ಉಡುಪಿಯಲ್ಲಿ ಗುಡುಗು ಸಹಿತ ಮಳೆ

ಉಡುಪಿ: ಉಡುಪಿ ಜಿಲ್ಲೆಯ ಹಲವು ಕಡೆಗಳಲ್ಲಿ ಇಂದು ಸಂಜೆ ವೇಳೆ ಗುಡುಗು ಸಹಿತ ಭಾರೀ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.
ಸಂಜೆಯಿಂದ ಮೋಡ ಕವಿದ ವಾತಾವರಣ ಇದ್ದು, ರಾತ್ರಿ ವೇಳೆ ಉಡುಪಿ, ಮಣಿಪಾಲ, ಕಾರ್ಕಳ, ಕಾಪು, ಪಡುಬಿದ್ರಿ ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಕೆಲ ಕಾಲ ಮಳೆಯಾಗಿದೆ.
ಆದರೆ ಉಡುಪಿ ನಗರ, ಕಾಪು, ಪಡುಬಿದ್ರಿ ಪರಿಸರದಲ್ಲಿ ಸಿಡಿಲ ಅಬ್ಬರ ಜೊರಾಗಿತ್ತು. ಮಳೆಯಿಂದ ಪರಿಸರ ತಂಪಾಗಿದ್ದು, ದ್ವಿಚಕ್ರ ವಾಹನ ಸವಾರರು ಮಳೆಯಿಂದ ತೊಂದರೆ ಅನುಭವಿಸುವಂತಾಯಿತು. ಅಲ್ಲದೆ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಕೂಡ ಉಂಟಾಯಿತು.
Next Story





