Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ‘ಮನ್ ಕಿ ಬಾತ್’ ಕಾರ್ಯಕ್ರಮಕ್ಕೆ...

ಪ್ರಧಾನಿ ‘ಮನ್ ಕಿ ಬಾತ್’ ಕಾರ್ಯಕ್ರಮಕ್ಕೆ ಗೈರು: ಚಂಡಿಗಢದ ವೈದ್ಯಕೀಯ ವಿ.ವಿ.ಯ 36 ವಿದ್ಯಾರ್ಥಿಗಳ ವಿರುದ್ಧ ಕ್ರಮ

11 May 2023 11:53 PM IST
share
ಪ್ರಧಾನಿ ‘ಮನ್ ಕಿ ಬಾತ್’ ಕಾರ್ಯಕ್ರಮಕ್ಕೆ ಗೈರು: ಚಂಡಿಗಢದ ವೈದ್ಯಕೀಯ ವಿ.ವಿ.ಯ 36 ವಿದ್ಯಾರ್ಥಿಗಳ ವಿರುದ್ಧ ಕ್ರಮ

ಚಂಡಿಗಢ, ಮೇ. 11: ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕಿ ಬಾತ್’ನ 100ನೇ ಸಂಚಿಕೆಯಲ್ಲಿ ಭಾಗವಹಿಸಿದ ಹಿನ್ನೆಲೆಯಲ್ಲಿ ಚಂಡಿಗಢದ ಪೋಸ್ಟ್‌ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಶನ್ ಆ್ಯಂಡ್ ರಿಸರ್ಚ್ (ಪಿಜಿಐಎಂಇಆರ್) ನ 36 ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಪ್ರಧಾನಿ ಅವರ ‘ಮನ್ ಕಿ ಬಾತ್’ ಕಾರ್ಯಕ್ರಮಕ್ಕೆ ಗೈರಾದ ಹಿನ್ನಲೆಯಲ್ಲಿ ಈ ವಿಶ್ವವಿದ್ಯಾನಿಲಯದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಎಜುಕೇಶನ್‌ನ ವಿದ್ಯಾರ್ಥಿಗಳಿಗೆ ತಮ್ಮ ಹಾಸ್ಟೆಲ್‌ನಿಂದ 7 ದಿನಗಳ ಕಾಲ ಹೊರಗೆ ಹೋಗದಂತೆ ನಿರ್ಬಂಧ ವಿಧಿಸಲಾಗಿದೆ.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಎಜುಕೇಶನ್‌ನ ಪ್ರಾಂಶುಪಾಲ ಡಾ. ಸುಖ್‌ಪಾಲ್ ಕೌರ್ ಅವರು ಮೊದಲ ವರ್ಷದ 28 ವಿದ್ಯಾರ್ಥಿಗಳು ಹಾಗೂ ತೃತೀಯ ವರ್ಷದ 8 ವಿದ್ಯಾರ್ಥಿಗಳಿಗೆ ಮೇ 3ರಂದು ಆದೇಶ ಜಾರಿಗೊಳಿಸಿದ್ದಾರೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ. 

‘ಮನ್‌ಕಿ ಬಾತ್’ನಲ್ಲಿ ಪಾಲ್ಗೊಳ್ಳುವುದು ಕಡ್ಡಾಯ ಎಂದು ಸೂಚಿಸಲಾಗಿತ್ತು. ಆದರೂ ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಕೌರ್ ಅವರು ಆದೇಶದಲ್ಲಿ ಹೇಳಿದ್ದಾರೆ. ‘‘ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿ ಎಂದು ನಾನು ವಿದ್ಯಾರ್ಥಿಗಳಿಗೆ ಪದೇ ಪದೇ ಹೇಳಿದೆ. ಆದರೆ, ಅವರು ನನ್ನ ಮಾತಿಗೆ ಯಾವುದೇ ಬೆಲೆ ನೀಡಲಿಲ್ಲ’’ ಎಂದು ಹಾಸ್ಟೆಲ್ ವಾರ್ಡನ್ ಹೇಳಿರುವುದಾಗಿ ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ವಿಭಾಗ ಆಯೋಜಿಸುವ ಹಲವು ಅತಿಥಿ ಉಪನ್ಯಾಸದಲ್ಲಿ ವಿದ್ಯಾರ್ಥಿಗಳು ಪಾಲ್ಗೊಲ್ಳುವ ಅಗತ್ಯತೆ ಇರುವುದರಿಂದ ಶಿಸ್ತು ಕಾಪಾಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೌರ್ ಅವರು ಹೇಳಿದ್ದಾರೆ. ಪ್ರಧಾನಿ ಮಂತ್ರಿ ಅವರ ‘‘ಮನ್ ಕಿ ಬಾತ್’’ನಲ್ಲಿ ಪಾಲ್ಗೊಳ್ಳಲು ವಿಫಲವಾಗಿರುವುದಕ್ಕೆ ಈ ಕ್ರಮಕೈಗೊಳ್ಳಲಾಗಿದೆ ಎಂಬುದನ್ನು ಅವರು ನಿರಾಕರಿಸಿದ್ದಾರೆ ಎಂದು ‘‘ದಿ ಇಂಡಿಯನ್ ಎಕ್ಸ್‌ಪ್ರೆಸ್’’ ವರದಿ ಮಾಡಿದೆ.

‘‘ನಾನು ಈ ಎಲ್ಲಾ ವಿದ್ಯಾರ್ಥಿಗಳಿಗೆ ಉತ್ತರದಾಯಿ. ನಿರ್ದೇಶನವನ್ನು ಅನುಸರಿಸದೇ ಇದ್ದರೆ ಅವರನ್ನು ದಂಡಿಸುವ ಅಗತ್ಯತೆ ಇದೆ’’ ಎಂದು ‘‘ಹಿಂದೂಸ್ತಾನ್ ಟೈಮ್ಸ್’’ಗೆ ಅವರು ತಿಳಿಸಿದ್ದಾರೆ.

share
Next Story
X