Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು | ಹೋಟೆಲ್‍ನಲ್ಲಿ ನೀರು ಕುಡಿದ...

ಬೆಂಗಳೂರು | ಹೋಟೆಲ್‍ನಲ್ಲಿ ನೀರು ಕುಡಿದ ವಿಚಾರಕ್ಕೆ ಕಾರು ಹತ್ತಿಸಿ ದಲಿತರಿಬ್ಬರ ಹತ್ಯೆ: ಆರೋಪ

ಪೊಲೀಸ್ ಠಾಣೆ ಮುಂದೆ ಮೃದೇಹವಿಟ್ಟು ಪ್ರತಿಭಟನೆ; ಆಕ್ರೋಶ

11 May 2023 8:08 PM IST
share
ಬೆಂಗಳೂರು | ಹೋಟೆಲ್‍ನಲ್ಲಿ ನೀರು ಕುಡಿದ ವಿಚಾರಕ್ಕೆ ಕಾರು ಹತ್ತಿಸಿ ದಲಿತರಿಬ್ಬರ ಹತ್ಯೆ: ಆರೋಪ
ಪೊಲೀಸ್ ಠಾಣೆ ಮುಂದೆ ಮೃದೇಹವಿಟ್ಟು ಪ್ರತಿಭಟನೆ; ಆಕ್ರೋಶ

ಬೆಂಗಳೂರು, ಮೇ 11: ಇತ್ತೀಚಿಗೆ ಹೋಟೆಲ್‍ವೊಂದರಲ್ಲಿ ನೀರು ಕುಡಿದ ವಿಚಾರಕ್ಕೆ ನಡೆದ ಗಲಾಟೆಯನ್ನೆ ಮುಂದಿಟ್ಟುಕೊಂಡು ಇಪ್ಪತ್ತು ದಿನಗಳ ಬಳಿಕ ಕಾರು ಹತ್ತಿಸಿ ಇಬ್ಬರು ದಲಿತರನ್ನು ಹತ್ಯೆಗೈದಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇಲ್ಲಿನ ರಾಜಾನಕುಂಟೆ ಪೊಲೀಸ್ ಠಾಣೆ ಎದುರು ಶವವಿಟ್ಟು ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಲಾಯಿತು.

ಹೆಸರಘಟ್ಟ ಹೋಬಳಿಯ ಚಲ್ಲಹಳ್ಳಿ ನಿವಾಸಿಗಳಾದ ನಾಗರಾಜ್ ಹಾಗೂ ರಾಮಯ್ಯ ಎಂಬುವರನ್ನು ಉದ್ದೇಶ ಪೂರಕವಾಗಿ ಜಾತಿಯ ವಿಚಾರಕ್ಕೆ ಕಾರು ಹತ್ತಿಸಿ ಹಾಡುಹಾಗಲೇ ಹತ್ಯೆ ಮಾಡಲಾಗಿದ್ದು, ಈ ಸಂಬಂಧ ಕೃತ್ಯವೆಸಗಿದ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಗುರುವಾರ ಇಲ್ಲಿನ ಪ್ರತಿಭಟನಾ ನಿರತ ಮೃತರ ಸಂಬಂಧಿಕರು, ಬಿಎಸ್ಪಿ ನಾಯಕರು ಆಗ್ರಹಿಸಿದರು.

ಘಟನೆ ಸಂಬಂಧ ಇಲ್ಲಿನ ರಾಜಾನಕುಂಟೆ ಠಾಣಾ ಪೊಲೀಸರಿಗೆ ದೂರು ನೀಡಿರುವ ಮೃತರ ಸಂಬಂಧ ವೆಂಕಟೇಶ್, ಗುರುವಾರ ಮುಂಜಾನೆ ನಾಗರಾಜ್, ರಾಮಯ್ಯ ಹಾಗೂ ಗೋಪಾಲ್ ಎಂಬುವರು ಒಂದೇ ಬೈಕ್‍ನಲ್ಲಿ ಇಲ್ಲಿನ ಕೆಎಂಎಫ್ ಕಾರ್ಖಾನೆಗೆ ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ಬಂದ ಕಾರು ಢಿಕ್ಕಿ ಹೊಡೆದಿದೆ. ಇದರ ರಭಸಕ್ಕೆ ನಾಗರಾಜ್, ರಾಮಯ್ಯ ಸ್ಥಳದಲ್ಲಿಯೇ ಮೃತಪಟ್ಟರೆ, ಗೋಪಾಲ್ ಅವರು ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ, ಈ ಕಾರನ್ನು ರೌಡಿಶೀಟರ್ ಭರತ್, ನಿಶಾಂತ್, ವಿನಯ್ ಸೇರಿದಂತೆ ಇತರರು ಶರವೇಗವಾಗಿ ಚಲಾಯಿಸಿಕೊಂಡು ಬಂದು ಉದ್ದೇಶ ಪೂರಕವಾಗಿ ಹತ್ಯೆ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಕರ್ತವ್ಯದಲ್ಲಿದ್ದ ಕೊಪ್ಪಳದ ಯೋಧ ಹೃದಯಾಘಾತದಿಂದ ಮೃತ್ಯು

20 ದಿನಗಳ ಹಿಂದೆ ಹಲ್ಲೆ: ಕಳೆದ ಇಪ್ಪತ್ತು ದಿನಗಳ ಹಿಂದೆ ಹೆಸರುಘಟ್ಟದಲ್ಲಿ ಹೋಟೆಲ್‍ನಲ್ಲಿ ನಾಗರಾಜ್ ನೀರು ಕುಡಿದ ವಿಚಾರಕ್ಕೆ ಭರತ್ ಎಂಬಾತ ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂತನೆ ಮಾಡಿದ್ದ. ಅಲ್ಲದೆ, ಚುನಾವಣೆ ಬಳಿಕೆ ಕೊಲೆ ಮಾಡುವುದಾಗಿ ಬಹಿರಂಗ ಬೆದರಿಕೆವೊಡ್ಡಿದ್ದ.ಇನ್ನೂ, ಈ ಭರತ್ ಈಗಾಗಲೇ ರೌಡಿಶೀಟರ್ ಆಗಿದ್ದು, ಈತನ ತಂದೆ ವಿರುದ್ಧವೂ ಅನೇಕ ಗಂಭೀರ ಆರೋಪಗಳಿವೆ. ಹೀಗಾಗಿ, ಭರತ್, ನಿಶಾಂತ್, ವಿನಯ್ ಎಂಬುವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ.

ಘಟನೆ ಕುರಿತು ಮಾತನಾಡಿದ ಬಿಎಸ್ಪಿ ರಾಜ್ಯ ಉಸ್ತುವಾರಿ ಮಾರಸಂದ್ರ ಮುನಿಯಪ್ಪ, ಉದ್ದೇಶ ಪೂರಕವಾಗಿಯೇ ಕಾರು ಹತ್ತಿಸಿ ಕೊಲೆ ಮಾಡಲಾಗಿದೆ. ಘಟನೆ ನಡೆದ ಸ್ಥಳ ಪರಿಶೀಲನೆ ನಡೆಸಿದರೆ, ಇದು ಕೊಲೆಯೆಂದೇ ಹೇಳಬಹುದಾಗಿದೆ. ಸದ್ಯ ಪೊಲೀಸರು ಆರೋಪಿಗಳ ವಿರುದ್ಧ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ. ಆದರೆ, ಇಂತಹ ಭಯಾನಕ ಕೃತ್ಯವೆಸಗಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು.ಇಲ್ಲದಿದ್ದರೆ, ಹೋರಾಟ ಮುಂದುವರೆಸುವುದಾಗಿ ಎಚ್ಚರಿಕೆ ನೀಡಿದರು.

ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ಮಾತನಾಡಿ ಘಟನೆಗೆ ಸಂಬಂಧಿಸಿದಂತೆ ರಾಜಾನುಕುಂಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಘಟನೆಗೆ ಕಾರಣನಾದ ಭರತ್ ಮತ್ತು ಆತನ ಸ್ನೇಹಿತರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದರು.

share
Next Story
X