ಮಂಗಳೂರು: ಗುಡುಗು ಸಹಿತ ಭಾರೀ ಮಳೆ

ಮಂಗಳೂರು: ನಗರ ಮತ್ತು ತಾಲೂಕಿನ ವಿವಿಧೆಡೆ ಗುರುವಾರ ರಾತ್ರಿ ಗುಡುಗು ಸಹಿತ ಭಾರೀ ಮಳೆಯಾಗಿದೆ.
ವಾಯುಭಾರ ಕುಸಿತದಿಂದಾಗಿ ಮುಂಗಾರುಪೂರ್ವ ಮಳೆಯು ಬಿರುಸು ಪಡೆದಿದ್ದು, ಗುಡುಗು, ಮಿಂಚು ಸಹಿತ ಮಳೆ ಸುರಿದಿದೆ. ನಗರದ ಸ್ಮಾರ್ಟ್‌ಸಿಟಿ ಕಾಮಗಾರಿಯ ಅವಾಂತರಕ್ಕೆ ಈ ಮಳೆ ಸಾಕ್ಷಿಯಾಗಿದ್ದು, ಅನೇಕ ಕಡೆ ಮಳೆ ನೀರು ಸರಾಗವಾಗಿ ಹರಿದು ಹೋಗಲಾಗದೆ ರಸ್ತೆಯಲ್ಲೇ ನಿಂತಿವೆ. ಇದರಿಂದ ಸಾರ್ವಜನಿಕರಿಗೆ, ವಾಹನಿಗರಿಗೆ ಸಮಸ್ಯೆಯಾಗಿದೆ.
ಮಳೆಯ ಆರ್ಭಟಕ್ಕೆ ನಗರದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಹಠಾತ್ ಸುರಿದ ಭಾರೀ ಮಳೆಯಿಂದಾಗಿ ದ್ವಿಚಕ್ರ ವಾಹನಿಗರಲ್ಲದೆ ಸಾರ್ವಜನಿಕರು ಸಕಾಲಕ್ಕೆ ವಾಸಸ್ಥಾನಕ್ಕೆ ತಲುಪಲಾಗದೆ ಪರದಾಡುವಂತಾಗಿದೆ.
Next Story





