ಸಿಡಿಲು ಬಡಿದು ಯುವಕ ಮೃತ್ಯು

ಮಂಡ್ಯ, ಮೇ 11: ಮಳೆ ಸುರಿಯುತ್ತಿದ್ದ ಸಂದರ್ಭ ಮರದ ಕೆಳಗೆ ನಿಂತಿದ್ದ ಯುವಕನೋರ್ವ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲೂಕು ಮಾದರಹಳ್ಳಿ ಸಮೀಪದ ಹರಹಳ್ಳಿ ವೃತ್ತದಲ್ಲಿ ಗುರುವಾರ ಸಂಜೆ ನಡೆದಿದೆ.
ಮದ್ದೂರು ತಾಲೂಕಿನ ವೈದ್ಯನಾಥಪುರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಮಧು(35) ಸಿಡಿಲಿಗೆ ಬಲಿಯಾದ ವ್ಯಕ್ತಿಯಾಗಿದ್ದಾರೆ.
ಮಧು ತನ್ನ ಪತ್ನಿಯನ್ನು ಕಾಡುಕೊತ್ತನಹಳ್ಳಿ ಬಿಟ್ಟು ವಾಪಸ್ ಬರುತ್ತಿದ್ದಾಗ ಮಳೆ ಬಂದ ಹಿನ್ನೆಲೆಯಲ್ಲಿ ಬೈಕ್ ನಿಲ್ಲಿಸಿ ಮರದ ಕೆಳಗೆ ನಿಂತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.
ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸರ್ಕಲ್ ಇನ್ಸ್ ಪೆಕ್ಟರ್ ಆನಂದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
Next Story





