪ್ರಯತ್ನದ ಬಳಿಕವೂ ಶೇ.52-53ರಷ್ಟು ಮತದಾನ ಆಗಿದೆ. ಆದರೂ ಕಡಿಮೆ ಮತದಾನ ಆಗಿರುವುದು ಬೇಸರದ ವಿಚಾರ ಎಂದು ಹೇಳಿದರು.

ಬೆಂಗಳೂರು ನಗರದ ನಿವಾಸಿಗಳು ಸಾಕಷ್ಟು ಪ್ರಮಾಣದಲ್ಲಿ ಮತದಾನ ಮಾಡುವುದಿಲ್ಲ ಎಂಬ ಬೇರೆ ಜಿಲ್ಲೆಯವರ ಮಾತು ನಿಜ. ಮುಂದಿನ ದಿನಗಳಲ್ಲಿ ಬೆಂಗಳೂರಿನ ಜನತೆ ಪ್ರಜಾತಂತ್ರದ ಹಬ್ಬದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಲಿ. ಇದಕ್ಕಾಗಿ ಇನ್ನಷ್ಟು ಪ್ರಯತ್ನ ಮಾಡುತ್ತೇವೆ’ ಎಂದು ಶೋಭಾ ಕರಂದ್ಲಾಜೆ  ತಿಳಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X