ವಿಧಾನಸಭೆ ಚುನಾವಣೆ- 2023 | ಮತ ಎಣಿಕೆ ಕೇಂದ್ರಗಳ ಬಳಿ ಬಿಗಿ ಬಂದೋಬಸ್ತ್

ಬೆಂಗಳೂರು, ಮೇ 11: ರಾಜ್ಯ ವಿಧಾನಸಭೆಯ 224 ಕ್ಷೇತ್ರಗಳಿಗೆ ಬುಧವಾರ ನಡೆದ ಚುನಾವಣೆಯ ಬಳಿಕ ಇದೀಗ ಎಲ್ಲ ಅಭ್ಯರ್ಥಿಗಳ ಚಿತ್ತ ಮೇ 13ರ ಶನಿವಾರ ಪ್ರಕಟವಾಗಲಿರುವ ಫಲಿತಾಂಶದತ್ತ ನೆಟ್ಟಿದೆ. ಕೇಂದ್ರ ಚುನಾವಣಾ ಆಯೋಗವು ಮತಗಳ ಎಣಿಕೆ ಕಾರ್ಯಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಮತ ಎಣಿಕೆ ಕೇಂದ್ರಗಳ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದೆ.
ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಆನೇಕಲ್, ಬೆಂಗಳೂರು ದಕ್ಷಿಣ, ಬ್ಯಾಟರಾಯನಪುರ, ದಾಸರಹಳ್ಳಿ, ಮಹದೇವಪುರ, ಯಲಹಂಕ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು ವಿಠ್ಠಲ್ ಮಲ್ಯ ರಸ್ತೆಯಲ್ಲಿರುವ ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಹಾಗೂ ಪಿಯು ಕಾಲೇಜಿನಲ್ಲಿ ನಡೆಯಲಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕೇಂದ್ರ ವ್ಯಾಪ್ತಿಯ ಚಾಮರಾಜಪೇಟೆ, ಚಿಕ್ಕಪೇಟೆ, ಗಾಂಧಿನಗರ, ರಾಜಾಜಿನಗರ, ರಾಜರಾಜೇಶ್ವರಿ ನಗರ, ಶಾಂತಿ ನಗರ, ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು ಬಸವನಗುಡಿಯ ಗಾಂಧಿ ಬಝಾರ್‍ನಲ್ಲಿರುವ ಬಿಎಂಎಸ್ ಮಹಿಳಾ ಕಾಲೇಜಿನಲ್ಲಿ ನಡೆಯಲಿದೆ.
ಬಿಬಿಎಂಪಿ ದಕ್ಷಿಣ ವ್ಯಾಪ್ತಿಯ ಬಿ.ಟಿ.ಎಂ.ಲೇಔಟ್, ಬಸವನಗುಡಿ, ಬೊಮ್ಮನಹಳ್ಳಿ, ಗೋವಿಂದರಾಜನಗರ, ಜಯನಗರ, ಪದ್ಮನಾಭನಗರ, ವಿಜಯನಗರ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಯು ಜಯನಗರ 4ನೆ ಬ್ಲಾಕ್‍ನಲ್ಲಿರುವ ಎಸ್.ಎಸ್.ಎಂ.ಆರ್.ವಿ.ಪಿಯು ಕಾಲೇಜು ಹಾಗೂ ಬಿಬಿಎಂಪಿ ಉತ್ತರ ವ್ಯಾಪ್ತಿಯ ಸಿ.ವಿ.ರಾಮನ್ ನಗರ, ಹೆಬ್ಬಾಳ, ಕೆ.ಆರ್.ಪುರ, ಮಹಾಲಕ್ಷ್ಮಿ ಲೇಔಟ್, ಮಲ್ಲೇಶ್ವರಂ, ಪುಲಿಕೇಶಿನಗರ, ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು ವಸಂತನಗರದ ಅರಮನೆ ರಸ್ತೆಯಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ನಡೆಯಲಿದೆ.
ಬೆಳಗಾವಿ ಜಿಲ್ಲೆಯ ಕ್ಷೇತ್ರಗಳ ಮತಗಳ ಎಣಿಕೆಯು ತಿಲಕವಾಡಿಯ ರಾಣಿ ಪಾರ್ವತಿ ದೇವಿ ಕಾಲೇಜು, ಬಾಗಲಕೋಟೆ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ವಿಜಯಪುರ(ಬಿಜಾಪುರ) ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯು ವಿಜಯಪುರ-ಅಥಣಿ ರಸ್ತೆಯಲ್ಲಿರುವ ಸೈನಿಕ ಶಾಲೆಯ ಆವರಣ, ಯಾದಗಿರಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯು ಯಾದಗಿರಿ ಸರಕಾರಿ ಪಿಯು ಕಾಲೇಜಿನಲ್ಲಿ ನಡೆಯಲಿದೆ.
ಕಲಬುರಗಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯು ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ, ಬೀದರ್ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯು ಬಿ.ವಿ.ಬಿ.ಕಾಲೇಜಿನಲ್ಲಿ, ರಾಯಚೂರು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯು ಸೇಠ್ ರಿಖಾಬ್‍ಚಂದ್ ಪಾರಸ್‍ಮಲ್ ಸುಖಾನಿ ಪಿಯು ಕಾಲೇಜಿನಲ್ಲಿ, ಕೊಪ್ಪಳ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯು ಶ್ರೀ ಗವಿಸಿದ್ದೇಶ್ವರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಪದವಿ ಕಾಲೇಜಿನಲ್ಲಿ ನಡೆಯಲಿದೆ.
ಗದಗ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯು ಶ್ರೀ ಜಗದ್ಗುರು ತೋಂಟದಾರ್ಯ ಎಂಜಿನಿಯರಿಂಗ್ ಕಾಲೇಜಿನಲ್ಲಿ, ಧಾರವಾಡ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯು ಎತ್ತಿನಗುಂಡದಲ್ಲಿರುವ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಉತ್ತರ ಕನ್ನಡ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯು ಕುಮಟಾದಲಿರುವ ಡಾ.ಎ.ವಿ.ಬಾಳಿಗ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ, ಹಾವೇರಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯು ದೇವಗಿರಿ ಸರಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿದೆ.
ವಿಜಯನಗರ(ಹೊಸಪೇಟೆ) ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯು ಹೊಸಪೇಟೆಯಲ್ಲಿರುವ ಪ್ರೌಢದೇವರಾಯ ತಾಂತ್ರಿಕ ಸಂಸ್ಥೆಯಲ್ಲಿ, ಬಳ್ಳಾರಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯು ರಾವ್ ಬಹದ್ದೂರ್ ವೈ.ಮಹಾಬಲೇಶ್ವರಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ, ಚಿತ್ರದುರ್ಗ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯು ಸರಕಾರಿ ವಿಜ್ಞಾನ ಕಾಲೇಜಿನ ಹೊಸ ಕಟ್ಟಡದಲ್ಲಿ, ದಾವಣಗೆರೆ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯು ಶಿವಗಂಗೋತ್ರಿ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ನಡೆಯಲಿದೆ.
ಶಿವಮೊಗ್ಗ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯು ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ, ಉಡುಪಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯು ಬ್ರಹ್ಮಗಿರಿಯಲ್ಲಿ ಸಂತ ಸಿಸಿಲಿಯಾ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ, ಚಿಕ್ಕಮಗಳೂರು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯು ಇಂದವಾರ ದೊಡ್ಡ ಸಿದ್ದಲಿಂಗೇಗೌಡ ಸರಕಾರಿ ಕಾಲೇಜಿನಲ್ಲಿ, ತುಮಕೂರು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯು ಸರಕಾರಿ ಪಾಲಿಟೆಕ್ನಿಕ್ ಕಾಲೇಜು, ತುಮಕೂರು ವಿವಿಯ ವಿಜ್ಞಾನ ಕಾಲೇಜು ಹಾಗೂ ಕಲಾ ಕಾಲೇಜಿನಲ್ಲಿ ನಡೆಯಲಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯು ಚಿಕ್ಕಬಳ್ಳಾಪುರದ ಎಂ.ಜಿ.ರಸ್ತೆಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಕೋಲಾರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯು ಕೋಲಾರದ ಸರಕಾರಿ ಬಾಲಕರ ಪ್ರಥಮ ದರ್ಜೆ ಕಾಲೇಜಿನಲ್ಲಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯು ದೇವನಹಳ್ಳಿ ಪಟ್ಟಣದ ಪ್ರಸನ್ನ ಹಳ್ಳಿ ಆಕಾಶ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ನಡೆಯಲಿದೆ.
ಮಂಡ್ಯ ಜಿಲ್ಲೆಯ ಕ್ಷೇತ್ರಗಳ ಮತಗಳ ಎಣಿಕೆಯು ಮಂಡ್ಯ ವಿವಿಯಲ್ಲಿ, ಹಾಸನ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯು ಡೈರಿ ಸರ್ಕಲ್‍ನಲ್ಲಿರುವ ಸರಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯು ಸುರತ್ಕಲ್‍ನ ನ್ಯಾಷನಲ್ ಇನ್ಸ್‍ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ, ಕೊಡಗು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯು ಸಂತ ಜೋಸೆಫ್ ಕಾನ್ವೆಂಟ್‍ನಲ್ಲಿ, ಮೈಸೂರು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯು ಸರಕಾರಿ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ಹಾಗೂ ಚಾಮರಾಜನಗರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯು ಬೇಡರಪುರದ ಸರಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿದೆ.
.jpg)
.jpg)
.jpg)