ಸಿದ್ದರಾಮಯ್ಯ ಸಿಎಂ ಆಗುವ ಸಾಧ್ಯತೆ ಇದ್ದರೆ ಕಾಂಗ್ರೆಸ್ ಗೆ ನಮ್ಮ ಪಕ್ಷದ ಬೆಂಬಲ: ಗಾಲಿ ಜನಾರ್ದನ ರೆಡ್ಡಿ

ಕೊಪ್ಪಳ, ಮೇ 11: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವ ಸಾಧ್ಯತೆಗಳಿದ್ದರೆ, ಅವರಿಗೆ ನಮ್ಮ ಪಕ್ಷ ಬೆಂಬಲಿಸುತ್ತದೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಗಾಲಿ ಜನಾರ್ದನರೆಡ್ಡಿ ಹೇಳಿದ್ದಾರೆ.
ಗಂಗಾವತಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವ ಸಂದರ್ಭ ಬಂದರೆ ಬೆಂಬಲಿಸುತ್ತೇನೆ ಎಂದು ಹೇಳಿದ್ದೆ. ಈಗಲೂ ಅದೇ ನಿಲುವಿಗೆ ಬದ್ಧನಾಗಿದ್ದೇನೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಅಭಿವೃದ್ಧಿ ಚಿಂತನೆ ಮಾಡುವ ವ್ಯಕ್ತಿ. ರಾಜ್ಯದಲ್ಲಿ ಯಾವ ಪಕ್ಷಕ್ಕೂ ಬಹುಮತ ಬರದಿದ್ದರೆ ನಮ್ಮ ಪಕ್ಷ ಅವರಿಗೆ ಬೆಂಬಲ ನೀಡಲಿದೆ. ಗಂಗಾವತಿ ಕ್ಷೇತ್ರದ ಜನ ನನ್ನ ಮೇಲೆ ವಿಶ್ವಾಸವಿಟ್ಟು ಬೆಂಬಲ ವ್ಯಕ್ತಪಡಿಸಿದ್ದಾರೆ. ಬಳ್ಳಾರಿಯಲ್ಲಿ ನನ್ನ ಪತ್ನಿ ಲಕ್ಷ್ಮೀ ಅರುಣಾ ಗೆಲ್ಲುತ್ತಾರೆ. ಇದರಿಂದ, ನಮ್ಮ ಪಕ್ಷ 13 ಸ್ಥಾನ ಗೆಲ್ಲಲಿದೆ ಎಂದು ಹೇಳಿದರು.
Next Story





